ಸೋನು ಸೂದ್ ಭೇಟಿಯಾಗಲು 700 ಕಿ.ಮೀ. ಪಾದಯಾತ್ರೆ ಮಾಡಿದ ಯುವಕ; ರಿಯಲ್​ ಹೀರೋ ಪ್ರತಿಕ್ರಿಯೆ ಏನು?

ಈ ಅಭಿಮಾನಿಯ ಹೆಸರು ವೆಂಕಟೇಶ್​. ಸೋನು ಸೂದ್​ ಅವರನ್ನು ಭೇಟಿ ಮಾಡಲು ಬರಿಗಾಲಿನಲ್ಲಿ ಹೈದರಾಬಾದ್​ನಿಂದ ಮುಂಬೈವರೆಗೆ ಬರೋಬ್ಬರಿ 700 ಕಿಲೋಮೀಟರ್​ ಪಾದಯಾತ್ರೆ ಮಾಡಿದ್ದಾನೆ.

ಸೋನು ಸೂದ್ ಭೇಟಿಯಾಗಲು 700 ಕಿ.ಮೀ. ಪಾದಯಾತ್ರೆ ಮಾಡಿದ ಯುವಕ; ರಿಯಲ್​ ಹೀರೋ ಪ್ರತಿಕ್ರಿಯೆ ಏನು?
ಸೋನು ಸೂದ್​ ಜೊತೆ ಅಭಿಮಾನಿ ವೆಂಕಟೇಶ್​
Follow us
|

Updated on: Jun 11, 2021 | 8:12 AM

ನಟ ಸೋನು ಸೂದ್​ ಅವರು ಲಕ್ಷಾಂತರ ಜನರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ ಎಂಬುದರಲ್ಲಿ ಎರಡನೇ ಮಾತಿಲ್ಲ. ಕಳೆದ ವರ್ಷ ಲಾಕ್​ಡೌನ್​ ಆರಂಭ ಆದಾಗಿನಿಂದಲೂ ಅವರು ಹಲವು ಬಗೆಯಲ್ಲಿ ಜನರಿಗೆ ಸಹಾಯ ಮಾಡಿದ್ದಾರೆ. ಹಾಗಾಗಿ ಅವರಿಗೆ ಅಸಂಖ್ಯ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ನೂರಾರು ಬಗೆಯಲ್ಲಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸುವ ಜನರಿದ್ದಾರೆ. ಇತ್ತೀಚೆಗೆ ವೆಂಕಟೇಶ್​ ಎಂಬ ಯುವಕ ಎಲ್ಲರ ಗಮನ ಸೆಳೆದಿದ್ದಾನೆ. ಸೋನು ಸೂದ್​ ಅವರನ್ನು ಭೇಟಿ ಮಾಡಬೇಕು ಎಂಬ ಕಾರಣಕ್ಕೆ ಆತ ಬರೋಬ್ಬರಿ 700 ಕಿಲೋ ಮೀಟರ್​ ನಡೆದಿದ್ದಾನೆ.

ಈ ಅಭಿಮಾನಿಯ ಹೆಸರು ವೆಂಕಟೇಶ್​. ಹೈದರಾಬಾದ್​ ಮೂಲದ ಈತನಿಗೆ ಸೋನು ಸೂದ್​ ಕಂಡರೆ ಅಪಾರ ಗೌರವ. ಹಾಗಾಗಿ ಅವರನ್ನು ಭೇಟಿ ಮಾಡಲು ಬರಿಗಾಲಿನಲ್ಲಿ ಹೈದರಾಬಾದ್​ನಿಂದ ಮುಂಬೈವರೆಗೆ ಬರೋಬ್ಬರಿ 700 ಕಿಲೋಮೀಟರ್​ ಪಾದಯಾತ್ರೆ ಮಾಡಿದ್ದಾನೆ. ಈತನ ಅಭಿಮಾನ ಕಂಡು ಸೋನು ಸೂದ್​ ಖುಷಿ ಆಗಿದ್ದಾರೆ ಎಂಬುದೇನೋ ನಿಜ. ಆದರೆ ಬೇರೆ ಯಾರೂ ಹೀಗೆ ಮಾಡಬೇಡಿ ಎಂದು ತಮ್ಮ ಅಭಿಮಾನಿ ಬಳಗಕ್ಕೆ ಅವರು ಬುದ್ಧಿಮಾತು ಹೇಳಿದ್ದಾರೆ.

‘ನನ್ನನ್ನು ಭೇಟಿಯಾಗಲು ವೆಂಕಟೇಶ್​ ಹೈದರಾಬಾದ್​ನಿಂದ ಮುಂಬೈವರೆಗೆ ಬರಿಗಾಲಿನಲ್ಲಿ ನಡೆದುಕೊಂಡು ಬಂದಿದ್ದಾನೆ. ಅವನಿಗೆ ವಾಹನದ ವ್ಯವಸ್ಥೆ ಮಾಡಿದರೂ ಕೂಡ ಅವನು ಅದನ್ನು ಒಪ್ಪಲಿಲ್ಲ. ಅವನು ನನಗೆ ಸ್ಫೂರ್ತಿದಾಯಕವಾಗಿದ್ದಾನೆ. ಆದರೆ ಬೇರೆ ಯಾರೂ ಕೂಡ ಈ ರೀತಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವ ಕಷ್ಟವನ್ನು ತೆಗೆದುಕೊಳ್ಳಲು ನಾನು ಪ್ರೇರಣೆ ನೀಡುವುದಿಲ್ಲ’ ಎಂದು ಸೋನು ಸೂದ್​ ಅವರು ಟ್ವೀಟರ್​ ಮೂಲಕ ತಿಳಿಸಿದ್ದಾರೆ.

ಈ ವರ್ಷ ದೇಶಾದ್ಯಂತ ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆದಾಗ ಸೋನು ಸೂದ್​ ಅವರು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿದರು. ಅವರ ಸೂದ್​ ಚಾರಿಟಿ ಫೌಂಡೇಶನ್​ ಮೂಲಕ ಲಕ್ಷಾಂತರ ಜನರಿಗೆ ಅವರ ನೆರವಾಗಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ ಮಾಡಿಸುವುದು, ಆಕ್ಸಿಜನ್​ ಸಿಲಿಂಡರ್​ಗಳನ್ನು ಪೂರೈಸುವುದು, ಹಸಿದವರಿಗೆ ಉಚಿತವಾಗಿ ಊಟ ಒದಗಿಸುವುದು ಸೇರಿದಂತೆ ನೂರಾರು ಕೆಲಸಗಳನ್ನು ಅವರು ಮಾಡಿದ್ದಾರೆ. ಹಾಗಾಗಿ ಅವರನ್ನು ಕಂಡರೆ ಎಲ್ಲರಿಗೂ ಪ್ರೀತಿ.

ಇತ್ತೀಚೆಗೆ ಸೋನು ಸೂದ್​ ಬಗ್ಗೆ ಮಾತನಾಡಿದ್ದ ಹುಮಾ ಖುರೇಶಿ. ‘ಸೋನು ಪ್ರಧಾನಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲಬೇಕು. ನಾವೆಲ್ಲ ಅವರಿಗೆ ಖಂಡಿತವಾಗಿ ವೋಟ್​ ಹಾಕುತ್ತೇವೆ’ ಎಂದು ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಸೋನು ಸೂದ್​, ‘ಇದೆಲ್ಲ ಜಾಸ್ತಿ ಆಯಿತು’ ಎಂದಿದ್ದರು.

ಇದನ್ನೂ ಓದಿ:

ಸೋನು ಸೂದ್​ ಒಂದು ಸಿನಿಮಾಗೆ ಪಡೆಯೋ ಸಂಭಾವನೆ ಎಷ್ಟು? ಈ ನಟನಿಗೆ ಎಲ್ಲಿಂದ ಬರುತ್ತೆ ಇಷ್ಟೊಂದು ಹಣ?

ಸೋನು ಸೂದ್​ ದುಡ್ಡಿಗಾಗಿ ಹಪಾಹಪಿಸುವ ವ್ಯಕ್ತಿ ಆಗಿದ್ದರು; ಇನ್ನೊಂದು ಮುಖ ತೆರೆದಿಟ್ಟ ನಿರ್ಮಾಪಕ

ತಾಜಾ ಸುದ್ದಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!