‘ಲ್ಯಾಂಡ್ಲಾರ್ಡ್’ ಸಿನಿಮಾ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ; ದುನಿಯಾ ವಿಜಿ ಚಿತ್ರಕ್ಕೆ ಸಿಎಂ ಬೆಂಬಲ
ಸಿದ್ದರಾಮಯ್ಯ ಅವರು ಸದಾ ಕೆಳ ಹಂತದ ಜನರ ಬೆಂಬಲಕ್ಕಾಗಿ ಶ್ರಮಿಸುತ್ತಾ ಬರುತ್ತಿದ್ದಾರೆ. ಈಗ ಅವರು ದುನಿಯಾ ವಿಜಯ್ ಅವರ ‘ಲ್ಯಾಂಡ್ಲಾರ್ಡ್’ ಸಿನಿಮಾಗೆ ಬೆಂಬಲ ಸೂಚಿಸಿದ್ದಾರೆ. ಈ ಚಿತ್ರವನ್ನು ನೋಡೋದಾಗಿ ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.
ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ಲಾರ್ಡ್’ ಸಿನಿಮಾ ನೋಡೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದುನಿಯಾ ವಿಜಯ್ ಹಾಗೂ ಸಿನಿಮಾ ತಂಡ ಸಿಎಂನ ಭೇಟಿ ಮಾಡಿ ಆಮಂತ್ರಣ ನೀಡಿದ್ದಾರೆ. ಶೋಷಣೆಗೆ ಒಳಗಾದ ಜನರ ಕರುಣಾಜನಕ ಕಥೆಯನ್ನು ಈ ಸಿನಿಮಾ ಹೊಂದಿದೆ. ಚಿತ್ರಕ್ಕೆ ಸಿಎಂ ಶುಭಾಶಯ ಕೋರಿದ್ದಾರೆ. ಅವರಿಗಾಗಿ ತಂಡ ವಿಶೇಷ ಶೋ ಹಮ್ಮಿಕೊಳ್ಳುವ ಸಾಧ್ಯತೆ ಇದೆ. ‘ಲ್ಯಾಂಡ್ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jan 24, 2026 12:05 PM

