AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನರಗಳು ಬ್ಲಾಕ್ ಆಗಿವೆ’; ಆರೋಗ್ಯದ ಬಗ್ಗೆ ಸೋನು ನಿಗಮ್ ಆತಂಕಕಾರಿ ಮಾಹಿತಿ

ಖ್ಯಾತ ಗಾಯಕ ಸೋನು ನಿಗಮ್ ತೀವ್ರ ನರಗಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಎಂಆರ್‌ಐ, ಸಿಟಿ ಸ್ಕ್ಯಾನ್ ಮತ್ತು ನೋವಿನ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಔಷಧಿಗಳ ಪರಿಣಾಮ ಗಂಟಲಿನ ಧ್ವನಿಯಲ್ಲೂ ಬದಲಾವಣೆಯಾಗಿದೆ. ಆದರೂ, ನೋವನ್ನು ತಡೆದು ಮುಂಬೈನಲ್ಲಿ ನಡೆಯುವ ಲೈವ್ ಶೋಗೆ ವೇದಿಕೆ ಏರಲು ಸಜ್ಜಾಗಿದ್ದಾರೆ. ಅವರ ವೃತ್ತಿಪರತೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಶೀಘ್ರ ಗುಣಮುಖರಾಗಲು ಹಾರೈಸುತ್ತಿದ್ದಾರೆ.

‘ನರಗಳು ಬ್ಲಾಕ್ ಆಗಿವೆ’; ಆರೋಗ್ಯದ ಬಗ್ಗೆ ಸೋನು ನಿಗಮ್ ಆತಂಕಕಾರಿ ಮಾಹಿತಿ
ಸೋನು ನಿಗಮ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 17, 2026 | 12:30 PM

Share

ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅವರು ಸದ್ಯ ತೀವ್ರವಾದ ನರಗಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದಾಗ್ಯೂ, ಅವರು ತಾವು ಮುಂಚಿತವಾಗಿ ಒಪ್ಪಿಕೊಂಡಿರುವ ಸಂಗೀತ ಕಚೇರಿಯನ್ನು ರದ್ದುಗೊಳಿಸದೆ, ಎಂದಿನಂತೆ ವೇದಿಕೆ ಏರಲು ಸಜ್ಜಾಗಿದ್ದಾರೆ. ಮುಂಬೈನಲ್ಲಿ ನಡೆಯಲಿರುವ ಲೈವ್ ಪರ್ಫಾರ್ಮೆನ್ಸ್‌ಗೂ ಮುನ್ನ ಸೋನು ನಿಗಮ್ ಅವರು ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಆರೋಗ್ಯದ ಸ್ಥಿತಿಯ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

ನೋವಿನ ನಡುವೆ ಚಿಕಿತ್ಸೆ: ಸೋನು ನಿಗಮ್ ಮಾತು

ತಮ್ಮ ಅನಾರೋಗ್ಯದ ಕುರಿತು ಮಾತನಾಡಿರುವ ಸೋನು ನಿಗಮ್, ‘ನನ್ನ ನರಗಳು ಬ್ಲಾಕ್ ಆಗಿವೆ. ಕಳೆದ ಒಂದು ವಾರದಿಂದ ಎಂಆರ್‌ಐ ಮತ್ತು ಸಿಟಿ (CT) ಸ್ಕ್ಯಾನ್‌ಗಳನ್ನು ಮಾಡಿಸಿಕೊಳ್ಳುತ್ತಿದ್ದೇನೆ ಹಾಗೂ ಸಾಕಷ್ಟು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ’ ಎಂದು ಹೇಳಿದ್ದಾರೆ. ಚಿಕಿತ್ಸೆಯ ಭಾಗವಾಗಿ ನಡೆಯುತ್ತಿರುವ ಫಿಸಿಯೋಥೆರಪಿ ಸೆಷನ್‌ಗಳು ಅತ್ಯಂತ ನೋವಿನಿಂದ ಕೂಡಿವೆ ಎಂದಿರುವ ಅವರು, ಸದ್ಯ ನೋವು ನಿವಾರಕ ಮಾತ್ರೆಗಳ ಸಹಾಯದಿಂದ ನೋವನ್ನು ತಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ಕನ್ನಡದ ಹೀರೋಗಳಿಗೆ ಇದನ್ನು ಹೇಳೋ ಗಟ್ಸ್ ಇದೆಯಾ; ಸೋನು ನಿಗಮ್ ಹೀಗೆ ಹೇಳಿದ್ರಾ?

ಗಂಟಲಿನ ಮೇಲೂ ಬಿದ್ದಿದೆ ಪ್ರಭಾವ!

ನರಗಳನ್ನು ಸಡಿಲಗೊಳಿಸಲು ವೈದ್ಯರು ನೀಡಿರುವ ಹೈ-ಡೋಸ್ ಔಷಧಿಗಳಿಂದಾಗಿ ಸೋನು ನಿಗಮ್ ಅವರ ಗಂಟಲಿನ ಧ್ವನಿಯಲ್ಲೂ ಏರುಪೇರಾಗಿದೆ. ‘ಮಾತ್ರೆಗಳ ಕಾರಣದಿಂದಾಗಿ ನನ್ನ ಗಂಟಲು ಕೂಡ ಸ್ವಲ್ಪ ಭಾರವಾದಂತೆ ಅನಿಸುತ್ತಿದೆ’ ಎಂದು ಅವರು ಹೇಳಿದ್ದಾರೆ. ಸಾಮಾನ್ಯವಾಗಿ ಗಾಯಕರಿಗೆ ಲೈವ್ ಶೋ ಇರುವಾಗ ಧ್ವನಿಯಲ್ಲಿ ಸಣ್ಣ ಬದಲಾವಣೆಯಾದರೂ ಆತಂಕ ಮೂಡಿಸುತ್ತದೆ. ಆದರೆ ಸೋನು ನಿಗಮ್ ಮಾತ್ರ ಯಾವುದಕ್ಕೂ ಧೃತಿಗೆಡದೆ ಸ್ಟೇಜ್ ಹತ್ತಲು ನಿರ್ಧರಿಸಿದ್ದಾರೆ.

ಅಭಿಮಾನಿಗಳಿಂದ ಹಾರೈಕೆ:

ತುಂಬಾ ದಿನಗಳ ನಂತರ ಮುಂಬೈನಲ್ಲಿ ವೇದಿಕೆ ಏರುತ್ತಿರುವುದರಿಂದ, ಯಾವುದೇ ಕಾರಣಕ್ಕೂ ಶೋ ಕ್ಯಾನ್ಸಲ್ ಮಾಡುವುದಿಲ್ಲ ಎಂದು ಸೋನು ಸ್ಪಷ್ಟಪಡಿಸಿದ್ದಾರೆ. ಗಾಯಕರ ಈ ವೃತ್ತಿಪರತೆ ಮತ್ತು ಬದ್ಧತೆಯನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಸೋನು ನಿಗಮ್ ಅವರ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಸಾವಿರಾರು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:02 am, Wed, 17 June 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು
ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು
ಆನೆ ಯಾವುದು ಅಂತಾನೇ ಹೇಳಿಲ್ಲ ಅಂದ್ರೆ ಅಂಬಾರಿ ಯಾಕೆ ಕೊಡಬೇಕು?
ಆನೆ ಯಾವುದು ಅಂತಾನೇ ಹೇಳಿಲ್ಲ ಅಂದ್ರೆ ಅಂಬಾರಿ ಯಾಕೆ ಕೊಡಬೇಕು?
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ