‘ಇನ್ಮುಂದೆ ಇಂಥ ಸಿನಿಮಾ ಮಾಡಲ್ಲ’: ರಶ್ಮಿಕಾ ಜತೆ ನಟಿಸಿದ ಬಳಿಕ ಮಹತ್ವದ ನಿರ್ಧಾರ ತಿಳಿಸಿದ ದುಲ್ಕರ್​ ಸಲ್ಮಾನ್​

Sita Ramam | Dulquer Salmaan: ‘ಸೀತಾ ರಾಮಂ​’ ಸಿನಿಮಾದ ಟ್ರೇಲರ್​ ಗಮನ ಸೆಳೆದಿದೆ. ಈ ಚಿತ್ರದಲ್ಲಿ ದುಲ್ಕರ್ ಸಲ್ಮಾನ್​, ರಶ್ಮಿಕಾ ಮಂದಣ್ಣ, ಮೃಣಾಲ್​ ಠಾಕೂರ್​ ಮುಂತಾದವರು ನಟಿಸಿದ್ದಾರೆ.

‘ಇನ್ಮುಂದೆ ಇಂಥ ಸಿನಿಮಾ ಮಾಡಲ್ಲ’: ರಶ್ಮಿಕಾ ಜತೆ ನಟಿಸಿದ ಬಳಿಕ ಮಹತ್ವದ ನಿರ್ಧಾರ ತಿಳಿಸಿದ ದುಲ್ಕರ್​ ಸಲ್ಮಾನ್​
ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Jul 26, 2022 | 12:25 PM

ನಟ ದುಲ್ಕರ್​ ಸಲ್ಮಾನ್​ (Dulquer Salmaan) ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಮೂಲತಃ ಕೇರಳದವರಾದ ಅವರು ಮಲಯಾಳಂ, ತಮಿಳು, ತೆಲುಗು ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ನಟಿಸಿರುವ ‘ಸೀತಾ ರಾಮಂ​’ (Sita Ramam) ಸಿನಿಮಾ ಬಿಡುಗಡೆ ಸಜ್ಜಾಗಿದೆ. ಆಗಸ್ಟ್​ 5ರಂದು ಈ ಚಿತ್ರ ರಿಲೀಸ್​ ಆಗಲಿದೆ. ಅನೇಕ ನಗರಗಳಿಗೆ ತೆರಳಿ ದುಲ್ಕರ್​ ಸಲ್ಮಾನ್​ ಅವರು ಪ್ರಚಾರ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಜೊತೆ ನಟಿಸಿರುವ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಮೃಣಾಲ್​ ಠಾಕೂರ್​ ಕೂಡ ಪ್ರಚಾರ ಕಾರ್ಯದಲ್ಲಿ ಭಾಗಿ ಆಗುತ್ತಿದ್ದಾರೆ. ಈ ವೇಳೆ ದುಲ್ಕರ್​ ಸಲ್ಮಾನ್​ ಅವರೊಂದು ಮಹತ್ವದ ನಿರ್ಧಾರ ಘೋಷಿಸಿದ್ದಾರೆ. ಇನ್ಮುಂದೆ ಯಾವುದೇ ಕಾರಣಕ್ಕೂ ರೊಮ್ಯಾಂಟಿಕ್​ ಸಿನಿಮಾ ಮಾಡುವುದಿಲ್ಲ ಎಂದು ಅವರು ನಿರ್ಧಾರ ಮಾಡಿದ್ದಾರೆ. ಈ ಮಾತು ಕೇಳಿ ಕೆಲವು ಅಭಿಮಾನಿಗಳಿಗೆ ಬೇಸರ ಆಗಿದೆ. ಆದರೆ ಒಂದು ವರ್ಗದ ಪ್ರೇಕ್ಷಕರು ಖುಷಿಪಟ್ಟಿದ್ದಾರೆ.

ದುಲ್ಕರ್​ ಸಲ್ಮಾನ್​ ಅವರು ಅನೇಕ ಲವ್​ ಸ್ಟೋರಿ ಚಿತ್ರಗಳನ್ನು ಮಾಡಿ ಜನಮನ ಗೆದ್ದಿದ್ದಾರೆ. ಅವರನ್ನು ರೊಮ್ಯಾಂಟಿಕ್​ ಹೀರೋ ಆಗಿ ಜನರು ಇಷ್ಟಪಟ್ಟಿದ್ದಾರೆ. ಆದರೆ ಮತ್ತೆ ಮತ್ತೆ ಅದೇ ರೀತಿಯ ಪಾತ್ರಗಳನ್ನು ಮಾಡಬಾರದು ಎಂಬುದು ದುಲ್ಕರ್​ ಸಲ್ಮಾನ್​ ತೀರ್ಮಾನ. ‘ಇನ್ಮುಂದೆ ಯಾವುದೇ ಕಾರಣಕ್ಕೂ ರೊಮ್ಯಾಂಟಿಕ್​ ಪ್ರೇಮಕಥೆಯ ಸಿನಿಮಾಗಳನ್ನು ಒಪ್ಪಿಕೊಳ್ಳುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಮಾಸ್​ ಸಿನಿಮಾಗಳಲ್ಲಿ ದುಲ್ಕರ್​ ಸಲ್ಮಾನ್​ ನಟಿಸುವುದಿಲ್ಲ ಎಂದು ಕೆಲವು ಅಭಿಮಾನಿಗಳು ಈ ಹಿಂದೆ ಬೇಸರ ವ್ಯಕ್ತಪಡಿಸಿದ್ದರು. ಹಾಗಾಗಿ ಇನ್ಮುಂದೆ ಪಕ್ಕಾ ಮಾಸ್​ ಶೈಲಿಯ ಚಿತ್ರಗಳನ್ನು ಅವರು ಮಾಡಲಿದ್ದಾರೆ. ಆದರೆ ಅವರನ್ನು ಲವರ್​ಬಾಯ್​, ರೊಮ್ಯಾಂಟಿಕ್​ ಹೀರೋ ಆಗಿ ನೋಡಲು ಬಯಸುವ ಅಭಿಮಾನಿಗಳಿಗೆ ಇದರಿಂದ ಬೇಸರ ಆಗಲಿದೆ.

‘ಸೀತಾ ರಾಮಂ​’ ಚಿತ್ರದಲ್ಲಿ ಎರಡು ಕಾಲಘಟ್ಟದ ಕಥೆ ಇರಲಿದೆ. ಇತ್ತೀಚೆಗೆ ರಿಲೀಸ್​ ಆದ ಟ್ರೇಲರ್​ನಲ್ಲಿ ಈ ಎಳೆಯನ್ನು ಬಿಟ್ಟುಕೊಡಲಾಗಿದೆ. ಆಫ್ರೀನ್​ ಎಂಬ ಮುಸ್ಲಿಂ ಹುಡುಗಿಯ ಪಾತ್ರವನ್ನು ರಶ್ಮಿಕಾ ಮಂದಣ್ಣ ನಿಭಾಯಿಸಿದ್ದಾರೆ. ಸೇನಾಧಿಕಾರಿಯಾಗಿ ದುಲ್ಕರ್​ ಸಲ್ಮಾನ್​ ಕಾಣಿಸಿಕೊಳ್ಳಲಿದ್ದಾರೆ. ಅವರ ಪ್ರೇಯಸಿಯಾಗಿ ಮೃಣಾಲ್​ ಠಾಕೂರ್​ ಬಣ್ಣ ಹಚ್ಚಿದ್ದಾರೆ. ಸದ್ಯ ಟ್ರೇಲರ್​ ಮೂಲಕ ಗಮನ ಸೆಳೆದಿರುವ ಈ ಚಿತ್ರಕ್ಕೆ ಜನರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕು. ಹನು ರಾಘವಪುಡಿ ಅವರ ನಿರ್ದೇಶನದಲ್ಲಿ ‘ಸೀತಾ ರಾಮಂ​’ ಮೂಡಿಬಂದಿದೆ.

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್