AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಲಮ್ ಡಾಗ್’ ಟೀಸರ್: ವಿಜಯ್ ಸೇತುಪತಿ ಜೊತೆ ದುನಿಯಾ ವಿಜಯ್ ಪಾತ್ರವೂ ಹೈಲೈಟ್

ಮಾಸ್ ಮತ್ತು ಮಿಸ್ಟರಿ ಎರಡನ್ನೂ ಸಮವಾಗಿ ಬ್ಯಾಲೆನ್ಸ್ ಮಾಡಿರುವ ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ ಚಿತ್ರವು ಸದ್ಯದಲ್ಲೇ ಬಿಡುಗಡೆ ಆಗಲಿದೆ. ತೆಲುಗಿನ ಈ ಸಿನಿಮಾದ ಟೀಸರ್ ಕನ್ನಡದಲ್ಲೂ ರಿಲೀಸ್ ಆಗಿದೆ. ವಿಜಯ್ ಸೇತುಪತಿ ಹಾಗೂ ದುನಿಯಾ ವಿಜಯ್ ಅವರ ಪಾತ್ರಗಳು ಸಖತ್ ಹೈಲೈಟ್ ಆಗಿವೆ.

‘ಸ್ಲಮ್ ಡಾಗ್’ ಟೀಸರ್: ವಿಜಯ್ ಸೇತುಪತಿ ಜೊತೆ ದುನಿಯಾ ವಿಜಯ್ ಪಾತ್ರವೂ ಹೈಲೈಟ್
Duniya Vijay
ಮದನ್​ ಕುಮಾರ್​
|

Updated on: Jun 08, 2026 | 9:55 PM

Share

ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದುನಿಯಾ ವಿಜಯ್ (Duniya Vijay) ಈಗ ಮತ್ತೊಂದು ಭರ್ಜರಿ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಖಳನಾಯಕನಾಗಿ ಅಬ್ಬರಿಸಲು ಸಜ್ಜಾಗಿದ್ದಾರೆ. ಸ್ಟಾರ್ ಡೈರೆಕ್ಟರ್ ಪುರಿ ಜಗನ್ನಾಥ್ (Puri Jagannadh) ಮತ್ತು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ (Slum Dog) ಚಿತ್ರದಲ್ಲಿ ದುನಿಯಾ ವಿಜಯ್ ಭೀಕರ ವಿಲನ್ ಪಾತ್ರದಲ್ಲಿ ನಟಿಸಿದ್ದು, ಚಿತ್ರದ ಬಹುನಿರೀಕ್ಷಿತ ಟೀಸರ್ ಬಿಡುಗಡೆಯಾಗಿದೆ.

ಸದ್ಯ ಪೋಸ್ಟ್ ಪ್ರೊಡಕ್ಷನ್‌ನ ಅಂತಿಮ ಹಂತದಲ್ಲಿರುವ ಈ ಆ್ಯಕ್ಷನ್ ಡ್ರಾಮಾ ಸಿನಿಮಾದ ಟೀಸರ್, ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೆಂಡ್ ಸೃಷ್ಟಿಸಿದೆ. ಸಿನಿಮಾದ ಕಥೆಯ ಬಗ್ಗೆ ಹೆಚ್ಚು ಮಾಹಿತಿ ಬಹಿರಂಗ ಆಗಿಲ್ಲ. ಆದರೆ ಸಿಕ್ಕಾಪಟ್ಟೆ ಕೌತುಕ ನಿರ್ಮಾಣ ಆಗಿದೆ. ವಿಜಯ್ ಸೇತುಪತಿ ರೀತಿಯೇ ದುನಿಯಾ ವಿಜಯ್ ಪಾತ್ರ ಕೂಡ ಸಖತ್ ಹೈಲೈಟ್ ಆಗಿದೆ.

‘33 ಟೆಂಪಲ್ ರೋಡ್’ ಎಂಬ ಕುತೂಹಲಕಾರಿ ಟ್ಯಾಗ್‌ಲೈನ್ ಹೊಂದಿರುವ ಈ ಸಿನಿಮಾದ ಟೀಸರ್ ಆರಂಭವಾಗುವುದೇ ವಿಜಯ್ ಸೇತುಪತಿ ಅವರ ಖಡಕ್ ಡೈಲಾಗ್‌ನೊಂದಿಗೆ. ಭಿಕ್ಷುಕರ ಬದುಕು ಮತ್ತು ಅವರನ್ನು ಶೋಷಿಸುವ ದುಷ್ಟರ ವಿರುದ್ಧದ ಎಚ್ಚರಿಕೆಯ ಮಾತುಗಳೊಂದಿಗೆ ಟೀಸರ್ ತೆರೆದುಕೊಳ್ಳುತ್ತದೆ. ಆ್ಯಕ್ಷನ್ ಸೀಕ್ವೆನ್ಸ್‌ಗಳು, ಎಮೋಷನಲ್ ಸನ್ನಿವೇಶಗಳು ಮತ್ತು ಪಾತ್ರಗಳ ಪರಿಚಯದೊಂದಿಗೆ ಒಂದು ಅಪಾಯಕಾರಿ ಜಗತ್ತನ್ನು ಈ ಟೀಸರ್ ತೋರಿಸುತ್ತದೆ.

‘ಸ್ಲಮ್ ಡಾಗ್: 33 ಟೆಂಪಲ್ ರೋಡ್’ ಸಿನಿಮಾದ ಟೀಸರ್:

ಆದರೆ, ಇಡೀ ಟೀಸರ್‌ನಲ್ಲಿ ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿರುವುದು ವಿಜಯ್ ಸೇತುಪತಿ ಅವರ ಪಾತ್ರದ ರಹಸ್ಯ. ಚಿತ್ರದಲ್ಲಿ ಅವರು ಅಂಧ ಭಿಕ್ಷುಕನಾಗಿ ಕಾಣಿಸಿಕೊಂಡಿದ್ದಾರಾದರೂ, ಅವರ ಪಾತ್ರದ ಹಿಂದೆ ದೊಡ್ಡದೊಂದು ನಿಗೂಢ ಸತ್ಯ ಅಡಗಿದೆ ಎಂಬುದನ್ನು ಟೀಸರ್ ಸೂಚಿಸುತ್ತದೆ. ಅವರು ನಿಜವಾಗಿಯೂ ದೃಷ್ಟಿಹೀನರೇ ಅಥವಾ ಯಾವುದೋ ದೊಡ್ಡ ಉದ್ದೇಶಕ್ಕಾಗಿ ಈ ರೂಪ ಧರಿಸಿದ್ದಾರಾ ಎಂಬ ಕುತೂಹಲವು ಪ್ರೇಕ್ಷಕರಲ್ಲಿ ಮೂಡಿದೆ.

ಇದನ್ನೂ ಓದಿ: ‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ

ಯಾವಾಗಲೂ ತಮ್ಮ ಸಿನಿಮಾಗಳಲ್ಲಿ ನಾಯಕನನ್ನು ವಿಭಿನ್ನವಾಗಿ ಪ್ರೆಸೆಂಟ್ ಮಾಡುವ ನಿರ್ದೇಶಕ ಪುರಿ ಜಗನ್ನಾಥ್, ಈ ಬಾರಿಯೂ ವಿಜಯ್ ಸೇತುಪತಿ ಅವರಿಗೆ ರಗಡ್ ಮೇಕ್ ಓವರ್ ನೀಡಿದ್ದಾರೆ. ಈ ಮಾಸ್ ಕಥೆಗೆ ಅಷ್ಟೇ ಬಲಿಷ್ಠವಾಗಿ ಟಕ್ಕರ್ ನೀಡಲು ದುನಿಯಾ ವಿಜಯ್ ಎದುರಾಗಿದ್ದಾರೆ. ಟೀಸರ್‌ನಲ್ಲಿ ಅವರ ಲುಕ್ ಭೀತಿ ಹುಟ್ಟಿಸುವಂತಿದ್ದು, ಚಿತ್ರದಲ್ಲಿ ಅವರು ಅತ್ಯಂತ ಅಪಾಯಕಾರಿ ವಿಲನ್ ಪಾತ್ರದಲ್ಲಿ ಮಿಂಚಿರುವುದು ಸ್ಪಷ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More