AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ನೆನಪಿಗೆ ‘ಸಿಂಹದ ಹಾದಿʼ ಕಿರುಚಿತ್ರ; ಇದು ಅಭಿಮಾನಿಗಳ ಕಾಣಿಕೆ

ವಿಷ್ಣುವರ್ಧನ್ ಅವರ ಅಭಿಮಾನಿಗಳು ‘ಸಿಂಹದ ಹಾದಿ’ ಕಿರುಚಿತ್ರ ಮಾಡಿದ್ದಾರೆ. ಇತ್ತೀಚೆಗೆ ಇದರ ಟ್ರೇಲರ್ ಬಿಡುಗಡೆ ಮಾಡಲಾಯಿತು. ಚಿತ್ರರಂಗದ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ‘ಸಿಂಹದ ಹಾದಿ’ಗೆ ಹಲವು ಹೆಚ್ಚು ಪ್ರಶಸ್ತಿಗಳು ಬಂದಿವೆ ಎಂದು ತಂಡದವರು ಹೇಳಿದ್ದಾರೆ. ವಿಷ್ಣುವರ್ಧನ್ ಅವರ ಸಾಧನೆ ಮತ್ತು ಜೀವನದಲ್ಲಿ ಬಗ್ಗೆ ಇದರಲ್ಲಿ ತಿಳಿಸಲಾಗಿದೆ.

ವಿಷ್ಣುವರ್ಧನ್ ನೆನಪಿಗೆ ‘ಸಿಂಹದ ಹಾದಿʼ ಕಿರುಚಿತ್ರ; ಇದು ಅಭಿಮಾನಿಗಳ ಕಾಣಿಕೆ
Simhada Haadi Poster
ಮದನ್​ ಕುಮಾರ್​
|

Updated on: Dec 30, 2024 | 10:03 PM

Share

ಡಿಸೆಂಬರ್‌ 30 ಕನ್ನಡ ಚಿತ್ರರಂಗದ ಸಾಹಸ ಸಿಂಹ ವಿಷ್ಣುವರ್ಧನ್‌ ಅಗಲಿದ ದಿನ. 2009ರ ಡಿಸೆಂಬರ್‌ 30ರ ಮುಂಜಾನೆ ಬಂದ ಸುದ್ದಿ, ಇಡೀ ಕನ್ನಡ ಚಿತ್ರರಂಗಕ್ಕೆ ಅರಗಿಸಿಕೊಳ್ಳಲಾಗದಂತಹ ನೋವನ್ನು ನೀಡಿತ್ತು. 2024ರ ಡಿಸೆಂಬರ್‌ 30ಕ್ಕೆ ವಿಷ್ಣುವರ್ಧನ್ ಇಲ್ಲದೇ 15 ವರ್ಷ ಕಳೆದಿದೆ. ವಿಷ್ಣುವರ್ಧನ್‌ ಕಾಲವಾಗಿ ಹದಿನೈದು ವರ್ಷಗಳಾದರೂ ಅವರ ಅಭಿಮಾನಿಗಳು ಅವರನ್ನು ಎಂದಿಗೂ ಮರೆತಿಲ್ಲ. ವಿಷ್ಣುವರ್ಧನ್‌ ಅಭಿನಯಿಸಿದ ಸಿನಿಮಾಗಳು, ವಿಭಿನ್ನ ಪಾತ್ರಗಳು ಮತ್ತು ಸಮಾಜಮುಖಿ ಕೆಲಸಗಳ ಮೂಲಕ ಫ್ಯಾನ್ಸ್ ತಮ್ಮ ನೆಚ್ಚಿನ ನಟನನ್ನು ಸದಾ ಜೀವಂತವಾಗಿರಿಸುವ ಕೆಲಸ ಮಾಡುತ್ತ ಬಂದಿದ್ದಾರೆ.

ವಿಷ್ಣುವರ್ಧನ್‌ ಅವರ 15ನೇ ವರ್ಷದ ಪುಣ್ಯ ಸ್ಮರಣೆ ಸಂದರ್ಭದಲ್ಲಿ ಅವರ ಅಭಿಮಾನಿಗಳು ‘ಸಿಂಹದ ಹಾದಿʼ ಎಂಬ ಶಾರ್ಟ್​ ಫಿಲ್ಮ್​ ಮಾಡಿ, ಅವರನ್ನು ಮತ್ತೆ ತೆರೆಮೇಲೆ ನೆನಪು ಮಾಡಿಕೊಳ್ಳುವ ಕೆಲಸ ಮಾಡಿದ್ದಾರೆ. ‘ಜಿ. ಕೆ. ಸಿನಿ ಫೈಲ್ಸ್‌ ಪ್ರೊಡಕ್ಷನ್ಸ್‌ʼ ಬ್ಯಾನರ್‌ ಮೂಲಕ ಜಿ.ಕೆ. ಶಶಿರಾಜ್‌ ದೊರೈ ಅವರು ‘ಸಿಂಹದ ಹಾದಿʼ ಎಂಬ ಕಿರುಚಿತ್ರವನ್ನು ನಿರ್ಮಿಸಿ ಬಿಡುಗಡೆ ಮಾಡುತ್ತಿದ್ದಾರೆ. ಬಾಲ್ಯದಿಂದಲೂ ವಿಷ್ಣುವರ್ಧನ್‌ ಫ್ಯಾನ್ಸ್ ಆಗಿರುವ ಶಶಿರಾಜ್‌ ದೊರೆ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಅಭಿನಯ ಮತ್ತು ನಿರ್ದೇಶನ ವಿಭಾಗದಲ್ಲಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ವಿಷ್ಣುವರ್ಧನ್ ಸಸ್ಯಹಾರಿಯೋ, ಮಾಂಸಾಹಾರಿಯೋ? ಅಚ್ಚರಿಯ ವಿಚಾರ ತಿಳಿಸಿದ ಹಿರಿಯ ನಿರ್ದೇಶಕ

ವಿಷ್ಣುವರ್ಧನ್‌ ಪುಣ್ಯಸ್ಮರಣೆಗೂ ಮುನ್ನ ನಡೆದ ಸಮಾರಂಭದಲ್ಲಿ, ಹಿರಿಯ ನಿರ್ದೇಶಕ ಎಸ್‌.ವಿ. ರಾಜೇಂದ್ರ ಸಿಂಗ್‌ ಬಾಬು, ಜೋ ಸೈಮನ್‌, ಕೃಷ್ಣೇಗೌಡ, ಭಾಮ ಹರೀಶ್‌, ಉಮೇಶ್‌ ಬಣಕಾರ್‌, ಲಕ್ಷ್ಮೀದೇವಮ್ಮ, ವೀರಯ್ಯ ಮುಂತಾದವರು ಹಾಜರಿದ್ದು, ‘ಸಿಂಹದ ಹಾದಿʼ ಕಿರುಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ಕಿರುಚಿತ್ರದಲ್ಲಿ ಶಶಿರಾಜ್‌ ದೊರೆ, ಸವಿತಾ, ಪಲ್ಲವಿ ರಾವ್‌, ಸಾಯಿ ಜ್ಯೋತಿ, ಸಂನ್ಸಿಕಾ, ಹರಿ ಪ್ರಕಾಶ್‌, ಪ್ರಕೃತಿ, ಮಂಜು, ಮಹೇಶ್‌ ಗುರು ಮುಂತಾದವರು ನಟಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶಶಿರಾಜ್‌ ದೊರೆ ಮಾತನಾಡಿ, ‘ವಿಷ್ಣುವರ್ಧನ್‌ ಅವರನ್ನು ಆದರ್ಶವಾಗಿ ಇಟ್ಟುಕೊಂಡು ಬದುಕು ಕಟ್ಟಿಕೊಂಡ ನಾಲ್ಕು ಜನರ ಜೀವನವನ್ನು ಆಧರಿಸಿ ಈ ಕಿರುಚಿತ್ರ ಮಾಡಲಾಗಿದೆ. ವಿಷ್ಣುವರ್ಧನ್‌ ಅವರ ಸಿನಿಮಾಗಳು, ಅವರು ಮಾಡಿದ ಪಾತ್ರಗಳು, ಅವರ ಸಾಮಾಜಿಕ ಕಾರ್ಯಗಳು ಎಲ್ಲವನ್ನೂ ಇದು ಆಧರಿಸಿದೆ. ವಿಷ್ಣುವರ್ಧನ್‌ ಅಭಿಮಾನಿಗಳು ಈ ಕಾರ್ಯದಲ್ಲಿ ನಮಗೆ ಬೆಂಬಲವಾಗಿ ನಿಂತಿದ್ದಾರೆ. ವಿಷ್ಣುವರ್ಧನ್‌ ಅವರ ಜೀವನ ಮತ್ತು ಸಾಧನೆಯನ್ನು ಮುಂದಿನ ಜನತೆಗೆ ತೋರಿಸುವ ಸಣ್ಣ ಪ್ರಯತ್ನವಿದು’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್