ಅತ್ತ ದರ್ಶನ್, ಅಲ್ಲು ಅರ್ಜುನ್​ಗೆ ಬೇಲ್, ಇತ್ತ ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿಗೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್​ ದರ್ಶನ್​ಗೆ ಹೈಕೋರ್ಟ್ ಜಾಮೀನು ನೀಡಿದೆ. ,ಮತ್ತೊಂದೆಡೆ ಹೈದರಾಬಾದ್‌ ನಗರದ ಸಂಧ್ಯಾ ಥಿಯೇಟರ್‌ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣದಲ್ಲಿ ಬಂಧನವಾಗಿದ್ದ ಅಲ್ಲು ಅರ್ಜುನ್​ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಈ ಸುದ್ದಿ ಗದ್ದಲದ ಮಧ್ಯ ಇತ್ತ ಬಿಗ್​ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್​ನನ್ನು ಕೋರ್ಟ್, ​ ಪೊಲೀಸ್​ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಅತ್ತ ದರ್ಶನ್, ಅಲ್ಲು ಅರ್ಜುನ್​ಗೆ ಬೇಲ್, ಇತ್ತ ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿಗೆ
ಡ್ರೋಣ್ ಪ್ರತಾಪ್
Follow us
ಮಹೇಶ್ ಇ, ಭೂಮನಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on:Dec 13, 2024 | 9:18 PM

ನೀರಿನೊಳಗೆ ಸೋಡಿಯಂ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​, ಡ್ರೋನ್ ಪ್ರತಾಪ್​ನನ್ನು 3 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಿದೆ. ಮಿಡಿಗೇಶಿ ಪೊಲೀಸರ ವಶಕ್ಕೆ ನೀಡಿ ತುಮಕೂರು ಜಿಲ್ಲೆಯ ‌ಮಧುಗಿರಿ ನ್ಯಾಯಾಲಯ ಆದೇಶ ಹೊರಡಿಸಿದೆ. ನಿನ್ನೆ(ಡಿಸೆಂಬರ್ 12) ಮಿಡಿಗೇಶಿ ಪೊಲೀಸರು ಡ್ರೋನ್​ ಪ್ರತಾಪ್​ರನ್ನ ಬಂಧಿಸಿ ಇಂದು (ಡಿಸೆಂಬರ್ 13) ಮಧುಗಿರಿ ನ್ಯಾಯಾಲಯಕ್ಕೆ ಹಾಜರುಪಡಿಸಿ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದಾರೆ. ಪೊಲೀಸರ ಮನವಿ ಪುರಸ್ಕರಿಸಿದ ಕೋರ್ಟ್, ಡ್ರೋನ್​ ಪ್ರತಾಪ್​ನನ್ನು ಮೂರು ದಿನ ಮಿಡಿಗೇಶಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಸ್ಫೋಟಕ ವಸ್ತುವನ್ನು ನೀರಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಡಿಗೇಶಿ ಪೊಲೀಸರು ಡ್ರೋನ್​ ಪ್ರತಾಪ್​ನನ್ನು ನಿನ್ನೆ ಬಂಧಿಸಿದ್ದರು. ವಿಡಿಯೋ ಆಧರಿಸಿ ಎಫ್​ಐಆರ್​ ಮಾಡಲಾಗಿತ್ತು. ಮಿಡಿಗೇಶಿ ಪೊಲೀಸರು BNS ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿ ವಿಚಾರಣೆಗೊಳಪಡಿಸಿದ ವೇಳೆ ಡ್ರೋನ್​ ಪ್ರತಾಪ್​ ಹಲವು ಸಂಗತಿಯಗಳನ್ನು ಬಾಯಿಬಿಟ್ಟಿದ್ದರು. ​

ಇದನ್ನೂ ಓದಿ: ಈ ಹಿಂದೆಯೂ ಎರಡು ಬಾರಿ ಸ್ಫೋಟಿಸಿದ್ದ ಡ್ರೋನ್​ ಪ್ರತಾಪ್​: ತನಿಖೆಯಿಂದ ಬಯಲಾಯ್ತು ಇನ್ನಷ್ಟು ಅಚ್ಚರಿಯ ಅಂಶ

ಇದಕ್ಕೂ ‌ಮುನ್ನ ಎರಡು ಬಾರಿ ಇದೇ ರೀತಿಯ ಸ್ಫೋಟಿಸಿದ್ದೆ. ಸ್ಫೋಟದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಯೂಟ್ಯೂಬ್​​ನಲ್ಲಿ ಅಪ್ಲೋಡ್​ ಮಾಡಿದ್ದೆ ಎಂದು ಡ್ರೋನ್​ ಪ್ರತಾಪ್ ಪೊಲೀಸರ ಮುಂದೆ ಹೇಳಿದ್ದರು. ಹೀಗಾಗಿ ಪೊಲೀಸರು ಇನ್ನಷ್ಟು ತನಿಖೆ ಮಾಡಬೇಕಿರುವುದರಿಂದ ತಮ್ಮ ಕಸ್ಟಡಿಗೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದರು. ಅದರಂತೆ ಕೋರ್ಟ್​ ಡ್ರೋನ್​ ಪ್ರತಾಪ್​ನನ್ನು ಪೊಲೀಸ್ ವಶಕ್ಕೆ ನೀಡಿದ್ದು, ಖಾಕಿ ಇನ್ನಷ್ಟು ವಿಚಾರಣೆಗೊಳಪಡಿಸಲಿದೆ.

ಎಸ್​ಪಿ ಅಶೋಕ್ ವೆಂಕಟ್ ಹೇಳಿದ್ದೇನು?

ಡ್ರೋನ್ ಪ್ರತಾಪ್​ ಸೋಡಿಯಂ ಸ್ಫೋಟಕ ಎಸೆದಿದ್ದ ಪ್ರಕರಣದ ಬಗ್ಗೆ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಪ್ರತಿಕ್ರಿಯಿಸಿ, ಡ್ರೋನ್ ಪ್ರತಾಪ್ ವಿರುದ್ಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್​ ದಾಖಲಿಸಲಾಗಿದೆ. ಡ್ರೋನ್​ ಪ್ರತಾಪ್ ಕೆಮಿಕಲ್ ಬಳಸಿ ಸ್ಫೋಟಿಸಿ ಬಳಿಕ ಯೂಟ್ಯೂಬ್​ಗೆ ವಿಡಿಯೋ ಅಪ್​ಲೋಡ್​ ಮಾಡಿದ್ದಾರೆ. ಸದ್ಯ ಡ್ರೋನ್​ ಪ್ರತಾಪ್​​ನನ್ನ 3 ದಿನ ಕಸ್ಟಡಿಗೆ ಪಡೆಯಲಾಗಿದ್ದು, ಹಳೇ ವಿಡಿಯೋ ಏನಾದ್ರೂ ಇದ್ಯಾ ಎಂದು ಪರಿಶೀಲಿಸಲಾಗುತ್ತೆ ಎಂದು ತಿಳಿಸಿದರು.

ಬ್ಲಾಸ್ಟ್​ಗೆ ಬಳಸಿದ್ದ ವಸ್ತುಗಳನ್ನೇಲ್ಲಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದಾದ ಬಳಿಕ ಘಟನಾ ಸ್ಥಳಕ್ಕೆ ತೆರಳಲು ಬಳಸಿದ್ದ ಕಾರು, ಅಲ್ಲಿ ಬಳಸಿದ್ದ ಲ್ಯಾಪ್​ಟಾಪ್, ಮೊಬೈಲ್ ಸೇರಿ ಎಲ್ಲಾ ವಸ್ತುಗಳನ್ನ ಸೀಜ್ ಮಾಡಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇಂತಹ ಪ್ರಯೋಗಗಳಿಗೆ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಸ್ಥಳೀಯ ಪೊಲೀಸ್ ಠಾಣೆ ಹಾಗೂ ಸಂಬಂಧಿಸಿದ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೃಷಿ ಇಲಾಖೆ ಸೇರಿದಂತೆ ಹಲವು ಇಲಾಖೆಯ ಅನುಮತಿ ಪಡೆಯಬೇಕು. ಆದರೆ, ಡ್ರೋನ್​ ಪ್ರತಾಪ್​ ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ. ಹೀಗಾಗಿ ಪೊಲೀಸರೇ ವಿಡಿಯೋ ಆಧಾರದ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:17 pm, Fri, 13 December 24

ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸಿಎಂರನ್ನು ಭೇಟಿಯಾಗುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ: ಕಾಶೀನಾಥಯ್ಯ
ಸಿಎಂರನ್ನು ಭೇಟಿಯಾಗುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ: ಕಾಶೀನಾಥಯ್ಯ
ವಕ್ಫ್​ ಜಟಾಪಟಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಸವಾಲ್ ಹಾಕಿದ ಜಮೀರ್!
ವಕ್ಫ್​ ಜಟಾಪಟಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಸವಾಲ್ ಹಾಕಿದ ಜಮೀರ್!
ವಿಷಯ ಪ್ರಸ್ತಾಪಿಸಿ ಸಮರ್ಥಿಸಿಕೊಳ್ಳಲು ಹೆಣಗುತ್ತಿರುವ ವಿಪಕ್ಷ ನಾಯಕ ಅಶೋಕ
ವಿಷಯ ಪ್ರಸ್ತಾಪಿಸಿ ಸಮರ್ಥಿಸಿಕೊಳ್ಳಲು ಹೆಣಗುತ್ತಿರುವ ವಿಪಕ್ಷ ನಾಯಕ ಅಶೋಕ
ಪವಿತ್ರಾ ಗೌಡಗೆ ಜಾಮೀನು; ಮೊದಲ ಬಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಾಯಿ
ಪವಿತ್ರಾ ಗೌಡಗೆ ಜಾಮೀನು; ಮೊದಲ ಬಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತಾಯಿ
ಮದವೇರಿದಾಗ ಸ್ಮಶಾನದಲ್ಲಿ ಸುತ್ತು ಹಾಕಬೇಕು: ಹೀಗೆಂದಿದ್ದೇಕೆ ಅಶೋಕ್?
ಮದವೇರಿದಾಗ ಸ್ಮಶಾನದಲ್ಲಿ ಸುತ್ತು ಹಾಕಬೇಕು: ಹೀಗೆಂದಿದ್ದೇಕೆ ಅಶೋಕ್?