AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್-ಎಸ್​ಎಂ ಕೃಷ್ಣ ಮಧ್ಯೆ ಆಗಿತ್ತು ಒಪ್ಪಂದ; ಅದನ್ನು ಮೀರಿದಾಗ ನಡೆದಿತ್ತು ಅಪಹರಣ

ಎಸ್​ಎಂ ಕೃಷ್ಣ ಅವರು ಇಂದು (ಡಿಸೆಂಬರ್ 10) ನಿಧನ ಹೊಂದಿದರು. ಅವರಿಗೆ ವಯೋಸಹಜ ಕಾಯಿಲೆ ಇತ್ತು. ಈ ಸಂದರ್ಭದಲ್ಲಿ ಅವರ ಅಧಿಕಾರದ ಅವಧಿಯನ್ನು ನೆನಪಿಸಿಕೊಳ್ಳಲಾಗುತ್ತಿದೆ. ಈ ಮೊದಲು ಕೃಷ್ಣ ಅವರು ರಾಜ್​ಕುಮಾರ್ ಅಪಹರಣದ ಬಗ್ಗೆ ಮಾತನಾಡಿದ್ದರು.

ರಾಜ್​ಕುಮಾರ್-ಎಸ್​ಎಂ ಕೃಷ್ಣ ಮಧ್ಯೆ ಆಗಿತ್ತು ಒಪ್ಪಂದ; ಅದನ್ನು ಮೀರಿದಾಗ ನಡೆದಿತ್ತು ಅಪಹರಣ
ರಾಜ್​ಕುಮಾರ್-ಕೃಷ್ಣ
ರಾಜೇಶ್ ದುಗ್ಗುಮನೆ
|

Updated on: Dec 10, 2024 | 7:28 AM

Share

ಹಿರಿಯ ರಾಜಕಾರಣಿ, ಮಾಜಿ ಸಿಎಂ ಎಸ್​ಎಂ ಕೃಷ್ಣ ಅವರ ಮುಖ್ಯಮಂತ್ರಿ ಅವಧಿ ಎಲ್ಲರಿಗೂ ನೆನಪಿನಲ್ಲಿ ಇರುವಂಥದ್ದು. ಅದಕ್ಕೆ ಕಾರಣ ಅವರು ಎದುರಿಸಿದ ಚಾಲೆಂಜ್​. ವರನಟ ಡಾ. ರಾಜ್​ಕುಮಾರ್ ಅವರು ಅಪಹರಣ ಆಗಿದ್ದು ಕೃಷ್ಣ ಅವರ ಅಧಿಕಾರ ಅವಧಿಯಲ್ಲೇ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಮರು ವರ್ಷವೇ ವೀರಪ್ಪನ್ ಕಡೆಯಿಂದ ಅಣ್ಣಾವ್ರು ಕಿಡ್ನ್ಯಾಪ್ ಆದರು. ವೀರಪ್ಪನ್ 108 ದಿನಗಳ ಕಾಲ ಅಣ್ಣಾವ್ರನ್ನು ತಮ್ಮ ವಶದಲ್ಲಿ ಇಟ್ಟುಕೊಂಡಿದ್ದ. ಆ ದಿನಗಳ ಬಗ್ಗೆ ಈಗಲೂ ಚರ್ಚೆಗಳು ಆಗುತ್ತವೆ. ರಾಜ್​ಕುಮಾರ್ ಅವರಿಗೂ ಕರ್ನಾಟಕ ಸರ್ಕಾರಕ್ಕೂ ಒಂದು ಒಪ್ಪಂದ ಆಗಿತ್ತು. ಆದರೆ, ಇದನ್ನು ಅಣ್ಣಾವ್ರು ಮೀರಿದಾಗ ಎಡವಟ್ಟು ಸಂಭವಿಸಿತ್ತು.

ಎಸ್​ಎಂ ಕೃಷ್ಣ ಅವರು ಇಂದು (ಡಿಸೆಂಬರ್ 10) ನಿಧನ ಹೊಂದಿದರು. ಅವರಿಗೆ ವಯೋಸಹಜ ಕಾಯಿಲೆ ಇತ್ತು. ಈ ಸಂದರ್ಭದಲ್ಲಿ ಅವರ ಅಧಿಕಾರದ ಅವಧಿಯನ್ನು ನೆನಪಿಸಿಕೊಳ್ಳಲಾಗುತ್ತಿದೆ. ಈ ಮೊದಲು ಕೃಷ್ಣ ಅವರು ರಾಜ್​ಕುಮಾರ್ ಅಪಹರಣದ ಬಗ್ಗೆ ಮಾತನಾಡಿದ್ದರು. ರಾಜ್​ಕುಮಾರ್​ಗೆ ಕೊಟ್ಟ ಎಚ್ಚರಿಕೆ ಬಗ್ಗೆಯೂ ಅವರು ಹೇಳಿಕೊಂಡಿದ್ದರು.

ರಾಜ್​ಕುಮಾರ್ ಅವರಿಗೆ ವೀರಪ್ಪನ್ ಕಡೆಯಿಂದ ತೊಂದರೆ ಇದೆ ಎಂಬ ಸೂಚನೆ ರಾಜ್ಯ ಸರ್ಕಾರಕ್ಕೆ ಮೊದಲೇ ಇತ್ತು. ಈ ಕಾರಣದಿಂದಲೇ ರಾಜ್​ಕುಮಾರ್ ಜೊತೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು. ಗಾಜನೂರಿನ ಭಾಗಕ್ಕೆ ತೆರಳೋದಾದರೆ ರಾಜ್ಯ ಸರ್ಕಾರಕ್ಕೆ ಮೊದಲೇ ತಿಳಿಸಬೇಕು ಎಂದು ಹೇಳಿತ್ತು. ಇದಕ್ಕೆ ರಾಜ್​ಕುಮಾರ್ ಕೂಡ ಒಪ್ಪಿದ್ದರು.

ಇದನ್ನೂ ಓದಿ: ರಾಜ್​ಕುಮಾರ್ ಅಪಹರಣವಾದಾಗ ಸಿಎಂ ಆಗಿದ್ದ ಎಸ್​ಎಂ ಕೃಷ್ಣ; 108 ದಿನವೂ ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದ ರಾಜಕಾರಣಿ

ಪ್ರತಿ ಬಾರಿಯೂ ಗಾಜನೂರಿಗೆ ತೆರಳುವಾಗ ರಾಜ್​ಕುಮಾರ್ ಅವರು ಸರ್ಕಾರಕ್ಕೆ ತಿಳಿಸುತ್ತಿದ್ದರು. ಆಗ ಅಣ್ಣಾವ್ರಿಗೆ ಸೂಕ್ತ ಪೊಲೀಸ್ ಬಧ್ರತೆಯನ್ನು ಸರ್ಕಾರ ಒದಗಿಸುತ್ತಿತ್ತು. ಆದರೆ, ಅಂದು ಮಾತ್ರ ಅವರು ರಾಜ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡಿರಲಿಲ್ಲ. ನೇರವಾಗಿ ಗಾಜನೂರಿಗೆ ತೆರಳಿದರು. ಈ ವೇಳೆ ವೀರಪ್ಪನ್​ ಕಡೆಯವರು ಬಂದು ರಾಜ್​ಕುಮಾರ್​ನ ಕರೆದುಕೊಂಡು ಹೋದರು. ಇದು ಸರ್ಕಾರಕ್ಕೆ ಹಾಗೂ ಅಣ್ಣಾವ್ರ ಕುಟುಂಬಕ್ಕೆ ದೊಡ್ಡ ಆಘಾತ ನೀಡಿತ್ತು. ಆ ಸಂದರ್ಭದಲ್ಲಿ ರಾಜ್ಯದಲ್ಲಿ ಥಿಯೇಟರ್​ಗಳು ಮುಚ್ಚಿದ್ದವು. 108 ದಿನಗಳ ಬಳಿಕ ಅವರನ್ನು ಮರಳಿ ಕರೆ ತರಲಾಯಿತು. ಈ ವೇಳೆ ಕೃಷ್ಣ ಅವರು ಸಾಕಷ್ಟು ಶ್ರಮ ಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ