AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dasara Movie Teaser: ‘ದಸರಾ’ ಟೀಸರ್​ ಝಲಕ್​ ತೋರಿಸ್ತಾರೆ ರಕ್ಷಿತ್​ ಶೆಟ್ಟಿ; ನಾನಿ ಚಿತ್ರಕ್ಕೆ ಸ್ಟಾರ್​ ನಟರ ಸಾಥ್​

Nani | Rakshit Shetty: ‘ದಸರಾ’ ಸಿನಿಮಾದಲ್ಲಿ ನಾನಿ ಮತ್ತು ಕೀರ್ತಿ ಸುರೇಶ್​ ಅವರು ಜೋಡಿಯಾಗಿ ನಟಿಸಿದ್ದಾರೆ. 5 ಭಾಷೆಯಲ್ಲಿ ಈ ಚಿತ್ರದ ಟೀಸರ್ ಬಿಡುಗಡೆ ಆಗುತ್ತಿದೆ.

Dasara Movie Teaser: ‘ದಸರಾ’ ಟೀಸರ್​ ಝಲಕ್​ ತೋರಿಸ್ತಾರೆ ರಕ್ಷಿತ್​ ಶೆಟ್ಟಿ; ನಾನಿ ಚಿತ್ರಕ್ಕೆ ಸ್ಟಾರ್​ ನಟರ ಸಾಥ್​
ನಾನಿ, ರಕ್ಷಿತ್ ಶೆಟ್ಟಿ
ಮದನ್​ ಕುಮಾರ್​
|

Updated on: Jan 30, 2023 | 7:00 AM

Share

ಟಾಲಿವುಡ್​ ನಟ ನಾನಿ (Nani) ಅವರು ಈಗಾಗಲೇ ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ಅವರನ್ನು ‘ನ್ಯಾಚುರಲ್ ಸ್ಟಾರ್’ ಎಂದು ಕರೆಯುತ್ತಾರೆ. ನಾನಿ ನಟನೆಯ ಹೊಸ ಸಿನಿಮಾ ‘ದಸರಾ’ (Dasara Movie) ಮೇಲೆ ಸಾಕ್ಷಷ್ಟು ನಿರೀಕ್ಷೆ ಇದೆ. ಈ ಚಿತ್ರ ನಾನಿ ಪಾಲಿಗೆ ತುಂಬ ಸ್ಪೆಷಲ್​. ಯಾಕೆಂದರೆ ಇದು ಪ್ಯಾನ್​ ಇಂಡಿಯಾ ಪ್ರಾಜೆಕ್ಟ್​. ತೆಲುಗು, ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಪ್ಯಾನ್​​ ಇಂಡಿಯಾ ಚಿತ್ರ ಆದ್ದರಿಂದ ಎಲ್ಲ ಭಾಷೆಯಲ್ಲೂ ಅದ್ದೂರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಈಗ ‘ದಸರಾ’ ಚಿತ್ರದ ಟೀಸರ್​ ಅನಾವರಣಕ್ಕೆ ಕ್ಷಣಗಣನೆ ಆರಂಭ ಆಗಿದೆ. ಕನ್ನಡದಲ್ಲಿ ‘ಸಿಂಪಲ್​ ಸ್ಟಾರ್​’ ರಕ್ಷಿತ್ ಶೆಟ್ಟಿ (Simple Star Rakshit Shetty) ಅವರು ಟೀಸರ್​ ಬಿಡುಗಡೆ ಮಾಡಲಿದ್ದಾರೆ. ಇಂದು (ಜ.30) ಸಂಜೆ 4.05ಕ್ಕೆ ಟೀಸರ್​ ರಿಲೀಸ್​ ಆಗಲಿದೆ.

‘ದಸರಾ’ ಸಿನಿಮಾದಲ್ಲಿ ನಾನಿ ಅವರ ಗೆಟಪ್​ ಗಮನ ಸೆಳೆಯುತ್ತಿದೆ. ಸಖತ್​ ಮಾಸ್​ ಆಗಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಸಾಹಸ ಸನ್ನಿವೇಶಗಳು ಈ ಸಿನಿಮಾದಲ್ಲಿ ಭರ್ಜರಿಯಾಗಿ ಇರಲಿವೆ ಎಂಬ ನಿರೀಕ್ಷೆ ದಟ್ಟವಾಗಿದೆ. ಮಾರ್ಚ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಟೀಸರ್​ ಮೂಲಕ ನಿರೀಕ್ಷೆ ಹೆಚ್ಚಿಸಲು ಸಕಲ ಸಿದ್ಧತೆ ನಡೆದಿದೆ. 5 ಭಾಷೆಯ ಸ್ಟಾರ್​ ಕಲಾವಿದರು ಟೀಸರ್​ ಅನಾವರಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪ್ಯಾನ್​ ಇಂಡಿಯಾ ಚಲನಚಿತ್ರಗಳ ಪರಿಕಲ್ಪನೆಯಲ್ಲಿ ನನಗೆ ನಂಬಿಕೆ ಇಲ್ಲ: ರಿಷಬ್ ಶೆಟ್ಟಿ

ಇದನ್ನೂ ಓದಿ
Image
ಮುಂಬೈನಲ್ಲಿ ಒಟ್ಟಾಗಿ ಪಾರ್ಟಿ ಮಾಡಿದ ರಶ್ಮಿಕಾ ಮಂದಣ್ಣ-ಸಿದ್ದಾರ್ಥ್ ಮಲ್ಹೋತ್ರ​; ಫೋಟೋ ವೈರಲ್
Image
Swetha Changappa: ಕಿರುತೆರೆಯಲ್ಲಿ 20 ವರ್ಷ ಪೂರೈಸಿದ ಶ್ವೇತಾ ಚಂಗಪ್ಪ; ಸಿನಿಮಾದಲ್ಲೂ ನಟಿಯ ಯಶಸ್ವಿ ಪಯಣ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Rajamouli: ಹಾಲಿವುಡ್​ನಲ್ಲಿ ಸಿನಿಮಾ ಮಾಡಲು ರಾಜಮೌಳಿಗೆ ‘ಅವತಾರ್​’ ನಿರ್ದೇಶಕನಿಂದ ಆಹ್ವಾನ

ಹಿಂದಿ ಚಿತ್ರರಂಗದ ಖ್ಯಾತ ನಟ ಶಾಹಿದ್ ಕಪೂರ್, ಕಾಲಿವುಡ್​ ಸ್ಟಾರ್​ ಹೀರೋ ಧನುಷ್, ಕನ್ನಡದ ‘ಸಿಂಪಲ್​ ಸ್ಟಾರ್​’ ರಕ್ಷಿತ್ ಶೆಟ್ಟಿ, ಮಲಯಾಳಂನ ಜನಪ್ರಿಯ ಹೀರೋ ದುಲ್ಕರ್ ಸಲ್ಮಾನ್ ಅವರು ‘ದಸರಾ’ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಿದ್ದಾರೆ. ಆದ್ದರಿಂದ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಕೌತುಕ ಸೃಷ್ಟಿ ಆಗಿದೆ.

ಇದನ್ನೂ ಓದಿ: ‘ಮೊದಲ ಪ್ಯಾನ್​ ಇಂಡಿಯಾ ಚಿತ್ರ ನಮ್ಮ ಕನ್ನಡದ್ದು’: ದಶಕಗಳ ಹಿಂದಿನ ಮಾಹಿತಿ ತಿಳಿಸಿದ ಎಸ್​. ನಾರಾಯಣ್​

‘ದಸರಾ’ ಸಿನಿಮಾದಲ್ಲಿ ನಾನಿ ಹಾಗೂ ಕೀರ್ತಿ ಸುರೇಶ್ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಶ್ರೀಕಾಂತ್ ಒಡೆಲಾ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಹಾಡುಗಳ ಮೂಲಕ ಕ್ರೇಜ್ ಸೃಷ್ಟಿಸಿರುವ ಚಿತ್ರತಂಡ ಈಗ ಟೀಸರ್ ತೋರಿಸುವ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ಸಜ್ಜಾಗಿದೆ. ದೀಕ್ಷಿತ್ ಶೆಟ್ಟಿ, ಸಮುದ್ರಕಣಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಹಲವು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್​ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದು ಹೇಗೆ? ‘ಪುಷ್ಪ’ ಚಿತ್ರದ ಟ್ರೇಡ್​ ಸೀಕ್ರೆಟ್​ ಇಲ್ಲಿದೆ..

‘ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್’ ಬ್ಯಾನರ್ ಮೂಲಕ ಸುಧಾಕರ್ ಚೆರುಕುರಿ ಅವರು ‘ದಸರಾ’ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸತ್ಯನ್ ಸೂರ್ಯನ್ ಛಾಯಾಗ್ರಹಣ, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನದ ಜವಾಬ್ದಾರಿ ನಿಭಾಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ