AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sitara Ghattamaneni Birthday: ಸಿತಾರಾಗೆ ಬರ್ತ್​ಡೇ ಸಖತ್ ಸ್ಪೆಷಲ್; ಹೇಗಿತ್ತು ನೋಡಿ ಮಹೇಶ್ ಬಾಬು ವಿಶ್

ಮಹೇಶ್ ಬಾಬು ಹಾಗೂ ನಮ್ರತಾ ಮಗಳು ಎನ್ನುವ ಕಾರಣಕ್ಕೆ ಸಿತಾರಾಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ಇದನ್ನು ಅವರು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

Sitara Ghattamaneni Birthday: ಸಿತಾರಾಗೆ ಬರ್ತ್​ಡೇ ಸಖತ್ ಸ್ಪೆಷಲ್; ಹೇಗಿತ್ತು ನೋಡಿ ಮಹೇಶ್ ಬಾಬು ವಿಶ್
ಸಿತಾರಾ-ಮಹೇಶ್​ ಬಾಬು
ರಾಜೇಶ್ ದುಗ್ಗುಮನೆ
|

Updated on: Jul 20, 2023 | 10:29 AM

Share

ಸೆಲೆಬ್ರಿಟಿಗಳ ಮಕ್ಕಳಿಗೆ ಚಿತ್ರರಂಗಕ್ಕೆ ಎಂಟ್ರಿ ಸಿಗೋದು ತುಂಬಾನೇ ಸುಲಭ. ಆದರೆ, ನಂತರ ಎದುರಾಗುವ ಚಾಲೆಂಜ್​ಗಳನ್ನು ಸ್ವತಃ ಅವರೇ ಎದುರಿಸಬೇಕು. ಇದಕ್ಕೆಲ್ಲ ಮಹೇಶ್​ ಬಾಬು ತಮ್ಮ ಮಗಳು ಸಿತಾರಾ ಘಟ್ಟಮನೇನಿ (Sitara Ghattamaneni) ಅವರನ್ನು ಈಗಿಂದಲೇ ಸಿದ್ಧತೆ ಮಾಡುತ್ತಿರುವಂತಿದೆ. ಇಂದು ಸಿತಾರಾಗೆ 11ನೇ ವರ್ಷದ ಜನ್ಮದಿನ. ಅವರಿಗೆ ಮಹೇಶ್ ಬಾಬು (Mahesh Babu) ಹಾಗೂ ನಮ್ರತಾ ಅವರು ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಹೇಶ್ ಬಾಬು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಮಗಳ ಫೋಟೋ ಪೋಸ್ಟ್ ಮಾಡಿರುವ ಅವರು, ‘ಹ್ಯಾಪಿ ಬರ್ತ್​ಡೇ ಸ್ಟಾರ್. ನಿನ್ನ ಮನಸ್ಸಿನಲ್ಲಿ ಇರುವುದನ್ನೆಲ್ಲ ಸಾಧಿಸು’ ಎಂದು ಅವರು ಶುಭಕೋರಿದ್ದಾರೆ.

ಮಹೇಶ್ ಬಾಬು ಹಾಗೂ ನಮ್ರತಾ ಮಗಳು ಎನ್ನುವ ಕಾರಣಕ್ಕೆ ಸಿತಾರಾಗೆ ಸಖತ್ ಜನಪ್ರಿಯತೆ ಸಿಕ್ಕಿದೆ. ಇದನ್ನು ಅವರು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಿತಾರಾಗೆ ಈಗಿನ್ನೂ 11 ವರ್ಷ ವಯಸ್ಸು. ಈ ವಯಸ್ಸಿನಲ್ಲೇ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಸ್ಟಾರ್ ಆಗಿದ್ದಾರೆ.

ಸಣ್ಣ ವಯಸ್ಸಿನಲ್ಲೇ ಸಿತಾರಾ ಯೂಟ್ಯೂಬ್ ಚಾನೆಲ್ ಹೊಂದಿದ್ದಾರೆ. ಇದಕ್ಕೆ ಲಕ್ಷಾಂತರ ಮಂದಿ ಸಬ್​ಸ್ಕ್ರೈಬರ್ಸ್ ಇದ್ದಾರೆ. ಮಹೇಶ್ ಬಾಬು, ರಶ್ಮಿಕಾ ಮಂದಣ್ಣ ಸೇರಿ ಅನೇಕ ಸೆಲೆಬ್ರಿಟಿಗಳು ಈ ಯೂಟ್ಯೂಬ್​ ಚಾನೆಲ್​ಗೆ ಅತಿಥಿಗಳಾಗಿ ಬಂದಿದ್ದರು. ಸಣ್ಣ ವಯಸ್ಸಿನಲ್ಲೇ ಸಿತಾರಾ ಪ್ರಮೋಷನಲ್​ ಹಾಡಿನಲ್ಲಿ ಕಾಣಿಸಿಕೊಂಡಿದ್ದರು. ‘ಸರ್ಕಾರು ವಾರಿ ಪಾಟ’ದ ಪ್ರಮೋಷನಲ್ ಸಾಂಗ್​ನಲ್ಲಿ ಅವರು ಹೆಜ್ಜೆ ಹಾಕಿ ಗಮನ ಸೆಳೆದಿದ್ದರು.

ಇದನ್ನೂ ಓದಿ: ಮಹೇಶ್ ಬಾಬು ಮಗಳು ಸಿತಾರಾ ಘಟ್ಟಮನೇನಿ ನಿಜವಾದ ವಯಸ್ಸೆಷ್ಟು?

ಸಿನಿಮಾ ರಂಗಕ್ಕೆ ಬರುವ ಆಸೆ ಸಿತಾರಾಗೆ ಇದೆ. ಆದರೆ, ಈ ವಿಚಾರದಲ್ಲಿ ಮಹೇಶ್ ಬಾಬು ಅವರಾಗಲೀ, ನಮ್ರತಾ ಆಗಲೀ ನಿರ್ಧಾರ ತೆಗೆದುಕೊಳ್ಳುವುದಿಲ್ಲವಂತೆ. ಈ ಬಗ್ಗೆ ಸಿತಾರಾ ಅವರೇ ಡಿಸೈಡ್ ಮಾಡಬೇಕಿದೆ. ಸಿತಾರಾ ಇತ್ತೀಚೆಗೆ ಜ್ಯುವೆಲರಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಅವರ ಫೋಟೋ ನ್ಯೂಯಾರ್ಕ್​​ನ ಟೈಮ್​ಸ್ಕ್ವೇರ್​ನಲ್ಲಿ ರಾರಾಜಿಸಿತ್ತು. ಸಿತಾರಾ ಜ್ಯುವೆಲರಿ ಜಾಹೀರಾತಿಗಾಗಿ ಬರೋಬ್ಬರಿ 1 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು. ಇದನ್ನು ಅವರು ಚ್ಯಾರಿಟಿ ಒಂದಕ್ಕೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ