AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಕರಣ: ಇಕ್ಕಟ್ಟಿನಲ್ಲಿ ಸಿಲುಕಿದ ಮಲಯಾಳಂ ಸ್ಟಾರ್ ನಟ

Manjummel Boys controversy: ಇತ್ತೀಚೆಗೆ ಬಿಡುಗಡೆ ಆದ ‘ಕೂಲಿ’ ಸಿನಿಮಾ ಸೇರಿದಂತೆ ಹಲವಾರು ಮಲಯಾಳಂ ಸಿನಿಮಾಗಳಲ್ಲಿ ನೆನಪುಳಿವ ಪಾತ್ರಗಳಲ್ಲಿ ನಟಿಸಿರುವ ನಟ ಸೌಬಿನ್ ಅವರು ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದು, ಇತ್ತೀಚೆಗೆ ನ್ಯಾಯಾಲಯ ನೀಡಿರುವ ಆದೇಶದಂತೆ ವಿದೇಶ ಪ್ರಯಾಣವನ್ನೂ ಮಾಡದಂತಾಗಿದ್ದಾರೆ. ಏನಿದು ಪ್ರಕರಣ? ಮಾಹಿತಿ ಇಲ್ಲಿದೆ...

ವಂಚನೆ ಪ್ರಕರಣ: ಇಕ್ಕಟ್ಟಿನಲ್ಲಿ ಸಿಲುಕಿದ ಮಲಯಾಳಂ ಸ್ಟಾರ್ ನಟ
Soubin Shahir
ಮಂಜುನಾಥ ಸಿ.
|

Updated on:Sep 04, 2025 | 1:58 PM

Share

ಇತ್ತೀಚೆಗೆ ಬಿಡುಗಡೆ ಆದ ರಜನೀಕಾಂತ್ (Rajinikanth) ನಟನೆಯ ‘ಕೂಲಿ’ ಸಿನಿಮಾನಲ್ಲಿ ಹಲವಾರು ಸ್ಟಾರ್ ನಟರು ಅತಿಥಿ ಪಾತ್ರಗಳಲ್ಲಿ ನಟಿಸಿದ್ದರು. ಆದರೆ ಎಲ್ಲರಿಗಿಂತಲೂ ಹೆಚ್ಚು ಶೈನ್ ಆಗಿದ್ದು ಮಾತ್ರ ಮಲಯಾಳಂ ನಟ ಸೌಬಿನ್. ಅತ್ಯುತ್ತಮ ನಟರಾಗಿರುವ ಸೌಬಿನ್, ಮಲಯಾಳಂನ ಸ್ಟಾರ್ ನಟರುಗಳಲ್ಲಿ ಒಬ್ಬರು. ನಟರಾಗಿರುವ ಜೊತೆಗೆ ನಿರ್ಮಾಪಕರೂ ಹೌದು. ಆದರೆ ಈಗ ವಂಚನೆ ಪ್ರಕರಣವೊಂದರಿಂದಾಗಿ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ.

ಸೌಬಿನ್ ನಟಿಸಿ ನಿರ್ಮಾಣ ಮಾಡಿದ್ದ ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಯನ್ನೇ ಬರೆದಿತ್ತು. 2024 ರ ಫೆಬ್ರವರಿಯಲ್ಲಿ ಬಿಡುಗಡೆ ಆಗಿದ್ದ ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾಕ್ಕೆ ಕೇವಲ 20 ಕೋಟಿ ಖರ್ಚು ಮಾಡಲಾಗಿತ್ತು. ಆದರೆ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 200 ಕೋಟಿಗೂ ಹೆಚ್ಚಿನ ಹಣವನ್ನು ಗಳಿಕೆ ಮಾಡಿತು. ಸಿನಿಮಾಕ್ಕೆ ಸೌಬಿನ್ ಶಾಹಿರ್, ಬಾಬು ಶಾಹಿರ್ ಮತ್ತು ಶಾನ್ ಆಂಟೊನಿ ಬಂಡವಾಳ ಹೂಡಿದ್ದು, ಭಾರಿ ಮೊತ್ತದ ಲಾಭವನ್ನೇ ಸಿನಿಮಾನಿಂದ ಗಳಿಕೆ ಮಾಡಿದರು.

ಆದರೆ ಯುಎಇ ಮೂಲದ ಹೂಡಿಕೆದಾರರೊಬ್ಬರು ಸೌಬಿನ್ ಹಾಗೂ ಇತರೆ ನಿರ್ಮಾಪಕರುಗಳ ವಿರುದ್ಧ ವಂಚನೆ, ನಂಬಿಕೆ ದ್ರೋಹದ ಪ್ರಕರಣ ದಾಖಲು ಮಾಡಿದರು. ಕಳೆದ ವರ್ಷವೇ ದೂರು ದಾಖಲಾಗಿದ್ದು ಪ್ರಕರಣ ಈಗ ಸೌಬಿನ್ ವಿರುದ್ಧ ತಿರುಗುವ ಸೂಚನೆಗಳು ದೊರೆತಿವೆ.

ಸೆಪ್ಟೆಂಬರ್ 5 ರಂದು ದುಬೈನಲ್ಲಿ ನಡೆಯಲಿರುವ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ಪ್ರಯಾಣಿಸಲು ಸೌಬಿನ್ ಮುಂದಾಗಿದ್ದರು. ಆದರೆ ಅವರಿಗೆ ವೀಸಾ ಸಮಸ್ಯೆ ಎದುರಾಯ್ತು. ಸೌಬಿನ್ ವಿರುದ್ಧ ಹಣಕಾಸು ವಂಚನೆ ಪ್ರಕರಣ ಇದ್ದಿದ್ದರಿಂದ ದುಬೈಗೆ ಪ್ರವೇಶ ನಿರಾಕರಿಸಲಾಯ್ತು. ಕೂಡಲೇ ಸೌಬಿನ್ ಮ್ಯಾನೇಜರ್ ಎರ್ನಾಕುಲಂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿ, ವಿದೇಶ ಪ್ರಯಾಣಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿದರು.

ಇದನ್ನೂ ಓದಿ:ರಜನೀಕಾಂತ್​ಗೆ ಹೆಸರಿಟ್ಟಿದ್ಯಾರು? ಅದೇ ಹೆಸರು ಆಯ್ಕೆ ಮಾಡಿದ್ದೇಕೆ?

ಸೌಬಿನ್, ಸೈಮಾಗೆ ಹೋಗಿ ಪ್ರಶಸ್ತಿ ಪಡೆಯುವುದು ಮಲಯಾಳಂ ಚಿತ್ರರಂಗಕ್ಕೆ ಗೌರವಕಾರಕ ವಿಚಾರ. ಸೌಬಿನ್​ ಅವರ ಪ್ರತಿಭೆಗೆ ನೀಡುತ್ತಿರುವ ಗೌರವ ಇದಾಗಿದ್ದು, ಅದನ್ನು ಅವರು ಸ್ವೀಕರಿಸಬೇಕಿದೆ, ಕಾರ್ಯಕ್ರಮ ಮುಗಿದ ಕೂಡಲೇ ಅವರು ಮರಳಿ ಬರಲಿದ್ದಾರೆ ಎಂದು ಸೌಬಿನ್ ಪರ ವಕೀಲರು ವಾದ ಮಾಡಿದರು. ವಾದ ಆಲಿಸಿದ ನ್ಯಾಯಾಲವು ಸೌಬಿನ್ ವಿದೇಶ ಪ್ರಯಾಣ ಮಾಡಬಾರದೆಂದು ನಿಬಂಧನೆ ಹೇರಿದೆ.

ಏನಿದು ಪ್ರಕರಣ?

‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ನಿರ್ಮಾಣಕ್ಕೆ ಸೌಬಿನ್ ಹಾಗೂ ಇನ್ನಿಬ್ಬರು ನಿರ್ಮಾಪಕರು ಕೇರಳದ ಅರೂರಿನ ಸಿರಾಜ್ ವಲಯತ್ತಾರ ಹಮೀದ್ ಎಂಬುವರ ಬಳಿ ಏಳು ಕೋಟಿ ರೂಪಾಯಿ ಹಣ ಪಡೆದಿದ್ದರಂತೆ. ಸಿನಿಮಾನಲ್ಲಿ ಬರುವ ಆದಾಯದಲ್ಲಿ 40% ಪಾಲನ್ನು ಕೊಡುವುದಾಗಿ ಒಪ್ಪಂದ ಮಾಡಿಕೊಂಡಿದ್ದರಂತೆ. ಆದರೆ ಸಿನಿಮಾ ಬ್ಲಾಕ್ ಬಸ್ಟರ್ ಆದ ಬಳಿಕ ಒಪ್ಪಂದದಂತೆ ಲಾಭವನ್ನು ಹಂಚಿಕೆ ಮಾಡಲಿಲ್ಲವಂತೆ ಸೌಬಿನ್ ಹಾಗೂ ಇತರೆ ನಿರ್ಮಾಪಕರು. ಹೀಗಾಗಿ ದೂರು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಜುಲೈ ತಿಂಗಳಲ್ಲಿ ಸೌಬಿನ್ ಅನ್ನು ಪೊಲೀಸರು ಬಂಧಿಸಿ ಅದೇ ದಿನ ಜಾಮೀನಿನ ಮೇಲೆ ಬಿಡುಗಡೆ ಸಹ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Thu, 4 September 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!