AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​​ನಲ್ಲಿ ಉಲ್ಬಣಗೊಂಡ ನಿರ್ಮಾಪಕ vs ಪ್ರದರ್ಶಕ ವಿವಾದ: ಡಿಸಿಎಂ ಪವನ್​​ಗೆ ದೂರು

Pawan Kalyan: ಇದೀಗ ತೆಲಂಗಾಣ ಪ್ರದರ್ಶಕರು ‘ಪೆದ್ದಿ’ ಸಿನಿಮಾವನ್ನು ಬಿಡುಗಡೆ ಮಾಡುವುದಿಲ್ಲವೆಂದು ‘ಬೆದರಿಕೆ’ ಸಹ ಹಾಕಿದ್ದಾರೆ. ಇದೆಲ್ಲದರ ನಡುವೆ ಕೆಲ ನಿರ್ಮಾಪಕರು ಆಂಧ್ರ ಪ್ರದೇಶ ಡಿಸಿಎಂ ಮತ್ತು ಸ್ಟಾರ್ ನಟ ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿ ಕೆಲ ಮನವಿಗಳನ್ನು ಸಲ್ಲಿಸಿದ್ದು, ಪವನ್ ಅವರು ನಿರ್ಮಾಪಕರಿಗೆ ಅಭಯ ನೀಡಿದ್ದಾರೆ ಎನ್ನಲಾಗುತ್ತಿದೆ.

ಟಾಲಿವುಡ್​​ನಲ್ಲಿ ಉಲ್ಬಣಗೊಂಡ ನಿರ್ಮಾಪಕ vs ಪ್ರದರ್ಶಕ ವಿವಾದ: ಡಿಸಿಎಂ ಪವನ್​​ಗೆ ದೂರು
Pawan Kalyan
ಮಂಜುನಾಥ ಸಿ.
|

Updated on: May 27, 2026 | 5:33 PM

Share

ತೆಲುಗು ಚಿತ್ರರಂಗದಲ್ಲಿ (Tollywood) ಸಿನಿಮಾ ನಿರ್ಮಾಪಕ ಮತ್ತು ಪ್ರದರ್ಶಕರ ನಡುವೆ ವಿವಾದ ಭುಗಿಲೆದ್ದಿದ್ದು, ಇತ್ತೀಚೆಗಷ್ಟೆ ಸಭೆ ನಡೆಸಿ ಸಂಧಾನ ನಡೆಸಿದ್ದರೂ ಸಹ ಸಮಸ್ಯೆ ಮುಗಿದಿಲ್ಲ. ನಿರ್ಮಾಪಕರು ಹಾಗೂ ಪ್ರದರ್ಶಕರು ಪರಸ್ಪರ ಬಹಿರಂಗವಾಗಿಯೇ ಪರಸ್ಪರ ಹೇಳಿಕೆ-ಪ್ರತಿಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ತೆಲಂಗಾಣ ಪ್ರದರ್ಶಕರು ‘ಪೆದ್ದಿ’ ಸಿನಿಮಾವನ್ನು ಬಿಡುಗಡೆ ಮಾಡುವುದಿಲ್ಲವೆಂದು ‘ಬೆದರಿಕೆ’ ಸಹ ಹಾಕಿದ್ದಾರೆ. ಇದೆಲ್ಲದರ ನಡುವೆ ಕೆಲ ನಿರ್ಮಾಪಕರು ಆಂಧ್ರ ಪ್ರದೇಶ ಡಿಸಿಎಂ ಮತ್ತು ಸ್ಟಾರ್ ನಟ ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿ ಕೆಲ ಮನವಿಗಳನ್ನು ಸಲ್ಲಿಸಿದ್ದು, ಪವನ್ ಅವರು ನಿರ್ಮಾಪಕರಿಗೆ ಅಭಯ ನೀಡಿದ್ದಾರೆ ಎನ್ನಲಾಗುತ್ತಿದೆ.

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಕ್ಯಾಬಿನೆಟ್ ಮಂತ್ರಿಗಳಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದಾರೆ. ಆಡಳಿತಾತ್ಮಕ ಮಟ್ಟದಲ್ಲಿ ಹಲವು ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ ಅವರಿಗೆ ಇದೆ. ಇದೇ ಕಾರಣಕ್ಕೆ ಇದೀಗ ತೆಲುಗು ಚಲನಚಿತ್ರ ರಂಗದ ಕೆಲ ನಿರ್ಮಾಪಕರು ಅವರನ್ನು ಭೇಟಿ ಮಾಡಿದ್ದಾರೆ. ರಾಜಮಂಡ್ರಿ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರನ್ನು ನಿರ್ಮಾಪಕರಾದ ನಾಗ ವಂಶಿ, ರವಿಶಂಕರ್, ಸಾಹು ಗಾರಪಾಟಿ ಮತ್ತು ಇತರರು ಭೇಟಿಯಾಗಿದ್ದರು. ವಿಶೇಷವಾಗಿ ಪ್ರಮುಖ ನಿರ್ಮಾಪಕ ಮತ್ತು ಹಲವು ಸಿನಿಮಾ ಮಂದಿರಗಳ ಮಾಲೀಕ ಆಗಿರುವ ಏಷಿಯನ್ ಸುನಿಲ್ ವಿರುದ್ಧ ಪವನ್ ಬಳಿ ದೂರುಗಳನ್ನು ಹೇಳಿದ್ದಾರೆ ಎನ್ನಲಾಗುತ್ತಿದೆ.

ಪ್ರಸ್ತುತ ಚಲನಚಿತ್ರ ಪ್ರದರ್ಶಕರು ನಿರ್ಮಾಪಕರಿಂದ ಶೇಕಡಾವಾರು ಆಧಾರದ ಸಿನಿಮಾಗಳ ಲಾಭ ಹಂಚಿಕೆ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ವರದಿಗಳ ಪ್ರಕಾರ, ಈಗ ನಿರ್ಮಾಪಕರ ದೂರುಗಳನ್ನು ಪವನ್ ಕಲ್ಯಾಣ್ ಅವರು ಈ ಸಮಸ್ಯೆಯನ್ನು ಆಲಿಸಿ ತಮ್ಮ ಜೊತೆಯಲ್ಲೇ ಇದ್ದ ಆಂಧ್ರದ ಸಿನೆಮಾಟೋಗ್ರಫಿ ಸಚಿವ ಕಂದುಲ ದುರ್ಗೇಶ್ ಅವರ ಗಮನಕ್ಕೆ ತಂದರು. ಈ ಪರಿಸ್ಥಿತಿಯನ್ನು ಆದ್ಯತೆಯ ಮೇರೆಗೆ ನಿರ್ವಹಿಸಬೇಕು ಮತ್ತು ಆಗಾಗ್ಗೆ ತಮಗೆ ಇದರ ಪ್ರಗತಿಯ ಬಗ್ಗೆ ಅಪ್‌ಡೇಟ್ ನೀಡುತ್ತಿರಬೇಕು ಎಂದು ಸಂಬಂಧಪಟ್ಟ ತಂಡಕ್ಕೆ ಕಲ್ಯಾಣ್ ಅವರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ರಾಮ್ ಚರಣ್-ಪವನ್ ಕಲ್ಯಾಣ್ ಬಾಂಡಿಂಗ್ ನೋಡಿ ಹೊಗಳಿದ ಶಿವಣ್ಣ 

ಪ್ರಸ್ತುತ ತೆಲುಗು ರಾಜ್ಯಗಳಲ್ಲಿ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಬಾಡಿಗೆ ಆಧಾರದಲ್ಲಿ ಸಿನಿಮಾಗಳನ್ನು ಪ್ರದರ್ಶಿಸುತ್ತಿವೆ. ಆದರೆ ಇದೀಗ ಪ್ರದರ್ಶಕರು, ಇನ್ನು ಮುಂದೆ ಪರ್ಸೆಂಟೇಜ್ ಆಧಾರದಲ್ಲಿ ಸಿನಿಮಾಗಳನ್ನು ಪ್ರದರ್ಶಿಸುವುದಾಗಿ ಪಟ್ಟು ಹಿಡಿದಿದ್ದು, ನಿರ್ಮಾಪಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗಷ್ಟೆ ನಡೆದ ಸಂಧಾನ ಸಭೆಯಲ್ಲಿ ನಿರ್ಮಾಪಕರು ಲಾಭ ಹಂಚಿಕೆಗೆ ಒಪ್ಪಿಕೊಂಡಿದ್ದಾರೆ. ಆದರೆ ಪ್ರತಿ ಸೆಂಟರ್​​ಗಳಿಗೂ ಭಿನ್ನವಾದ ಪರ್ಸೆಂಟೇಜ್ ಮಾದರಿಗಳನ್ನು ನಿಗದಿ ಪಡಿಸಬೇಕು ಎಂಬ ತೀರ್ಮಾನಕ್ಕೆ ಬಂದಿದ್ದು, ಆದರೆ ಈಗ ಬಿಡುಗಡೆ ಆಗಲಿರುವ ‘ಪೆದ್ದಿ’ ಸಿನಿಮಾ ಅನ್ನು ಹಳೆಯ ಮಾದರಿಯಲ್ಲೇ ಪ್ರದರ್ಶಿಸಬೇಕು ಎಂದಿದ್ದರು. ಆದರೆ ಇದೀಗ ಕೆಲ ಸಿನಿಮಾ ಪ್ರದರ್ಶಕರು, ‘ಪೆದ್ದಿ’ ಸಿನಿಮಾ ಅನ್ನು ಲಾಭ ಹಂಚಿಕೆ ಆಧಾರದಲ್ಲೇ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ