AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಮರಳಿ ನಮ್ಮ ಮನೆಗಳನ್ನು ನಿರ್ಮಿಸುವ ಸಮಯ’; ಆಂಧ್ರಕ್ಕೆ ಸೋನು ಸೂದ್​ ಸಹಾಯ ಹಸ್ತ

ಕೊವಿಡ್​ ಕಾಣಿಸಿಕೊಂಡ ನಂತರ ಸೋನು ಅವರು ದೊಡ್ಡ ಮಟ್ಟದಲ್ಲಿ ಸಹಾಯ ಮಾಡಿದ್ದರು. ಸಾಕಷ್ಟು ಜನರ ಪಾಲಿಗೆ ಅಕ್ಷರಶಃ ದೇವರಾಗಿದ್ದಾರೆ ಸೋನು. ಇದೇ ಕಾರಣಕ್ಕೆ ಅವರ ಫೋಟೋವನ್ನು ಮನೆಯಲ್ಲಿಟ್ಟು ಪೂಜೆ ಮಾಡುವ ಅನೇಕರಿದ್ದಾರೆ.

‘ಇದು ಮರಳಿ ನಮ್ಮ ಮನೆಗಳನ್ನು ನಿರ್ಮಿಸುವ ಸಮಯ’; ಆಂಧ್ರಕ್ಕೆ ಸೋನು ಸೂದ್​ ಸಹಾಯ ಹಸ್ತ
ಸೋನು ಸೂದ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 21, 2021 | 9:13 PM

Share

ಆಂಧ್ರಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ತಿರುಮಲ ತಿರುಪತಿಯಲ್ಲಿ‌ ಭಾರಿ ಮಳೆಯ ಕಾರಣದಿಂದ ಎರಡು ದಿನ‌ ಭಕ್ತರಿಗೆ ದೇವರ ದರ್ಶನವನ್ನು ಬಂದ್ ಮಾಡಲಾಗಿದೆ. ತಿರುಪತಿ ಘಾಟ್ ರಸ್ತೆಗೆ ಹಾನಿಯಾಗಿದ್ದು, ಬೆಟ್ಟಕ್ಕೆ ಹೋಗುವ ರಸ್ತೆಯನ್ನು ಟಿಟಿಡಿ ದುರಸ್ತಿಗೊಳಿಸುತ್ತಿದೆ. ಈ ಮಳೆಗೆ ಸಿಕ್ಕು ಸಾಕಷ್ಟು ಜನರು ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ ಭಾರೀ ಮಳೆಗೆ 25ಕ್ಕೂ ಹೆಚ್ಚು ಜನರು ಅಸುನೀಗಿದ್ದಾರೆ. ಅಲ್ಲದೇ ಸುಮಾರು 100ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಎನ್​ಡಿಆರ್​ಎಫ್​ ತಂಡ ತನ್ನ ಕಾರ್ಯನಿರ್ವಹಿಸುತ್ತಿದೆ. ಈಗ ಸೋನು ಸೂದ್​ ಅವರು ಮಳೆಯಲ್ಲಿ ಸಿಲುಕಿದವರ ಸಹಾಯಕ್ಕೆ ಬಂದಿದ್ದಾರೆ.

ಕೊವಿಡ್​ ಕಾಣಿಸಿಕೊಂಡ ನಂತರ ಸೋನು ಅವರು ದೊಡ್ಡ ಮಟ್ಟದಲ್ಲಿ ಸಹಾಯ ಮಾಡಿದ್ದರು. ಸಾಕಷ್ಟು ಜನರ ಪಾಲಿಗೆ ಅಕ್ಷರಶಃ ದೇವರಾಗಿದ್ದಾರೆ ಸೋನು. ಇದೇ ಕಾರಣಕ್ಕೆ ಅವರ ಫೋಟೋವನ್ನು ಮನೆಯಲ್ಲಿಟ್ಟು ಪೂಜೆ ಮಾಡುವ ಅನೇಕರಿದ್ದಾರೆ. ಮಾಡುತ್ತಿರುವ ಸಹಾಯವನ್ನು ಅವರು ನಿಲ್ಲಿಸಿಲ್ಲ. ಕೇವಲ ಕೊವಿಡ್​ ಮಾತ್ರವಲ್ಲದೆ, ಉಳಿದ ಸಮಸ್ಯೆ ಎದುರಿಸುತ್ತಿರುವ ಜನರಿಗೂ ಸೋನು ಸಹಾಯ ಮಾಡುತ್ತಿದ್ದಾರೆ. ಆಂಧ್ರದ ಮಳೆಯಲ್ಲಿ ಸಿಲುಕಿದವರಿಗೆ ಅವರು ಸಹಾಯಕ್ಕೆ ಮುಂದಾಗಿದ್ದಾರೆ.

‘ಸೋನು ಅವರೇ ನೆಲ್ಲೂರು ಮತ್ತು ತಿರುಪತಿಯು ಅತಿವೃಷ್ಟಿಯಿಂದ ತೀವ್ರವಾಗಿ ಹಾನಿಗೊಳಗಾಗಿದೆ. ಮಳೆಯ ನೀರು ಅನೇಕ ಮನೆಗಳಿಗೆ ನುಗ್ಗಿದೆ ಮತ್ತು ಸಾಕಷ್ಟು ಜನರು ಮನೆ ಕಳೆದುಕೊಂಡಿದ್ದಾರೆ. ತಿನ್ನೋಕೆ ಆಹಾರ ಇಲ್ಲ. ದಯವಿಟ್ಟು ಪ್ರವಾಹ ಪೀಡಿತ ಜನರಿಗೆ ಸಹಾಯ ಮಾಡಿ’ ಎಂದು ಕೋರಲಾಗಿತ್ತು. ಇದಕ್ಕೆ ಪಾಸಿಟಿವ್​ ಆಗಿ ಉತ್ತರಿಸಿರುವ ಸೋನು ಸೂದ್​, ‘ಮರಳಿ ನಮ್ಮ ಮನೆಗಳನ್ನು ನಿರ್ಮಿಸುವ ಸಮಯ’ ಎಂದಿದ್ದಾರೆ. ಈ ಮೂಲಕ ಸಹಾಯ ಮಾಡುತ್ತೇನೆ ಎನ್ನುವ ಭರವಸೆ ನೀಡಿದ್ದಾರೆ.

‘ತೆಲುಗು ದೇಶಂ ಪಾರ್ಟಿ’ ಮುಖಂಡ ಚಂದ್ರಬಾಬು ನಾಯ್ಡು ಅವರ ಪತ್ನಿ ಭುವನೇಶ್ವರಿ ಬಗ್ಗೆ ಆಂಧ್ರದ ರಾಜಕಾರಣಿಗಳು ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ. ಇದರ ವಿರುದ್ಧ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಂದ್ರಬಾಬು ನಾಯ್ಡು ಕೂಡ ವಾಹಿನಿಗಳ ಎದುರು ಕಣ್ಣೀರು ಹಾಕಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಸೋನು ಸೂದ್ ಅವರು ಚಂದ್ರಬಾಬು ನಾಯ್ಡು ಜತೆ ಮಾತುಕತೆ ನಡೆಸಿ, ಸಮಾಧಾನದ ಮಾತುಗಳನ್ನು ಆಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶದಲ್ಲಿ ಮಳೆಯಿಂದ ಸಾವಿನ ಸಂಖ್ಯೆ 25ಕ್ಕೆ ಏರಿಕೆ, 17ಕ್ಕೂ ಅಧಿಕ ಜನ ನಾಪತ್ತೆ, 20,000ಕ್ಕೂ ಅಧಿಕ ಜನರ ಸ್ಥಳಾಂತರ

Published On - 8:45 pm, Sun, 21 November 21

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..