AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವ ಬಾಲಕಿ ಈಗ ಸ್ಟಾರ್ ಸಿಂಗರ್; ಯಾರೆಂದು ಗುರುತಿಸುತ್ತೀರಾ?

ಈ ಫೋಟೋದಲ್ಲಿರುವ ಬಾಲಕಿ ಈಗ ಸ್ಟಾರ್ ಸಿಂಗರ್. ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ, ತಮಿಳು ಸೇರಿ ಭಾರತದ ಬಹುತೇಕ ಎಲ್ಲಾ ಭಾಷೆಗಳಲ್ಲಿ ಹಾಡಿದ್ದಾರೆ. ಚಿಕ್ಕವಯಸ್ಸಿನಲ್ಲೇ ಸಂಗೀತ ಲೋಕಕ್ಕೆ ಕಾಲಿಟ್ಟು ಸಂಗೀತ ಪ್ರಿಯರ ಮನ ಗೆದ್ದರು. ನೂರಾರು ಹಾಡುಗಳನ್ನು ಅವರು ಹಾಡಿದ್ದಾರೆ. ಸುಮಧುರ ಕಂಠದಿಂದ ಕೇಳುಗರ ಮನದಲ್ಲಿ ಭಾವನೆಗಳನ್ನು ಉಕ್ಕಿಸುತ್ತಾರೆ.

ಈ ಫೋಟೋದಲ್ಲಿರುವ ಬಾಲಕಿ ಈಗ ಸ್ಟಾರ್ ಸಿಂಗರ್; ಯಾರೆಂದು ಗುರುತಿಸುತ್ತೀರಾ?
ಈ ಫೋಟೋದಲ್ಲಿರೋವರನ್ನು ಗುರುತಿಸಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Mar 12, 2024 | 1:01 PM

Share

ಈ ಫೋಟೋದಲ್ಲಿರುವ ಪುಟ್ಟ ಬಾಲಕಿ ಈಗ ಸ್ಟಾರ್ ಸಿಂಗರ್. ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ, ತಮಿಳು ಸೇರಿ ಭಾರತದ ಬಹುತೇಕ ಎಲ್ಲಾ ಭಾಷೆಗಳಲ್ಲಿ ಅವರು ಹಾಡಿದ್ದಾರೆ. ಚಿಕ್ಕವಯಸ್ಸಿನಲ್ಲೇ ಸಂಗೀತ ಲೋಕಕ್ಕೆ ಕಾಲಿಟ್ಟು ಸಂಗೀತ ಪ್ರಿಯರ ಮನ ಗೆದ್ದರು. ನೂರಾರು ಹಾಡುಗಳನ್ನು ಅವರು ಹಾಡಿದ್ದಾರೆ. ಸುಮಧುರ ಕಂಠದಿಂದ ಕೇಳುಗರ ಮನದಲ್ಲಿ ಭಾವನೆಗಳನ್ನು ಉಕ್ಕಿಸುತ್ತಾರೆ. ಅವರ ಧ್ವನಿಗೆ ಮಾರು ಹೋಗದವರೇ ಇಲ್ಲ. ಅವರು ಬೇರಾರೂ ಅಲ್ಲ ನಟಿ ಶ್ರೇಯಾ ಘೋಷಾಲ್ (Shreya Ghoshal). ಅವರ ಬಾಲ್ಯದ ಫೋಟೋ ವೈರಲ್ ಆಗಿ ಗಮನ ಸೆಳೆಯುತ್ತಿದೆ. ಶ್ರೇಯಾ ಘೋಷಾಲ್ ಅವರಿ​ಗೆ ಇಂದು (ಮಾರ್ಚ್ 12) ಹುಟ್ಟುಹಬ್ಬದ ಸಂಭ್ರಮ. ಎರಡು ದಶಕಗಳಿಂದ ಅವರು ತಮ್ಮ ಹಾಡಿನ ಮೂಲಕ ಕೇಳುಗರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಅವರು ತಮ್ಮ ಸುಮಧುರ ಕಂಠದಿಂದ ಪ್ರಪಂಚದಾದ್ಯಂತದ ಅನೇಕ ಹೃದಯಗಳನ್ನು ಸ್ಪರ್ಶಿಸಿದ್ದಾರೆ. 1984ರ ಮಾರ್ಚ್ 12ರಂದು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅವರು ಜನಿಸಿದರು. ಅವರ ತಾಯಿ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವೀಧರೆ. ಶ್ರೇಯಾ ಘೋಷಾಲ್ ತಮ್ಮ ನಾಲ್ಕನೇ ವಯಸ್ಸಿಗೆ ತಾಯಿಯಿಂದ ಸಂಗೀತವನ್ನು ಕಲಿಯಲು ಆರಂಭಿಸಿದರು. ಚಿಕ್ಕ ವಯಸ್ಸಿನಲ್ಲೇ ಹಾರ್ಮೋನಿಯಂ ಕಲಿತರು ಅನ್ನೋದು ವಿಶೇಷ.

12ನೇ ವಯಸ್ಸಿಗೆ ಶ್ರೇಯಾ ಅವರು ಹಿಂದಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದರು. ಇಲ್ಲಿಯವರೆಗೆ ಅವರು 20ಕ್ಕೂ ಹೆಚ್ಚು ಭಾಷೆಗಳಲ್ಲಿ 2400ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅನ್ನೋದು ವಿಶೇಷ. ಕನ್ನಡದಲ್ಲಿ ಅವರು ಹಾಡಿದ, ‘ಹೂವಿನ ಬಾಣದಂತೆ..’, ‘ಹೂವಿನ ಸಂತೆಗೆ..’, ‘ಮೊಗ್ಗಿನ ಮನಸಲಿ..’, ‘ಪೋಲಿ ಇವನು..’, ‘ಉಲ್ಲಾಸದ ಹೂಮಳೆ..’, ‘ಧ್ಯಾನಿಸಿ ಕಾಯುವೆನು ನಿನ್ನ..’ ಸೇರಿ ಅನೇಕರ ಸೂಪರ್ ಹಿಟ್ ಹಾಡುಗಳಿಗೆ ಧ್ವನಿ ಆಗಿದ್ದಾರೆ. ಅವರು ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಭಾಷೆಗಳಲ್ಲಿ ತಮ್ಮ ಹಾಡುಗಳಿಗಾಗಿ ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರಿಗೆ ಐದು ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ.

ಇದನ್ನೂ ಓದಿ: ಶ್ರೇಯಾ ಘೋಷಾಲ್ ಜನ್ಮದಿನ; ನಾಲ್ಕನೇ ವರ್ಷಕ್ಕೆ ಸಂಗೀತ ಲೋಕದ ಜೊತೆ ನಂಟು ಬೆಳೆಸಿಕೊಂಡಿದ್ದ ಗಾಯಕಿ

ಲಂಡನ್‌ನ ಮೇಡಮ್ ಟುಸ್ಸಾಡ್ಸ್‌ನಲ್ಲಿ ಶ್ರೇಯಾ ಅವರ ಮೇಣದ ಪ್ರತಿಮೆ ಇದೆ. 2015ರಲ್ಲಿ ಬಾಲ್ಯದ ಗೆಳೆಯ ಶಿಲಾದಿತ್ಯ ಮುಖೋಪಾಧ್ಯಾಯ ಅವರನ್ನು ಶ್ರೇಯಾ ವಿವಾಹವಾದರು. ಅವರಿಗೆ ಒಬ್ಬ ಮಗನಿದ್ದಾನೆ. ಈಗ ಬರ್ತ್​ಡೇ ಸಂದರ್ಭದಲ್ಲಿ ಶ್ರೇಯಾ ಘೋಷಾಲ್ ಅವರ ಬಾಲ್ಯದ ಫೋಟೋಗಳನ್ನು ವೈರಲ್ ಮಾಡಲಾಗುತ್ತಿದೆ. ಶ್ರೇಯಾ ಈಗ ಸಖತ್ ಗ್ಲಾಮರಸ್ ಆಗಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:01 pm, Tue, 12 March 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ