AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಿತಾ-ನಾಗ ಚೈತನ್ಯ ಪ್ರೀತಿ ವಿಚಾರಕ್ಕೆ ಇಂದೇ ಸಿಗಲಿದೆ ಸ್ಪಷ್ಟನೆ

ನಾಗ ಚೈತನ್ಯ ಹಾಗೂ ಸಮಂತಾ ಮದುವೆ ಆಗಿ ನಾಲ್ಕು ವರ್ಷ ಸಂಸಾರ ನಡೆಸಿದ್ದರು. 2021ರ ಅಕ್ಟೋಬರ್​ನಲ್ಲಿ ಇವರು ಬೇರೆ ಆಗುವ ನಿರ್ಧಾರಕ್ಕೆ ಬಂದರು. ಇದು ಅನೇಕರಿಗೆ ಶಾಕಿಂಗ್ ಎನಿಸಿತ್ತು. ಆ ಬಳಿಕ ಇಬ್ಬರೂ ಮುಖಾಮುಖಿ ಆಗಿಲ್ಲ. ನಾಗ ಚೈತನ್ಯ ಅವರು ಈಗ ಶೋಭಿತಾ ಜೊತೆ ಕ್ಲೋಸ್ ಆಗಿದ್ದಾರೆ.

ಶೋಭಿತಾ-ನಾಗ ಚೈತನ್ಯ ಪ್ರೀತಿ ವಿಚಾರಕ್ಕೆ ಇಂದೇ ಸಿಗಲಿದೆ ಸ್ಪಷ್ಟನೆ
ಶೋಬಿತಾ-ನಾಗ ಚೈತನ್ಯ
 ಶ್ರೀಲಕ್ಷ್ಮೀ ಎಚ್
| Edited By: |

Updated on:May 31, 2024 | 7:05 AM

Share

ಶೋಭಿತಾ ದುಲಿಪಾಲ್ (Sobhita Dhulipala) ಆಗಾಗ ಸುದ್ದಿ ಆಗುತ್ತಿದ್ದಾರೆ. ನಾಗ ಚೈತನ್ಯ ಜೊತೆಗೆ ಬೆಳೆದಿರೋ ಆಪ್ತತೆ ಇದಕ್ಕೆ ಕಾರಣ. ಇಬ್ಬರೂ ಡೇಟ್ ಮಾಡುತ್ತಿದ್ದಾರೆ ಎನ್ನುವ ವರದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಆದರೆ, ಇದನ್ನು ಅವರು ಒಪ್ಪಿಕೊಂಡಿಲ್ಲ. ಇವರ ಪ್ರೀತಿ ವಿಚಾರದಲ್ಲಿ ಸ್ಪಷ್ಟನೆ ಸಿಗೋ ಸಾಧ್ಯತೆ ಇದೆ. ಇಂದು (ಮೇ 31) ಶೋಭಿತಾ ಜನ್ಮದಿನ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ಬರುತ್ತಿದೆ. ಒಂದೊಮ್ಮೆ ನಾಗ ಚೈತನ್ಯ ಅವರಿಗೆ ಪ್ರೀತಿಯಿಂದ ವಿಶ್ ತಿಳಿಸಿದರೆ ಅವರ ಪ್ರೀತಿ ವಿಚಾರ ಖಚಿತ ಆಗಲಿದೆ.

ನಾಗ ಚೈತನ್ಯ ಹಾಗೂ ಸಮಂತಾ ಮದುವೆ ಆಗಿ ನಾಲ್ಕು ವರ್ಷ ಸಂಸಾರ ನಡೆಸಿದ್ದರು. 2021ರ ಅಕ್ಟೋಬರ್​ನಲ್ಲಿ ಇವರು ಬೇರೆ ಆಗುವ ನಿರ್ಧಾರಕ್ಕೆ ಬಂದರು. ಇದು ಅನೇಕರಿಗೆ ಶಾಕಿಂಗ್ ಎನಿಸಿತ್ತು. ಆ ಬಳಿಕ ಇಬ್ಬರೂ ಮುಖಾಮುಖಿ ಆಗಿಲ್ಲ. ಈಗ ಇಬ್ಬರೂ ತಮ್ಮ ತಮ್ಮ ವೃತ್ತಿ ಜೀವನದಲ್ಲಿ ಬ್ಯುಸಿ ಇದ್ದಾರೆ. ನಾಗ ಚೈತನ್ಯ ಅವರು ಈಗ ಶೋಭಿತಾ ಜೊತೆ ಕ್ಲೋಸ್ ಆಗಿದ್ದಾರೆ.

ಶೋಭಿತಾ ಅವರು ಹಿಂದಿ, ತೆಲುಗು ಇಂಡಸ್ಟ್ರಿಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ನಾಗ ಚೈತನ್ಯ ಜೊತೆ ಒಳ್ಳೆಯ ಗೆಳೆತನ ಬೆಳೆದಿದೆ. ಆ ಬಳಿಕ ಗೆಳೆತನ ಪ್ರೀತಿಗೆ ತಿರುಗಿದೆ ಎನ್ನುವ ಮಾತು ಇದೆ. ಆದರೆ, ಈ ವಿಚಾರವನ್ನು ಎಲ್ಲಿಯೂ ರಿವೀಲ್ ಮಾಡಿಲ್ಲ. ಒಂದೊಮ್ಮೆ ಇಂದು ನಾಗ ಚೈತನ್ಯ ಅವರು ಶೋಭಿತಾಗೆ ಪ್ರೀತಿಯಿಂದ ಬರ್ತ್​ಡೇ ವಿಶ್ ತಿಳಿಸಿದರೆ ಡೇಟಿಂಗ್ ವಿಚಾರ ಖಚಿತವಾಗಲಿದೆ.

ಇದನ್ನೂ ಓದಿ: ನಾಗ ಚೈತನ್ಯ-ಶೋಭಿತಾ ಆಪ್ತವಾಗಿರೋದು ಹೌದು, ಆದರೆ ಮದುವೆ ಆಗೋ ಆಲೋಚನೆ ಇಲ್ಲ

ಶೋಭಿತಾ ಅವರು ಮಾಡೆಲಿಂಗ್ ಕ್ಷೇತ್ರವನ್ನು ಮೊದಲು ಆಯ್ಕೆ ಮಾಡಿಕೊಂಡರು. ಆ ಬಳಿಕ ಅವರು ಆಯ್ಕೆ ಮಾಡಿದ್ದು ಸಿನಿಮಾ ರಂಗವನ್ನು. ‘ರಮಣ್ ರಾಘವ್ 2.0’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಈ ಚಿತ್ರ 2016ರಲ್ಲಿ ಬಿಡುಗಡೆ ಆಯಿತು. ಆ ಬಳಿಕ ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದರು. ಶೋಭಿತಾ ನಟನೆಯ ‘ದಿ ನೈಟ್ ಮ್ಯಾನೇಜರ್’ ವೆಬ್ ಸೀರಿಸ್ ಗಮನ ಸೆಳೆದಿದೆ. ಇದರಲ್ಲಿ ಅವರು ಕಾವೇರಿ ದೀಕ್ಷಿತ್ ಹೆಸರಿನ ಪಾತ್ರ ಮಾಡಿದ್ದಾರೆ. ಇದಕ್ಕೆ ಅವರಿಗೆ ಅವಾರ್ಡ್ ಕೂಡ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:26 am, Fri, 31 May 24

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು