AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕಪ್​ನಲ್ಲಿ ಕೊನೆ ಆಯ್ತು ಸಾರಾ ಖಾನ್​-ಶುಭ್​ಮನ್ ಗಿಲ್​ ಸಂಬಂಧ? ಇಲ್ಲಿದೆ ಸಾಕ್ಷಿ

Sara Ali Khan: ಸೆಲೆಬ್ರಿಟಿಗಳ ಬ್ರೇಕಪ್ ಸುಳಿವು ಮೊದಲು ಸಿಗೋದು ಸೋಶಿಯಲ್ ಮೀಡಿಯಾದಲ್ಲೇ. ಈಗ ಸಾರಾ ಅಲಿ ಖಾನ್​ ವಿಚಾರದಲ್ಲೂ ಹಾಗೆಯೇ ಆಗಿದೆ.

ಬ್ರೇಕಪ್​ನಲ್ಲಿ ಕೊನೆ ಆಯ್ತು ಸಾರಾ ಖಾನ್​-ಶುಭ್​ಮನ್ ಗಿಲ್​ ಸಂಬಂಧ? ಇಲ್ಲಿದೆ ಸಾಕ್ಷಿ
ಶುಬ್​ಮನ್​ ಗಿಲ್-ಸಾರಾ ಅಲಿ ಖಾನ್
ರಾಜೇಶ್ ದುಗ್ಗುಮನೆ
|

Updated on: May 27, 2023 | 11:08 AM

Share

ಟೀಂ ಇಂಡಿಯಾ ಆಟಗಾರ ಶುಭ್​​ಮನ್ ಗಿಲ್ (Shubman Gill) ಹಾಗೂ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಹೋಟೆಲ್ ಒಂದರಲ್ಲಿ ಇಬ್ಬರೂ ಭೇಟಿ ಆಗಿದ್ದು ಈ ಸುದ್ದಿ ಹುಟ್ಟಲು ಪ್ರಮುಖ ಕಾರಣ. ಇದಾದ ಬಳಿಕ ವಿಮಾನ ನಿಲ್ದಾಣದಲ್ಲಿ ಇಬ್ಬರೂ ಭೇಟಿ ಆಗಿ ಗಂಟೆಗಟ್ಟಲೆ ಹರಟೆ ಹೊಡೆದಿದ್ದಾರೆ ಎನ್ನುವ ಸುದ್ದಿಯೂ ಇದೆ. ಈಗ ಇವರ ಸಂಬಂಧ ಕೊನೆಯಾಗಿದೆ ಎಂದು ವರದಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ (Instagram) ಇಬ್ಬರೂ ಅನ್​​ಫಾಲೋ ಮಾಡಿಕೊಂಡಿದ್ದು, ಇದು ಸಾಕಷ್ಟು ಅನುಮಾನ ಮೂಡಿಸಿದೆ. ಇವರು ನಿಜಕ್ಕೂ ಡೇಟಿಂಗ್ ಮಾಡುತ್ತಿದ್ದರಾ ಅಥವಾ ಇಲ್ಲವಾ ಎನ್ನುವ ಪ್ರಶ್ನೆಯೂ ಮೂಡಿದೆ.

ಇದು ಸೋಶಿಯಲ್ ಮೀಡಿಯಾ ಯುಗ. ಸೆಲೆಬ್ರಿಟಿಗಳ ವಿಚ್ಛೇದನದ ಸುಳಿವು ಮೊದಲು ಸಿಗೋದು ಸೋಶಿಯಲ್ ಮೀಡಿಯಾದಲ್ಲೇ. ಸಂಗಾತಿಯ ಜೊತೆಗಿನ ಫೋಟೋ ಡಿಲೀಟ್ ಮಾಡಿದರೆ, ಒಬ್ಬರನ್ನೊಬ್ಬರು ಅನ್​ಫಾಲೋ ಮಾಡಿದರೆ ಬ್ರೇಕಪ್/ವಿಚ್ಛೇದನದ ಸುಳಿವು ಸಿಕ್ಕಿ ಬಿಡುತ್ತದೆ. ಈಗ ಸಾರಾ ಅಲಿ ಖಾನ್​ ವಿಚಾರದಲ್ಲೂ ಹಾಗೆಯೇ ಆಗಿದೆ. ಇಬ್ಬರೂ ಇನ್​ಸ್ಟಾಗ್ರಾಮ್​ನಲ್ಲಿ ಪರಸ್ಪರ ಹಿಂಬಾಲಿಸಿಕೊಳ್ಳುತ್ತಿಲ್ಲ. ಇದು ಸಾಕಷ್ಟು ಅನುಮಾನ ಮೂಡಿಸಿದೆ.

ಶುಭ್​​ಮನ್ ಗಿಲ್ ಹಾಗೂ ಸಚಿನ್ ತೆಂಡೂಲ್ಕರ್ ಮಗಳು ಸಾರಾ ತೆಂಡೂಲ್ಕರ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಮಾತಿತ್ತು. ಹೀಗಿರುವಾಗಲೇ ಸಾರಾ ಅಲಿ ಖಾನ್ ಜೊತೆ ಕಾಣಿಸಿಕೊಂಡರು ಶುಭ್​​ಮನ್. ಇಬ್ಬರ ಮಧ್ಯೆ ಪ್ರೀತಿ ಹುಟ್ಟಿದೆ ಎನ್ನುವ ಮಾತು ಕೇಳಿ ಬಂತು. ಆದರೆ, ಇವರ ಸಂಬಂಧ ಕೆಲವೇ ತಿಂಗಳಲ್ಲಿ ಕೊನೆಯಾಗಿದೆ. ಸಾರಾ ಅಲಿ ಖಾನ್ ಅಭಿಮಾನಿಗಳಿಗೆ ಇದು ಬೇಸರದ ಸುದ್ದಿ.

ಇದನ್ನೂ ಓದಿ: ಕಾನ್ ಚಿತ್ರೋತ್ಸವದಲ್ಲಿ ವಿವಿಧ ರೀತಿಯ ಡ್ರೆಸ್ ತೊಟ್ಟು ಮಿಂಚಿದ ಸಾರಾ ಅಲಿ ಖಾನ್

ಸಾರಾ ಅಲಿ ಖಾನ್ ಈಗತಾನೇ ಬಾಲಿವುಡ್​ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ. ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಇತ್ತೀಚೆಗೆ ಅವರು ಫ್ರಾನ್ಸ್​ನಲ್ಲಿ ನಡೆದ ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿ ಗಮನ ಸೆಳೆದಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ