AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್​’ ನಿರ್ದೇಶಕನಿಂದ ಮತ್ತೊಂದು ಮಲ್ಟಿ ಸ್ಟಾರರ್​ ಪ್ಲ್ಯಾನ್​; ಪ್ರಭಾಸ್ ಜತೆ ಹಿಂದಿ ಹೀರೋ

ಸಿದ್ದಾರ್ಥ್ ಆನಂದ್ ಅವರ ನಿರ್ದೇಶನದ ‘ವಾರ್​’ ಚಿತ್ರ ಹಿಟ್ ಆಯಿತು. ಈ ಚಿತ್ರ ಯಶಸ್ಸು ಕಂಡ ಬಳಿಕ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಸಿನಿಮಾ ಗೆದ್ದಿದೆ.

‘ಪಠಾಣ್​’ ನಿರ್ದೇಶಕನಿಂದ ಮತ್ತೊಂದು ಮಲ್ಟಿ ಸ್ಟಾರರ್​ ಪ್ಲ್ಯಾನ್​; ಪ್ರಭಾಸ್ ಜತೆ ಹಿಂದಿ ಹೀರೋ
ರಾಜೇಶ್ ದುಗ್ಗುಮನೆ
|

Updated on: Jan 30, 2023 | 11:08 AM

Share

‘ಪಠಾಣ್​’ ಸಿನಿಮಾ (Pathan Movie) ಸೂಪರ್ ಹಿಟ್ ಆಗಿದೆ. ಈ ಚಿತ್ರದಿಂದ ಶಾರುಖ್ ಖಾನ್ ಹಾಗೂ ಜಾನ್ ಅಬ್ರಾಹಂ ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಇವರ ವೃತ್ತಿಜೀವನದ ತೂಕ ಹೆಚ್ಚಿದೆ. ಈ ಚಿತ್ರದ ಮೂಲಕ ನಿರ್ದೇಶಕ ಸಿದ್ದಾರ್ಥ್ ಆನಂದ್ (Siddharth Anand) ಅವರು ಗೆದ್ದು ಬೀಗಿದ್ದಾರೆ. ಮಲ್ಟಿ ಸ್ಟಾರರ್ ಸಿನಿಮಾ ಮಾಡುವುದರಲ್ಲಿ ಸಿದ್ದಾರ್ಥ್​ ಎತ್ತಿದ ಕೈ. ಈಗ ಅವರ ಮುಂದಿನ ಸಿನಿಮಾ ಬಗ್ಗೆ ಜನರಿಗೆ ಕುತೂಹಲ ಇದೆ. ಅವರ ಮುಂದಿನ ಪ್ರಾಜೆಕ್ಟ್​​ನಲ್ಲೂ ಇಬ್ಬರು ಸ್ಟಾರ್ ಹೀರೋಗಳು ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಒಂದು ದೊಡ್ಡ ಹಿಟ್ ಕೊಟ್ಟ ನಂತರದಲ್ಲಿ ನಿರ್ದೇಶಕರ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗುತ್ತದೆ. ಸಿದ್ದಾರ್ಥ್ ಆನಂದ್ ಅವರ ನಿರ್ದೇಶನದ ‘ವಾರ್​’ ಚಿತ್ರ ಹಿಟ್ ಆಯಿತು. ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ಅವರು ಈ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರ ಯಶಸ್ಸು ಕಂಡ ಬಳಿಕ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಸಿನಿಮಾ ಗೆದ್ದಿದೆ. ಈಗ ಸಿದ್ದಾರ್ಥ್ ಆನಂದ್ ಮುಂದಿನ ಪ್ರಾಜೆಕ್ಟ್​​ನಲ್ಲಿ ಹೃತಿಕ್​ ರೋಷನ್ ಹಾಗೂ ಪ್ರಭಾಸ್ ನಟಿಸಲಿದ್ದಾರೆ ಎನ್ನಲಾಗಿದೆ.

ಪ್ರಭಾಸ್ ಮುಂದಿನ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಸಿನಿಮಾ ಬಂಡವಾಳ ಹೂಡುತ್ತಿದೆ ಅನ್ನೋದು ಇತ್ತೀಚೆಗೆ ರಿವೀಲ್ ಆಗಿತ್ತು. ಈ ಚಿತ್ರಕ್ಕೆ ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡಲಿದ್ದಾರೆ ಅನ್ನೋದು ಕೂಡ ಗೊತ್ತಾಗಿತ್ತು. ವಿಶೇಷ ಎಂದರೆ ಪ್ರಭಾಸ್ ಜತೆ ಹೃತಿಕ್ ಕೂಡ ನಟಿಸಲಿದ್ದಾರೆ. ಈ ಮೊದಲು ಹೃತಿಕ್ ರೋಷನ್ ಜತೆ ಸಿದ್ದಾರ್ಥ್ ಆನಂದ್ ಕೆಲಸ ಮಾಡಿದ್ದರು. ಈಗ ಹೃತಿಕ್​ ಜತೆ ಮತ್ತೊಮ್ಮೆ ಕೈ ಜೋಡಿಸಲು ಅವರು ರೆಡಿ ಆಗಿದ್ದಾರೆ.

ಇದನ್ನೂ ಓದಿ
Image
ಐದು ದಿನಕ್ಕೆ 500 ಕೋಟಿ ರೂಪಾಯಿ ಬಾಚಿದ ‘ಪಠಾಣ್​’; ಭಾರತದಲ್ಲಿ ಎಷ್ಟು ಕಲೆಕ್ಷನ್​?
Image
ಕಂಬ್ಯಾಕ್​ಗೆ ಶಾರುಖ್ ಖಾನ್ ತಂತ್ರವನ್ನೇ ಬಳಸಲಿದ್ದಾರೆ ಆಮಿರ್ ಖಾನ್? ಕಾಯಬೇಕು ಇನ್ನಷ್ಟು ವರ್ಷ
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

ಇದನ್ನೂ ಓದಿ: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​

ಸಿದ್ದಾರ್ಥ್ ಆನಂದ್ ಅವರು ಚಿತ್ರರಂಗದಲ್ಲಿ ಗೆಲ್ಲುವ ಕುದುರೆ ಆಗಿದ್ದಾರೆ. ಅವರ ನಿರ್ದೇಶನದ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿವೆ. ಈ ಕಾರಣಕ್ಕೆ ನಿರ್ಮಾಪಕರು ದೊಡ್ಡ ಮೊತ್ತದ ಹಣ ಹೂಡಲು ಮುಂದೆ ಬರುತ್ತಿದ್ದಾರೆ. ಈಗ ಪ್ರಭಾಸ್ ಜತೆ ಅವರು ಮಾಡಲಿರುವ ಸಿನಿಮಾ ಹಲವು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ