AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ 2’ ಅಲ್ಲ, ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಲಿದ್ದಾರೆ ಆರ್​. ಚಂದ್ರು

ಶಿವರಾಜ್‌ಕುಮಾರ್ ಅವರು ಬಿಡುವಿಲ್ಲದ ನಟರಾಗಿದ್ದು, ಕನ್ನಡ ಹಾಗೂ ಪರಭಾಷೆಗಳಲ್ಲಿ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಆರ್. ಚಂದ್ರು ನಿರ್ದೇಶನದ ಹೊಸ ಚಿತ್ರಕ್ಕೆ ಸಹಿ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದ್ದಾರೆ. ಕಬ್ಜ ಬಳಿಕ ಚಂದ್ರು ನಿರ್ದೇಶನಕ್ಕೆ ಇಳಿದಿರಲಿಲ್ಲ. ಶಿವಣ್ಣನ ಇತರ ಮುಂಬರುವ ಚಿತ್ರಗಳಾದ ಪೆದ್ದಿ, ಜೈಲರ್ 2, ಗುಮ್ಮಡಿ ನರಸಯ್ಯ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

‘ಕಬ್ಜ 2’ ಅಲ್ಲ, ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಲಿದ್ದಾರೆ ಆರ್​. ಚಂದ್ರು
ಶಿವಣ್ಣ-ಚಂದ್ರು
ರಾಜೇಶ್ ದುಗ್ಗುಮನೆ
|

Updated on: May 28, 2026 | 2:57 PM

Share

ಶಿವರಾಜ್​ಕುಮಾರ್ ಅವರು (Shivarajkumar) ಕನ್ನಡದ ಬ್ಯುಸಿ ಹೀರೋಗಳಲ್ಲಿ ಒಬ್ಬರು. ಅವರು ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಬ್ಯುಸಿ ಆಗಿದ್ದಾರೆ. ಈಗ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಇದಕ್ಕೆ ಈಗ ಹೊಸ ಸೇರ್ಪಡೆಯೊಂದು ಆಗುತ್ತಿದೆ. ಆರ್​. ಚಂದ್ರು ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ವಿಷಯ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಶಿವರಾಜ್​​ಕುಮಾರ್ ಹಾಗೂ ಆರ್​​. ಚಂದ್ರು ಬಾಂಧವ್ಯ ಹಳೆಯದು. 2010ರಲ್ಲಿ ರಿಲೀಸ್ ಆದ ಶಿವರಾಜ್​​ಕುಮಾರ್ ನಟನೆಯ ‘ಮೈಲಾರಿ’ ಚಿತ್ರವನ್ನು ಚಂದ್ರು ಅವರೇ ನಿರ್ದೇಶನ ಮಾಡಿದ್ದರು. 2023ರಲ್ಲಿ ‘ಕಬ್ಜ’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಬಣ್ಣ ಹಚ್ಚಿದ್ದರು. ಈಗ ಹೊಸ ಕಥೆಯೊಂದಿಗೆ ಶಿವಣ್ಣ ಅವರನ್ನು ಚಂದ್ರು ಅಪ್ರೋಚ್ ಮಾಡಿದ್ದಾರೆ ಎಂದು ‘ಸಿನಿಮಾ ಎಕ್ಸ್​​​ಪ್ರೆಸ್’ ವರದಿ ಮಾಡಿದೆ.

ರಾಮ್ ಚರಣ್ ನಟನೆಯ ತೆಲುಗಿನ‘ಪೆದ್ದಿ’ ಸಿನಿಮಾ ಜೂನ್ 4ರಂದು ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಶಿವಣ್ಣ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಜೈಲರ್ 2’ ಚಿತ್ರದಲ್ಲೂ ಶಿವಣ್ಣ ನಟಿಸುತ್ತಿದ್ದಾರೆ. ‘ಗುಮ್ಮಡಿ ನರಸಯ್ಯ’, ‘ಡ್ಯಾಡ್’, ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾಗಳು ಶಿವರಾಜ್​​ಕುಮಾರ್ ಬಳಿ ಇವೆ. ಇದರ ಜೊತೆಗೆ ಈಗ ಹೊಸದೊಂದು ಸೇರ್ಪಡೆ ಆಗಿದೆ. ಆರ್ ಚಂದ್ರು ನಿರ್ದೇಶನದ ಹೊಸ ಸಿನಿಮಾಗೆ ಇನ್ನಷ್ಟೇ ಟೈಟಲ್ ಫೈನಲ್ ಆಗಬೇಕಿದೆ.

‘ಕಬ್ಜ’ ಬಳಿಕ ಚಂದ್ರು ಅವರು ನಿರ್ದೇಶನಕ್ಕೆ ಇಳಿದಿಲ್ಲ. ಕಳೆದ ಕೆಲ ವರ್ಷಗಳಿಂದ ಅವರು ಕೆಲವು ಕಥೆಗಳ ಮೇಲೆ ಕೆಲಸ ಮಾಡುತ್ತಿದ್ದಾರೆ. ಶಿವಣ್ಣ ಕೈಯಲ್ಲೂ ಅನೇಕ ಚಿತ್ರಗಳಿದ್ದು, ಎಲ್ಲವನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಇಲ್ಲಿದೆ ಮೇಕಿಂಗ್ ವಿಡಿಯೋ

ಶಿವಣ್ಣ ಅವರು ಕನ್ನಡದ ಜೊತೆಗೆ ಪರಭಾಷೆಯಲ್ಲೂ ಶೂಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ, ಬೇರೆ ರಾಜ್ಯಗಳಿಗೆ ತೆರಳಿ ಅವರು ಶೂಟ್ ಮಾಡಬೇಕಾದ ಪರಿಸ್ಥಿತಿ ಎದುರಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ