Sonu Sood: ಸೋನು ಸೂದ್​ ಹೆಸರಲ್ಲಿ ಮಹಾಮೋಸ; ಕೊರೊನಾ ಕಾಲದಲ್ಲೂ ದುಡ್ಡು ಕಬಳಿಸಿದ ಕಿಡಿಗೇಡಿಗಳು

Sonu Sood Foundation: ಸೋನು ಸೂದ್​ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರಿಂದ ಹಣ ಕಬಳಿಸಲು ಕೆಲವರು ಸ್ಕೆಚ್​ ಹಾಕಿದ್ದಾರೆ. ಈ ಮೋಸದ ಜಾಲದ ಬಗ್ಗೆ ಸ್ವತಃ ಸೋನು ಸೂದ್​ಗೆ ಈಗ ಮಾಹಿತಿ ಸಿಕ್ಕಿದೆ. ಅದನ್ನು ಅವರು ಬಯಲಿಗೆ ಎಳೆದಿದ್ದಾರೆ.

Sonu Sood: ಸೋನು ಸೂದ್​ ಹೆಸರಲ್ಲಿ ಮಹಾಮೋಸ; ಕೊರೊನಾ ಕಾಲದಲ್ಲೂ ದುಡ್ಡು ಕಬಳಿಸಿದ ಕಿಡಿಗೇಡಿಗಳು
ಸೋನು ಸೂದ್
Follow us
ಮದನ್​ ಕುಮಾರ್​
|

Updated on:May 18, 2021 | 8:19 AM

ಬಹುಭಾಷಾ ನಟ ಸೋನು ಸೂದ್​ ಮಾಡುತ್ತಿರುವ ಸಮಾಜಮುಖಿ ಕೆಲಸಗಳ ಬಗ್ಗೆ ಹೊಸದಾಗಿ ಹೇಳಬೇಕಾದ್ದಿಲ್ಲ. ಅಷ್ಟರಮಟ್ಟಿಗೆ ಅವರು ತಮ್ಮ ಕೆಲಸಗಳ ಮೂಲಕವೇ ಫೇಮಸ್​ ಆಗಿದ್ದಾರೆ. ಸಿನಿಮಾಗಳಿಂದ ಎಷ್ಟು ಅಭಿಮಾನಿಗಳನ್ನು ಅವರು ಸಂಪಾದಿಸಿಕೊಂಡಿದ್ದರೋ ಅದಕ್ಕಿಂತಲೂ 10 ಪಟ್ಟು ಹೆಚ್ಚು ಅಭಿಮಾನಿಗಳನ್ನು ಅವರು ತಮ್ಮ ಹೃದಯಶ್ರೀಮಂತಿಕೆಯ ಕಾರಣದಿಂದ ಗಳಿಸಿಕೊಂಡಿದ್ದಾರೆ. ಸೋನು ಸೂದ್​ ಎಂದರೆ ಒಂದು ಭರವಸೆ ಎನ್ನುವ ನಂಬಿಕೆ ಜನರಲ್ಲಿ ಮೂಡಿದೆ. ಆದರೆ ಆ ನಂಬಿಕೆಯನ್ನೇ ದುರ್ಬಳಕೆ ಮಾಡಿಕೊಳ್ಳುವ ಜಾಲಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕಿರುವುದು ಅನಿವಾರ್ಯ ಆಗಿದೆ.

ದೇಶಾದ್ಯಂತ ಕೊರೊನಾ ವೈರಸ್​ ಎರಡನೇ ಅಲೇ ಜೋರಾಗಿ ಹಬ್ಬಿರುವ ಈ ಸಂದರ್ಭದಲ್ಲಿ ಅನೇಕರಿಗೆ ಸೋನು ಸೂದ್​ ನೆರವು ನೀಡುತ್ತಿದ್ದಾರೆ. ಆಕ್ಸಿಜನ್​, ಔಷಧಿ, ಬೆಡ್​ ವ್ಯವಸ್ಥೆ ಸೇರಿದಂತೆ ಅನೇಕ ಸಹಾಯಗಳನ್ನು ಅವರು ಮಾಡುತ್ತಿದ್ದಾರೆ. ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರಿಂದ ಹಣ ಕಬಳಿಸಲು ಕೆಲವರು ಸ್ಕೆಚ್​ ಹಾಕಿದ್ದಾರೆ. ಈ ಮೋಸದ ಜಾಲದ ಬಗ್ಗೆ ಸ್ವತಃ ಸೋನು ಸೂದ್​ಗೆ ಈಗ ಮಾಹಿತಿ ಸಿಕ್ಕಿದೆ. ಅದನ್ನು ಅವರು ಬಯಲಿಗೆ ಎಳೆದಿದ್ದಾರೆ.

‘ಸೋನು ಸೂದ್​ ಅವರ ತಂಡಕ್ಕೆ ನೀವು ದೇಣಿಗೆ ನೀಡಬಹುದು. ಒಂದು ರೂಪಾಯಿಯಿಂದ ನಿಮಗೆ ಎಷ್ಟು ಸಾಧ್ಯವೋ ಅಷ್ಟು ಹಣವನ್ನು ನೀಡಬಹುದು. ಈ ಕೆಳಗಿನ ನಂಬರ್​ಗೆ ಫೋನ್​ಪೇ ಮಾಡಿ’ ಎಂದು ಬರೆದಿರುವ ಫೋಸ್ಟರ್​ ಇಂಟರ್​ನೆಟ್​ನಲ್ಲಿ ಹರಿದಾಡುತ್ತಿದೆ. ಅದರಲ್ಲಿ ಸೋನು ಸೂದ್​ ಅವರ ಫೋಟೋ ಕೂಡ ಇದೆ. ಸೋಶಿಯಲ್​ ಮೀಡಿಯಾದಲ್ಲಿ ಅದರ ಸ್ಕ್ರೀನ್ ಶಾಟ್​ ಹಂಚಿಕೊಂಡಿರುವ ಸೋನು ಸೂದ್​ ಅವರು ‘ಫೇಕ್​’ ಎಂದು ಹೇಳಿದ್ದಾರೆ. ಇಂಥ ಜಾಲದ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಜನರಿಗೆ ಅವರು ವಾರ್ನಿಂಗ್​ ನೀಡಿದ್ದಾರೆ.

ಇನ್ನು, ಸೋನು ಸೂದ್​ ಎಷ್ಟೇ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದರೂ ಒಂದು ವರ್ಗದ ಜನರು ಅವರನ್ನು ಅನುಮಾನದ ಕಣ್ಣುಗಳಿಂದಲೇ ನೋಡುತ್ತಿದ್ದಾರೆ. ಒಡಿಶಾದಲ್ಲಿ ಒಬ್ಬ ವ್ಯಕ್ತಿಗೆ ಇತ್ತೀಚೆಗೆ ಸೂನು ಸೂದ್​ ಬೆಡ್​ ವ್ಯವಸ್ಥೆ ಮಾಡಿಸಿದ್ದರು. ಅದರ ಬಗ್ಗೆ ಅಲ್ಲಿನ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದರು. ತಾವು ಮಾಡದೇ ಇರುವ ಕೆಲಸಕ್ಕೆ ಸೋನು ಸೂದ್​ ಕ್ರೆಡಿಟ್​ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಮಾಡಲಾಗಿತ್ತು. ಆದರೆ ಅದಕ್ಕೆ ಸಾಕ್ಷಿ ಸಮೇತ ಸೋನು ಸೂದ್​ ಉತ್ತರ ನೀಡಿದ್ದಾರೆ.

ಇದನ್ನೂ ಓದಿ:

ಬೆಂಗಳೂರಿಗರ ಸಹಾಯಕ್ಕೆ ನಿಂತ ಸೋನು ಸೂದ್​; ಈ ಸಂಖ್ಯೆಗೆ ಸಂಪರ್ಕಿಸಿದರೆ ಮನೆಬಾಗಿಲಿಗೆ ಬರುತ್ತೆ ಆಕ್ಸಿಜನ್​ ಸಿಲಿಂಡರ್

Sonu Sood: ಕೊರೊನಾ ಸೋಂಕಿತರ ನೆರವಿಗಾಗಿ ಮತ್ತೊಂದು ಸಾಹಸಕ್ಕೆ ಮುಂದಾದ ರಿಯಲ್​ ಹೀರೋ ಸೋನು ಸೂದ್​

Published On - 8:13 am, Tue, 18 May 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್