AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣದ ಈ ನಟಿಯರಿಗೆ ಇದೆ ಅಪರೂಪದ ಕಾಯಿಲೆ; ಇಲ್ಲಿದೆ ಮಾಹಿತಿ

ದಕ್ಷಿಣ ಭಾರತದ ಜನಪ್ರಿಯ ತಾರೆಯರಾದ ಸಮಂತಾ, ಕಾಜಲ್, ಅನುಷ್ಕಾ, ವಿಶಾಲ್, ಮಮತಾ ಮೋಹನ್ ದಾಸ್ ತಮ್ಮ ಅಪರೂಪದ ಹಾಗೂ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ಮಯೋಸಿಟಿಸ್, ಆಸ್ತಮಾ, ವಿಟಿಲಿಗೋ, ನರರೋಗದಂತಹ ಸವಾಲುಗಳನ್ನು ಧೈರ್ಯದಿಂದ ಎದುರಿಸುತ್ತಾ, ತಮ್ಮ ಜೀವನದಲ್ಲಿ ಮುನ್ನಡೆಯುತ್ತಿದ್ದಾರೆ. ಇವರ ಹೋರಾಟ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದೆ.

ದಕ್ಷಿಣದ ಈ ನಟಿಯರಿಗೆ ಇದೆ ಅಪರೂಪದ ಕಾಯಿಲೆ; ಇಲ್ಲಿದೆ ಮಾಹಿತಿ
ದಕ್ಷಿಣದ ಈ ನಟಿಯರಿಗೆ ಇದೆ ಅಪರೂಪದ ಕಾಯಿಲೆ; ಇಲ್ಲಿದೆ ಮಾಹಿತಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 29, 2026 | 7:55 AM

Share

ಮುಖ್ಯಾಂಶಗಳು

  • ಸೆಲೆಬ್ರಿಟಿಗಳ ಆರೋಗ್ಯ ಸವಾಲುಗಳು ಬಗ್ಗೆ ಮುಕ್ತ ಮಾತು
  • ದೀರ್ಘಕಾಲಿಕ ಕಾಯಿಲೆಗಳ ಬಗ್ಗೆ ವೈಯಕ್ತಿಕ ಅನುಭವ ಹಂಚಿಕೊಂಡ ಗಣ್ಯರು
  • ಸಮಂತಾ, ಕಾಜಲ್, ಅನುಷ್ಕಾ ರೋಗಗಳ ನಡುವೆಯೂ ಸಾಧನೆ

ಬೆಳ್ಳಿತೆರೆಯ ಮೇಲೆ ಸದಾ ಹಸನ್ಮುಖಿಯಾಗಿ, ರಂಜಿಸುವ ಸಿನಿಮಾ ತಾರೆಯರ ವೈಯಕ್ತಿಕ ಜೀವನದ ಹಿಂದೆ ಕಠಿಣ ಹೋರಾಟದ ಕಥೆಗಳಿರುತ್ತವೆ. ದಕ್ಷಿಣ ಭಾರತದ ಚಿತ್ರರಂಗದ ಈ ಐದು ಜನಪ್ರೀಯ ನಟಿಯರು ತಮಗಿರುವ ಅಪರೂಪದ ಹಾಗೂ ದೀರ್ಘಕಾಲದ ಆರೋಗ್ಯ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಹಂಚಿಕೊಂಡಿದ್ದು, ಸವಾಲುಗಳ ನಡುವೆಯೂ ಧೈರ್ಯದಿಂದ ಮುನ್ನುಗ್ಗುತ್ತಿದ್ದಾರೆ. ಅವರ ಬಗ್ಗೆ ಇಲ್ಲಿದೆ ಮಾಹಿತಿ.

ಸಮಂತಾ ರುತ್ ಪ್ರಭು

ಸಮಂತಾ ಅವರು ‘ಮಯೋಸಿಟಿಸ್’ ಎಂಬ ಅಪರೂಪದ ಆಟೋಇಮ್ಯೂನ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದು ಮಾಂಸಖಂಡಗಳ ಉರಿಯೂತಕ್ಕೆ ಕಾರಣವಾಗುತ್ತದೆ. ತೀವ್ರ ಆರೋಗ್ಯ ಸಮಸ್ಯೆಯ ನಡುವೆಯೂ ಧೃತಿಗೆಡದ ಸಮಂತಾ, ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದುಕೊಂಡು ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದ್ದಾರೆ.

ಕಾಜಲ್ ಅಗರ್ವಾಲ್

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ತಮಗೆ ತಾತ್ಕಾಲಿಕ ಆಟೋಇಮ್ಯೂನ್ ಸಮಸ್ಯೆ ಇರುವುದಾಗಿ ಹೇಳಿಕೊಂಡಿದ್ದರು. ಅಷ್ಟೇ ಅಲ್ಲದೆ, ಐದನೇ ವಯಸ್ಸಿನಿಂದಲೇ ಬ್ರಾಂಕಿಯಲ್ ಆಸ್ತಮಾದಿಂದ ಬಳಲುತ್ತಿರುವ ಇವರು, ಸುದೀರ್ಘ ಕಾಲದಿಂದ ಕಟ್ಟುನಿಟ್ಟಿನ ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ರೂಢಿಸಿಕೊಂಡು ಕಾಯಿಲೆಯನ್ನು ನಿಯಂತ್ರಣದಲ್ಲಿಟ್ಟಿದ್ದಾರೆ.

ಅನುಷ್ಕಾ ಶೆಟ್ಟಿ

‘ಬಾಹುಬಲಿ’ ಖ್ಯಾತಿಯ ಅನುಷ್ಕಾ ಶೆಟ್ಟಿ ಅವರು ‘ನಗು ರೋಗ’ ಎಂದೇ ಕರೆಯಲಾಗುವ ‘ಸ್ಯೂಡೋಬಲ್ಬರ್ ಅಫೆಕ್ಟ್’ (PBA) ಎಂಬ ಅಪರೂಪದ ನರರೋಗದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಸ್ಥಿತಿಯಲ್ಲಿ ಭಾವನೆಗಳ ಸಂಬಂಧವಿಲ್ಲದೆ ಹಠಾತ್ ಆಗಿ ನಿಯಂತ್ರಿಸಲಾಗದಂತೆ ನಗು ಅಥವಾ ಅಳು ಬರುತ್ತದೆ.

ವಿಶಾಲ್

ತಮಿಳು ನಟ ವಿಷ್ಣು ವಿಶಾಲ್ ಕಳೆದ ಮೂರ್ನಾಲ್ಕು ವರ್ಷಗಳಿಂದ ದೀರ್ಘಕಾಲದ ಆಟೋಇಮ್ಯೂನ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿದ್ದ ಅವರು, ಪ್ರಸ್ತುತ ತಾವು ತೆಗೆದುಕೊಳ್ಳುತ್ತಿರುವ ಕಠಿಣ ಔಷಧಿಗಳ ಅಡ್ಡಪರಿಣಾಮಗಳಿಂದಾಗಿ ತಮ್ಮ ದೇಹದಲ್ಲಿ ಹಲವು ಬದಲಾವಣೆಗಳಾಗುತ್ತಿವೆ ಎಂದು ತಿಳಿಸಿದ್ದರು.

ಇದನ್ನೂ ಓದಿ: ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್

ಮಮತಾ ಮೋಹನ್ ದಾಸ್

ಖ್ಯಾತ ನಟಿ ಹಾಗೂ ಗಾಯಕಿ ಮಮತಾ ಮೋಹನ್ ದಾಸ್ ಅವರು ಈಗಾಗಲೇ ಎರಡು ಬಾರಿ ಭೀಕರ ‘ಹಾಡ್ಕಿನ್ಸ್ ಲಿಂಫೋಮಾ’ (ಕ್ಯಾನ್ಸರ್) ರೋಗವನ್ನು ಗೆದ್ದು ಬಂದಿದ್ದಾರೆ. ಪ್ರಸ್ತುತ ಅವರು ಚರ್ಮದ ಬಣ್ಣವನ್ನು ಕಳೆದುಕೊಳ್ಳುವ ‘ವಿಟಲಿಗೋ’ (ತೊನ್ನು) ಎಂಬ ಚರ್ಮದ ಸಮಸ್ಯೆಯನ್ನು ಧೈರ್ಯವಾಗಿ ಎದುರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!