AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ’ಯೂಟರ್ನ್’ ಬೆಡಗಿ ಶ್ರದ್ದಾ ಶ್ರೀನಾಥ್, ತೆಲುಗು ಸ್ಟಾರ್ ನಟನಿಗೆ ನಾಯಕಿ

Shraddha Srinath: ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ಪ್ಯಾನ್ ಇಂಡಿಯಾ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ. ತೆಲುಗಿನ ಸ್ಟಾರ್ ನಟನೊಟ್ಟಿಗೆ ಶ್ರದ್ಧಾ ನಟಿಸುತ್ತಿದ್ದಾರೆ.

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ’ಯೂಟರ್ನ್’ ಬೆಡಗಿ ಶ್ರದ್ದಾ ಶ್ರೀನಾಥ್, ತೆಲುಗು ಸ್ಟಾರ್ ನಟನಿಗೆ ನಾಯಕಿ
ಶ್ರದ್ಧಾ ಶ್ರೀನಾಥ್
ಮಂಜುನಾಥ ಸಿ.
|

Updated on: Apr 15, 2023 | 6:33 PM

Share

ಕನ್ನಡದ ನಟರು ಪ್ಯಾನ್ ಇಂಡಿಯಾ (Pan India) ಸ್ಟಾರ್​ಗಳಾಗಿ ಮಿಂಚುತ್ತಿರುವ ಸಮಯದಲ್ಲಿಯೇ ನಟಿಯರು ಸಹ ಇದೇ ಹಾದಿಯಲ್ಲಿ ಹೆಜ್ಜೆ ಇಟ್ಟಿದ್ದಾರೆ. ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ನಟಿಯಾಗಿದ್ದಾರಾದರೂ ಅವರು ಕನ್ನಡ ಚಿತ್ರರಂಗದಿಂದ ದೂರವೇ ಉಳಿದಿದ್ದಾರೆ. ಆದರೆ ನಟಿಯರಾದ ಶ್ರೀಲೀಲಾ ಇನ್ನಿತರೆ ಕನ್ನಡದ ನಟಿಯರು ವಿವಿಧ ಭಾಷೆಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ (Shraddha Srinath), ಪ್ಯಾನ್ ಇಂಡಿಯಾ ಸಿನಿಮಾ ಒಂದರಲ್ಲಿ ನಾಯಕಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಯೂಟರ್ನ್ (U Turn) ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಶ್ರದ್ದಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ಧಾಗೆ ಹಲವು ಅವಕಾಶಗಳಿವೆ. ಇದರ ನಡುವೆ ಅವರೀಗ ಪ್ಯಾನ್ ಇಂಡಿಯಾ ಸಿನಿಮಾ ಒಂದಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತೆಲುಗಿನ ಸ್ಟಾರ್ ನಟರೊಬ್ಬರಿಗೆ ನಾಯಕಿಯಾಗಿ ಶ್ರದ್ಧಾ ನಟಿಸಲಿದ್ದಾರೆ.

ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ 75ನೇ ಸಿನಿಮಾ ‘ಸೈಂಧವ್’ ನಲ್ಲಿ ಶ್ರದ್ಧಾ ಶ್ರೀನಾಥ್ ನಾಯಕಿಯಾಗಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ಈ ಸಿನಿಮಾವನ್ನು ಶೈಲೇಶ್ ಕೋಲನು ನಿರ್ದೇಶಿಸುತ್ತಿದ್ದಾರೆ. ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ವೈಜಾಗ್ ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ. ನಿಹಾರಿಕಾ ಎಂಟರ್ ಟೈನ್ಮೆಂಟ್ ಅಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಗೆ ಕನ್ನಡತಿ ಶ್ರದ್ದಾ ಶ್ರೀನಾಥ್ ಎಂಟ್ರಿ ಕೊಟ್ಟಿದ್ದಾರೆ. ವಿಕ್ಟರಿಗೆ ವೆಂಕಟೇಶ್ ಗೆ ಜೋಡಿಯಾಗಿ ನಟಿಸ್ತಿರುವ ಮೂಗುತಿ ಸುಂದರಿಯ ಫಸ್ಟ್ ಲುಕ್ ಅನಾವರಣ ಮಾಡಲಾಗಿದೆ.

ಸೈಂಧವ್ ಸಿನಿಮಾದಲ್ಲಿ ಶ್ರದ್ದಾ ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಅವರ ಫಸ್ಟ್ ಲುಕ್ ನೋಡುಗರ ಗಮನಸೆಳೆಯುತ್ತಿದೆ. ಸೀರೆಯುಟ್ಟು ಹೋಮ್ಲಿ ಲುಕ್ ಕಾಣಿಸಿಕೊಂಡಿರುವ ಶ್ರದ್ದಾ, ಕೈಯಲ್ಲಿ ಟಿಫನ್ ಬಾಕ್ಸ್ ಹಿಡಿದು ಗಂಭೀರ ಆಲೋಚನೆಯಲ್ಲಿ ತೊಡಗಿದ್ದಾರೆ. ತೆಲುಗಿನ ಜೆರ್ಸಿ ಸಿನಿಮಾದಲ್ಲಿ ಅದ್ಭುತ ಅಭಿಯನದ ಪ್ರದರ್ಶಿಸಿದ್ದ ಶ್ರದ್ದಾ ಶ್ರೀನಾಥ್, ಸೈಂಧವ್ ಸಿನಿಮಾದಲ್ಲಿ ಮತ್ತೊಮ್ಮೆ ಎಲ್ಲರ ಗಮನಸೆಳೆಯಲಿದ್ದಾರೆ.

ಇದನ್ನೂ ಓದಿ: Milana Nagaraj: ‘ಡಿಯರ್​​ ವಿಕ್ರಮ್​’ ಹೇಗಿದೆ? ಸತೀಶ್​ ನೀನಾಸಂ, ಶ್ರದ್ಧಾ ಶ್ರೀನಾಥ್​ ನಟನೆಯ ಚಿತ್ರಕ್ಕೆ ಮಿಲನಾ ವಿಮರ್ಶೆ

ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಸಹ ಈ ಚಿತ್ರದ ಮೂಲಕ ತೆಲುಗು ಚಿತ್ರರಂಗ ಪ್ರವೇಶಿಸಿದ್ದಾರೆ. ಈ ಮೊದಲು ಅವರು ತಮಿಳಿನ ಸಿನಿಮಾ ಒಂದರಲ್ಲಿ ರಜನೀಕಾಂತ್ ಜೊತೆ ನಟಿಸಿದ್ದರು. ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರುವ ಸೈಂಧವ್ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಪಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ಇತರ ಪಾತ್ರವರ್ಗ ರಿವೀಲ್ ಮಾಡಲಿರುವ ಚಿತ್ರತಂಡ, ಸೈಂಧವ್ ಸಿನಿಮಾವನ್ನು ಡಿಸೆಂಬರ್ 22 ರಂದು ಕ್ರಿಸ್ಮಸ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಸೈಂಧವ್ ಸಿನಿಮಾದ ಹೊರತಾಗಿ ಶ್ರದ್ಧಾ ಶ್ರೀನಾಥ್, ಕನ್ನಡದ ರುದ್ರಪ್ರಯಾಗ, ತಮಿಳಿನ ಕಲಿಯುಗಂ, ಹಿಂದಿಯ ಲೆಟರ್ಸ್ ಟು ಮಿಸ್ಟರ್ ಖಾನ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ