Rashmika Mandanna: ಬೇರೆ ನಟಿಯರಿಗೆ ಹೊಟ್ಟೆಕಿಚ್ಚು ಆಗುವಷ್ಟು ಆಫರ್​ ಪಡೆದ ರಶ್ಮಿಕಾ; ಈಗ ಕೈಯಲ್ಲಿ ಇರುವ ಚಿತ್ರಗಳು ಎಷ್ಟು?

Rashmika Mandanna Upcoming Movies: ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಶ್ಮಿಕಾ ಮಂದಣ್ಣ ಮಿಂಚುತ್ತಿದ್ದಾರೆ. ಜಾಹೀರಾತು ಕ್ಷೇತ್ರದಲ್ಲಿಯೂ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ.

Rashmika Mandanna: ಬೇರೆ ನಟಿಯರಿಗೆ ಹೊಟ್ಟೆಕಿಚ್ಚು ಆಗುವಷ್ಟು ಆಫರ್​ ಪಡೆದ ರಶ್ಮಿಕಾ; ಈಗ ಕೈಯಲ್ಲಿ ಇರುವ ಚಿತ್ರಗಳು ಎಷ್ಟು?
ರಶ್ಮಿಕಾ ಮಂದಣ್ಣ
Follow us
TV9 Web
| Updated By: Digi Tech Desk

Updated on:Jul 15, 2022 | 8:53 AM

ಸದ್ಯಕ್ಕಂತೂ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಯಾರೂ ಸಾಟಿ ಇಲ್ಲ ಎಂಬಂತಾಗಿದೆ. ಎಲ್ಲ ಭಾಷೆಯಲ್ಲೂ ಅವರು ಹವಾ ಸೃಷ್ಟಿ ಮಾಡಿದ್ದಾರೆ. ಕನ್ನಡದಿಂದ ಆರಂಭವಾದ ಅವರ ಸಿನಿಮಾ ಜರ್ನಿ ಈಗ ಬಾಲಿವುಡ್​ ತನಕ ಹೋಗಿದೆ. ಅಲ್ಲಿನ ಸ್ಟಾರ್​ ನಟರ ಜೊತೆ ಸಿನಿಮಾ ಮಾಡುವ ಅವಕಾಶ ಅವರಿಗೆ ಸಿಗುತ್ತಿದೆ. ಹಲವಾರು ಆಫರ್​ಗಳನ್ನು ಕೈಯಲ್ಲಿ ಇಟ್ಟುಕೊಂಡು ರಶ್ಮಿಕಾ ಮಂದಣ್ಣ ಮಿಂಚುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳು (Rashmika Mandanna Next Movie) ಸಖತ್​ ಹೈಪ್​ ಕ್ರಿಯೇಟ್​ ಮಾಡಿವೆ. ಆ ಪರಿ ಅವಕಾಶ ಗಿಟ್ಟಿಸಿಕೊಳ್ಳುತ್ತಿರುವ ಅವರನ್ನು ಕಂಡರೆ ಬೇರೆ ನಟಿಯರಿಗೆ ಹೊಟ್ಟೆಕಿಚ್ಚು ಆಗುವುದು ಗ್ಯಾರಂಟಿ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು ರಶ್ಮಿಕಾ ಮಂದಣ್ಣ ಪಡೆಯುವ ಸಂಭಾವನೆ (Rashmika Mandanna Remuneration) ಕೂಡ ಹೆಚ್ಚುತ್ತಲೇ ಇದೆ. ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಅವರು ಶೈನ್​ ಆಗುತ್ತಿದ್ದಾರೆ.

‘ಪುಷ್ಪ’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಯಿತು. ಬಾಲಿವುಡ್​ ಮಂದಿ ಆ ಚಿತ್ರವನ್ನು ನೋಡಿ ಸಖತ್​ ಮೆಚ್ಚಿಕೊಂಡರು. ‘ಪುಷ್ಪ’ ಸೂಪರ್​ ಹಿಟ್ ಆದ ಬಳಿಕ ರಶ್ಮಿಕಾ ಮಂದಣ್ಣ ಅವರನ್ನು ತಡೆಯುವವರೇ ಯಾರೂ ಇಲ್ಲ ಎಂಬಂತಾಗಿದೆ. ಈಗ ‘ಪುಷ್ಪ 2’ ಚಿತ್ರಕ್ಕೂ ಅವರೇ ನಾಯಕಿ. ಅಲ್ಲು ಅರ್ಜುನ್​ ಜೊತೆ ಮತ್ತೊಮ್ಮೆ ತೆರೆ ಹಂಚಿಕೊಳ್ಳಲು ಈ ಕೊಡಗಿನ ಕುವರಿ ಕಾದಿದ್ದಾರೆ. ಇನ್ನೂ ಅನೇಕ ಸ್ಟಾರ್​ ನಟರ ಸಿನಿಮಾಗಳಿಗೂ ಅವರು ನಾಯಕಿಯಾಗಿ ಆಯ್ಕೆ ಆಗುತ್ತಿದ್ದಾರೆ.

ತಮಿಳಿನಲ್ಲಿ ದಳಪತಿ ವಿಜಯ್​ ನಟಿಸುತ್ತಿರುವ ‘ವಾರಿಸು’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಬಾಲಿವುಡ್​ನಲ್ಲಿ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’, ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ಬೈ’, ರಣಬೀರ್​ ಕಪೂರ್​ ಜೊತೆ ‘ಅನಿಮಲ್​’ ಸಿನಿಮಾದಲ್ಲಿ ರಶ್ಮಿಕಾ ಮಿಂಚಲಿದ್ದಾರೆ. ಆ ಚಿತ್ರಗಳು ರಿಲೀಸ್​ ಆಗುವುದಕ್ಕೂ ಮುನ್ನವೇ ಇನ್ನೂ ಆನೇಕ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ ಎಂಬುದು ಗಮನಿಸಬೇಕಾದ ಅಂಶ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಮಲಯಾಳಂ ಸ್ಟಾರ್​ ನಟ ದುಲ್ಕರ್​ ಸಲ್ಮಾನ್​ ಜೊತೆ ರಶ್ಮಿಕಾ ಮಂದಣ್ಣ ಅವರು ‘ಸೀತಾ ರಾಮಮ್​’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಪೋಸ್ಟರ್​ಗಳು ಈಗಾಗಲೇ ಗಮನ ಸೆಳೆದಿವೆ. ಇದರಲ್ಲಿ ಅವರು ಮುಸ್ಲಿಂ ಹುಡುಗಿಯ ಪಾತ್ರ ಮಾಡುತ್ತಿದ್ದಾರೆ. ಆಗಸ್ಟ್​ 5ರಂದು ಬಿಡುಗಡೆ ಆಗಲಿದೆ. ಜಾಹೀರಾತು ಕ್ಷೇತ್ರದಲ್ಲಿಯೂ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ.

Published On - 7:15 am, Fri, 15 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ