ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  

ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ. ನಾವು ಈ ರೀತಿ ಮಾಡಿಲ್ಲ. ಒಂದೊಮ್ಮೆ ನಮ್ಮ ಕಾರ್ಯಕರ್ತರು ಈ ರೀತಿ ಮಾಡಿದ್ದರೆ ನಾವು ಇದನ್ನು ಖಂಡಿಸುತ್ತೇವೆ ಎಂದು ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  
Follow us
|

Updated on: Apr 29, 2021 | 8:15 PM

ಕಾಲಿವುಡ್​ ನಟ ಸಿದ್ಧಾರ್ಥ್​ ಕೇಂದ್ರ ಸರ್ಕಾರವನ್ನು ಟೀಕಿಸಿದ್ದರು. ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ಧಾರ್ಥ್​ ಹೇಳಿದ್ದರು. ಇದಾದ ಬೆನ್ನಲ್ಲೇ ಸಿದ್ಧಾರ್ಥ್​ ಅವರ ಮೊಬೈಲ್​ ಸಂಖ್ಯೆ ಲೀಕ್​ ಮಾಡಲಾಗಿದೆ. ಅಲ್ಲದೆ, ಅವರಿಗೆ ಸಾಕಷ್ಟು ಕೊಲೆ ಬೆದರಿಕೆ ಕೂಡ ಬರುತ್ತಿದೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಮಿತಿ ಮೀರಿ ಹರಡುತ್ತಿದೆ. ನಿತ್ಯ ಸಾಕಷ್ಟು ಜನರು ಸಾಯುತ್ತಿದ್ದಾರೆ. ಅನೇಕರಿಗೆ ಬೆಡ್​ ಸಿಗುತ್ತಿಲ್ಲ. ಇದು ಕೂಡ ಹಲವರ ಸಾವಿಗೆ ಕಾರಣವಾಗುತ್ತಿದೆ. ಈ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಸಿದ್ಧಾರ್ಥ್​ ಹೇಳಿದ್ದರು. ಹೀಗಾಗಿ, ತಮಿಳು ನಾಡು ಬಿಜೆಪಿ ಘಟಕವು ತಮ್ಮ ​ ಮೊಬೈಲ್​ ಸಂಖ್ಯೆಯನ್ನು ಸೋರಿಕೆ ಮಾಡಿದೆ ಎಂಬುದು ಸಿದ್ಧಾರ್ಥ್​ ಆರೋಪ.

ಮೊಬೈಲ್​ ಸಂಖ್ಯೆ​ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಸಿದ್ಧಾರ್ಥ್​ ಟ್ವೀಟ್​ ಮಾಡಿದ್ದಾರೆ. ತಮಿಳುನಾಡು ಬಿಜೆಪಿ ಘಟಕ ನನ್ನ ಮೊಬೈಲ್​ ಸಂಖ್ಯೆಯನ್ನು ಹಂಚಿದೆ. ಕಳೆದ 24 ಗಂಟೆಗಳಲ್ಲಿ 500ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ. ಈ ಎಲ್ಲಾ ನಂಬರ್​ಗಳು ಬಿಜೆಪಿಗೆ ಸಂಬಂಧಿಸಿದ್ದಾಗಿವೆ. ನಾನು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಘಟಕಕ್ಕೆ ಸಂಬಂಧಿಸಿದ ಸಾಮಾಜಿಕ ಜಾಲತಾಣದಲ್ಲಿ ನನ್ನ ಸಂಖ್ಯೆಯನ್ನು ಹಂಚಿಕೊಳ್ಳಲಾಗಿದೆ. ಅಲ್ಲದೆ, ಇವರಿಗೆ ಕರೆ ಮಾಡಿ ಕಿರುಕುಳ ನೀಡಿ. ಅವರು ಮುಂದೆಂದೂ ಈ ಬಗ್ಗೆ ಮಾತನಾಡಬಾರದು ಎಂದು ನಿರ್ದೇಶನ ನೀಡಲಾಗಿದೆ. ನಾವು ಕೊವಿಡ್​ನಿಂದ ಬದುಕಬಹುದು. ಆದರೆ, ಇಂಥವರಿಂದ ನಾವು ಬದುಕಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ.

ಆದರೆ, ಈ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ. ನಾವು ಈ ರೀತಿ ಮಾಡಿಲ್ಲ. ಒಂದೊಮ್ಮೆ ನಮ್ಮ ಕಾರ್ಯಕರ್ತರು ಈ ರೀತಿ ಮಾಡಿದ್ದರೆ ನಾವು ಇದನ್ನು ಖಂಡಿಸುತ್ತೇವೆ ಎಂದು ಹೇಳಿದೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 35,024 ಮಂದಿಗೆ ಕೊರೊನಾ ಸೋಂಕು, 270 ಸಾವು

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು