ಕುಂಭಮೇಳಕ್ಕೆ ಹೋಗಿದ್ದೇ ತಪ್ಪಾಯ್ತು; ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಸಾವಿನ ನಿಜವಾದ ಕಾರಣ ಬಯಲು

ಕುಂಭಮೇಳಕ್ಕೆ ಹೋಗಿದ್ದ ಅನೇಕರಿಗೆ ಕೊರೊನಾ ವೈರಸ್​ ತಗುಲಿತ್ತು. ಶ್ರವಣ್​ ರಾಥೋಡ್​ ಹಾಗೂ ಅವರ ಪತ್ನಿ ಕೂಡ ಕುಂಭಮೇಳಕ್ಕೆ ತೆರಳಿದ್ದರಂತೆ. ಕುಂಭಮೇಳ ಮುಗಿಸಿ ಬಂದ ಬೆನ್ನಲ್ಲೇ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.

ಕುಂಭಮೇಳಕ್ಕೆ ಹೋಗಿದ್ದೇ ತಪ್ಪಾಯ್ತು; ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಸಾವಿನ ನಿಜವಾದ ಕಾರಣ ಬಯಲು
ಶ್ರವಣ್​ ರಾಥೋಡ್​
Follow us
ರಾಜೇಶ್ ದುಗ್ಗುಮನೆ
|

Updated on: Apr 23, 2021 | 5:22 PM

ಕೊರೊನಾ ವೈರಸ್​ ಪಾಸಿಟಿವ್​ ಬಂದಿದ್ದ ಬಾಲಿವುಡ್​ನ ಜನಪ್ರಿಯ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ಗುರುವಾರ (ಏ.22) ಮೃತಪಟ್ಟಿದ್ದಾರೆ. ಕೊರೊನಾ ವೈರಸ್​ ಅಂಟಿದ ನಂತರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಅವರನ್ನು ಆಸ್ಪತ್ರೆಗೂ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸಿಲ್ಲ. ಕೊರೊನಾ ಬರುವುದಕ್ಕೂ ಮೊದಲು ಅವರು ಕುಂಭಮೇಳಕ್ಕೆ ತೆರಳಿದ್ದರು ಎನ್ನುವ ವಿಚಾರ ಈಗ ಗೊತ್ತಾಗಿದೆ.

ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ಕುಂಭಮೇಳ ಆರಂಭವಾಗಿತ್ತು. ಲಕ್ಷಾಂತರ ಜನರು ಇದರಲ್ಲಿ ಪಾಲ್ಗೊಂಡು ಪುಣ್ಯಸ್ನಾನ ಮಾಡಿದ್ದರು. ಕೊರೊನಾ ಹರಡುತ್ತಿರುವ ಮಧ್ಯೆಯೂ ಲಕ್ಷಾಂತರ ಜನ ಸೇರಿದ್ದು ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ಕುಂಭಮೇಳವನ್ನು ಸಾಂಕೇತಿಕವಾಗಿ ಮಾಡುವಂತೆ ಕೋರಿದ್ದರು. ಈ ಮನವಿಗೆ ಬೆಲೆಕೊಟ್ಟು ಕುಂಭಮೇಳವನ್ನು ಸಾಂಕೇತಿಕವಾಗಿ ನೆರವೇರಿಸಲು ನಿರ್ಧರಿಸಲಾಯಿತು.

ಕುಂಭಮೇಳಕ್ಕೆ ಹೋಗಿದ್ದ ಅನೇಕರಿಗೆ ಕೊರೊನಾ ವೈರಸ್​ ತಗುಲಿತ್ತು. ಶ್ರವಣ್​ ರಾಥೋಡ್​ ಹಾಗೂ ಅವರ ಪತ್ನಿ ಕೂಡ ಕುಂಭಮೇಳಕ್ಕೆ ತೆರಳಿದ್ದರಂತೆ. ಕುಂಭಮೇಳ ಮುಗಿಸಿ ಬಂದ ಬೆನ್ನಲ್ಲೇ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಕೊರೊನಾ ಲಕ್ಷಣ ಇದ್ದಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಈ ವೇಳೆ ಅವರಿಗೆ ಕೊರೊನಾ ಇರುವ ವಿಚಾರ ಅಧಿಕೃತವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.

ಸಂಗೀತ ನಿರ್ದೇಶಕ ನದೀಮ್​ ಸೈಫಿ ಜೊತೆ ಸೇರಿ ಶ್ರವಣ್ ಅವರು ಅನೇಕ ಸೂಪರ್​ ಹಿಟ್​ ಗೀತೆಗಳನ್ನು ನೀಡಿದ್ದರು. ಈ ಜೋಡಿ ನದೀಮ್​-ಶ್ರವಣ್​ ಎಂದೇ ಫೇಮಸ್​ ಆಗಿತ್ತು. 1975ರಿಂದಲೇ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರಿಗೆ 1990ರ ದಶಕದಲ್ಲಿ ಹೆಚ್ಚು ಯಶಸ್ಸು ಸಿಕ್ಕಿತು. ಆಶಿಕಿ, ಸಾಜನ್​, ಹಮ್​ ಹೈ ರಾಹಿ ಪ್ಯಾರ್​ ಕಿ, ಪರ್ದೇಸ್​, ರಾಜಾ ಹಿಂದೂಸ್ತಾನಿ ಸಿನಿಮಾಗಳ ಮೂಲಕ ನದೀಮ್​ ಶ್ರವಣ್​ ಅಪಾರ ಜನಪ್ರಿಯತೆ ಪಡೆದುಕೊಂಡಿದ್ದರು.

ಇದನ್ನೂ ಓದಿ: Shravan Rathod: ಖ್ಯಾತ ಸಂಗೀತ ನಿರ್ದೇಶಕ ಶ್ರವಣ್​ ರಾಥೋಡ್​ ಕೊರೊನಾ ವೈರಸ್​ನಿಂದ ನಿಧನ; ಚಿತ್ರರಂಗಕ್ಕೆ ಆಘಾತ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ