AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangli: ಅಪಘಾತಕ್ಕೆ ಒಳಗಾಯ್ತು ಖ್ಯಾತ ಗಾಯಕಿ ಮಂಗ್ಲಿ ಕಾರು

ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಆ ಬಳಿಕ ಅವರು ಬೆಂಗಳೂರು-ಹೈದರಾಬಾದ್ ಹೈವೇ ಮೂಲಕ ಹೈದರಾಬಾದ್​ಗೆ ಬರುತ್ತಿದ್ದರು. ಶಂಶಾಬಾದ್ ತೊಂಡುಪಲ್ಲಿ ಬಳಿ ಕಾರು ಅಪಘಾತಕ್ಕೆ ಒಳಗಾಗಿದೆ. ಭಾನುವಾರ (ಮಾರ್ಚ್ 17) ತಡರಾತ್ರಿ ಈ ಘಟನೆ ನಡೆದಿದೆ.

Mangli: ಅಪಘಾತಕ್ಕೆ ಒಳಗಾಯ್ತು ಖ್ಯಾತ ಗಾಯಕಿ ಮಂಗ್ಲಿ ಕಾರು
ಮಂಗ್ಲಿ
ರಾಜೇಶ್ ದುಗ್ಗುಮನೆ
|

Updated on:Mar 18, 2024 | 11:23 AM

Share

‘ಹೂ ಅಂತೀಯಾ ಮಾವ…’ ಹಾಡನ್ನು ಹಾಡಿ ಕನ್ನಡದ ಜನತೆಗೂ ಪರಿಚಯಗೊಂಡಿರುವ ಗಾಯಕಿ ಮಂಗ್ಲಿ (Mangli) ಅವರು ಕಾರು ಅಪಘಾತಕ್ಕೆ ಒಳಗಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಅವರು ತೆಲುಗು ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಈಗ ಕಾರ್ಯಕ್ರಮ ಮುಗಿಸಿ ಬರುವಾಗ ಈ ಘಟನೆ ನಡೆದಿದೆ. ಮಂಗ್ಲಿ ಅವರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಆ ಬಳಿಕ ಅವರು ಬೆಂಗಳೂರು-ಹೈದರಾಬಾದ್ ಹೈವೇ ಮೂಲಕ ಹೈದರಾಬಾದ್​ಗೆ ಬರುತ್ತಿದ್ದರು. ಶಂಶಾಬಾದ್ ತೊಂಡುಪಲ್ಲಿ ಬಳಿ ಕಾರು ಅಪಘಾತಕ್ಕೆ ಒಳಗಾಗಿದೆ. ಭಾನುವಾರ (ಮಾರ್ಚ್ 17) ತಡರಾತ್ರಿ ಈ ಘಟನೆ ನಡೆದಿದೆ. ಮಂಗ್ಲಿ ಕಾರಿಗೆ ಸಣ್ಣ ಟ್ರಕ್ ಗುದ್ದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬಳ್ಳಾರಿ ಉತ್ಸವದಲ್ಲಿ ಸಿಂಗರ್​ ಮಂಗ್ಲಿ ಕಾರಿನ ಮೇಲೆ ಕಲ್ಲು ತೂರಾಟ ಆಗಿಲ್ಲ, ಆದ್ರೂ ಗ್ಲಾಸ್ ಒಡೆದಿದ್ಯಾಕೆ? ಎಸ್ಪಿ ಸ್ಪಷ್ಟನೆ ಇಲ್ಲಿದೆ

ಕಾರಿನಲ್ಲಿ ಇದ್ದ ಎಲ್ಲರಿಗೂ ಸಣ್ಣಪುಟ್ಟ ಗಾಯಗಳು ಆಗಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ದಿವ್ಯಾ ಪ್ರಿಯಾ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಹೈದರಾಬಾದ್-ಬೆಂಗಳೂರು ಹೆದ್ದಾರಿಯ ತೊಂಡುಪಲ್ಲಿ ಸೇತುವೆ ಬಳಿಕ ಗಾಯಕ ಮಂಗ್ಲಿ ಕಾರಿಗೆ ಸಣ್ಣ ಟ್ರಕ್ ಡಿಕ್ಕಿ ಹೊಡೆದಿದೆ. ಮಂಗ್ಲಿ ಹಾಗೂ ಇತರ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಬರೆಯಲಾಗಿದೆ.

ಮಂಗ್ಲಿ ಬಗ್ಗೆ ಮಾಡಿದ ಟ್ವೀಟ್

ಮಂಗ್ಲಿ ಅವರು 2018ರಲ್ಲಿ ಸಿನಿಮಾ ರಂಗಕ್ಕೆ ಗಾಯಕಿ ಆಗಿ ಕಾಲಿಟ್ಟರು. ಆರಂಭದಲ್ಲಿ ಅವರು ತೆಲುಗು ಚಿತ್ರರಂಗದಲ್ಲಿ ಮಿಂಚಿದರು. ‘ಪುಷ್ಪ’ ಚಿತ್ರದ ಕನ್ನಡ ವರ್ಷನ್​ನಲ್ಲಿ ಬರುವ ‘ಹೂ ಅಂತೀಯಾ ಮಾವ..’ ಹಾಡನ್ನು ಹಾಡಿ ಗಮನ ಸೆಳೆದರು. ನಂತರ ಕನ್ನಡದಲ್ಲಿ ಹಲವು ಹಾಡುಗಳನ್ನು ಹಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:21 am, Mon, 18 March 24

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ