AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತು ಮಗು ಕೇಸ್​: ಸೋನು ಶ್ರೀನಿವಾಸ್​ ಗೌಡ 4 ದಿನಗಳ ಕಾಲ ​ಪೊಲೀಸ್​ ಕಸ್ಟಡಿಗೆ

ಸೋನು ಶ್ರೀನಿವಾಸ್​ ಗೌಡ ಅವರನ್ನು ರಾಯಚೂರಿಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಲಿದ್ದಾರೆ. ಹಾಗಾಗಿ ನ್ಯಾಯಾಲಯವು ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಬಾಲಕಿ ಪರಿಚಯವಾಗಿದ್ದ ಸ್ಥಳ ಮತ್ತು ಬಾಲಕಿಯ ನಿವಾಸ ಸೇರಿ ಹಲವು ಕಡೆಗಳಿಗೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.

ದತ್ತು ಮಗು ಕೇಸ್​: ಸೋನು ಶ್ರೀನಿವಾಸ್​ ಗೌಡ 4 ದಿನಗಳ ಕಾಲ ​ಪೊಲೀಸ್​ ಕಸ್ಟಡಿಗೆ
ಸೋನು ಶ್ರೀನಿವಾಸ್​ ಗೌಡ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಮದನ್​ ಕುಮಾರ್​|

Updated on:Mar 22, 2024 | 5:42 PM

Share

ಸೋಶಿಯಲ್​ ಮೀಡಿಯಾ ಹಾಗೂ ಬಿಗ್​ ಬಾಸ್​ ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ್ದ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರಿಗೆ ಈಗ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪ ಅವರ ಮೇಲಿದೆ. ಈ ಪ್ರಕರಣದಲ್ಲಿ ಅವರನ್ನು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದು, (Sonu Gowda Arrest) ಹೆಚ್ಚಿನ ವಿಚಾರಣೆಗಾಗಿ 4 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಒಪ್ಪಿಸಿ ಸಿಜೆಎಂ ಕೋರ್ಟ್ ಆದೇಶ ನೀಡಿದೆ. ಮಾರ್ಚ್ 25ರವರೆಗೆ ಸೋನು ಗೌಡ ಅವರು ಪೊಲೀಸ್ ಕಸ್ಟಡಿಯಲ್ಲಿ (Police Custody) ಇರಲಿದ್ದಾರೆ.

ಸೋಮವಾರ (ಮಾರ್ಚ್​ 25) ಸೋನು ಶ್ರೀನಿವಾಸ್​ ಗೌಡ ಅವರನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಬೇಕಿದೆ. ಅಲ್ಲಿಯವರೆಗೆ ಸೋನು ಗೌಡ ಅವರನ್ನು ರಾಯಚೂರಿಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಲಿದ್ದಾರೆ. ಆದ್ದರಿಂದ ನ್ಯಾಯಾಲಯ ಅವರನ್ನು 4 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಬಾಲಕಿ ಪರಿಚಯವಾಗಿದ್ದ ಸ್ಥಳ ಮತ್ತು ಬಾಲಕಿಯ ನಿವಾಸ ಸೇರಿ ಹಲವು ಕಡೆಗಳಿಗೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ: ‘ಮಗು ಅಂದ್ರೆ ದುಡ್ಡು ಮಾಡೋ ವಸ್ತು ಅಲ್ಲ’; ಸೋನು ಶ್ರೀನಿವಾಸ ಗೌಡಗೆ ತರಾಟೆ

ಬ್ಯಾಡರಹಳ್ಳಿ ಠಾಣೆ ಪೊಲೀಸರು ಸೋನು ಶ್ರೀನಿವಾಸ್​ ಗೌಡ ಅವರ ವಿಚಾರಣೆ ಮುಂದುವರಿಸಿದ್ದಾರೆ. ರಾತ್ರಿ ವೇಳೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಅವರನ್ನು ಇರಿಸಲಾಗುವುದು. ನಾಳೆ (ಮಾರ್ಚ್​ 23) ಬೆಳಗ್ಗೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.

ಪ್ರಕರಣದ ಹಿನ್ನೆಲೆ:

ಕೆಲವು ತಿಂಗಳ ಹಿಂದೆ ಸೋನು ಶ್ರೀನಿವಾಸ್​ ಗೌಡ ಅವರು ಹೆಣ್ಣು ಮಗುವನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಆದರೆ ಅವರು ದತ್ತು ಪ್ರಕ್ರಿಯೆಯ ಕಾನೂನನ್ನು ಪಾಲಿಸಿಲ್ಲ ಎಂಬುದು ತಿಳಿದು ಬಂದ ಬಳಿಕ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಅವರು ಪೊಲೀಸರಿಗೆ ದೂರು ನೀಡಿದ್ದರು. ಅದರ ಅನ್ವಯ ಸೋನು ಗೌಡ ಅವರನ್ನು ಪೊಲೀಸರು ಬಂಧಿಸಿದರು. 7 ವರ್ಷದ ಬಾಲಕಿಯ ಜೊತೆ ಸೋನು ಗೌಡ ಅವರು ಫೋಟೋ ತೆಗೆದುಕೊಂಡು ಅವುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇತ್ತೀಚೆಗೆ ಬಾಲಕಿ ಜೊತೆ ಅವರು ಮಂತ್ರಾಲಯಕ್ಕೂ ಹೋಗಿ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:33 pm, Fri, 22 March 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ