‘ಕೀಡ ಕೋಲ’ ಚಿತ್ರತಂಡಕ್ಕೆ ನೋಟೀಸ್ ನೀಡಿದ ಎಸ್​ಪಿ ಬಾಲಸುಬ್ರಹ್ಮಣ್ಯಂ ಕುಟುಂಬ

Keedaa Cola: ದಿವಂಗತ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಧ್ವನಿಯನ್ನು ಸೂಕ್ತ ಅನುಮತಿ ಪಡೆಯದೆ, ಕುಟುಂಬದ ಗಮನಕ್ಕೆ ತರದೆ ಬಳಸಿಕೊಂಡಿರುವ ಬಗ್ಗೆ ಅವರ ಕುಟುಂಬದವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಕೀಡ ಕೋಲ’ ಚಿತ್ರತಂಡಕ್ಕೆ ನೋಟೀಸ್ ನೀಡಿದ ಎಸ್​ಪಿ ಬಾಲಸುಬ್ರಹ್ಮಣ್ಯಂ ಕುಟುಂಬ
Follow us
ಮಂಜುನಾಥ ಸಿ.
|

Updated on: Feb 17, 2024 | 5:13 PM

ಗಾಯಕ ಎಸ್​ಪಿ ಬಾಲಸುಬ್ರಹ್ಮಣ್ಯಂ (SP Balasubrahmanyam) ಅವರ ಕುಟುಂಬವು ಇತ್ತೀಚೆಗೆ ಬಿಡುಗಡೆ ಆದ ತೆಲುಗಿನ ಹಿಟ್ ಸಿನಿಮಾ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ನೊಟೀಸ್ ನೀಡಿದೆ. ಕುಟುಂಬದ ಅನುಮತಿ ಇಲ್ಲದೆ ಎಸ್​ಬಿ ಬಾಲಸುಬ್ರಹ್ಮಣ್ಯಂ ಅವರ ಧ್ವನಿ ಬಳಸಿಕೊಂಡಿದ್ದಕ್ಕೆ ಚಿತ್ರತಂಡಕ್ಕೆ ನೊಟೀಸ್ ನೀಡಲಾಗಿದೆ. ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ರ ಕಲ್ಯಾಣ್ ಚರಣ್ ಅವರು ನೊಟೀಸ್ ನೀಡಿದ್ದು, ಕುಟುಂಬದ ಅನುಮತಿ ಪಡೆಯದೇ ತಂದೆಯವರ ಧ್ವನಿಯನ್ನು ಕಮರ್ಶಿಯಲ್ ಕಾರಣಕ್ಕೆ ಬಳಸಿರುವುದು ಸರಿಯಲ್ಲವೆಂದು ಹೇಳಿದ್ದಾರೆ.

‘ಕೀಡ ಕೋಲ’ ಸಿನಿಮಾದಲ್ಲಿ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಧ್ವನಿಯನ್ನು ಕೃತಕ ಬುದ್ಧಿಮತ್ತೆ ಹಾಗೂ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮರುಸೃಷ್ಟಿಸಲಾಗಿದೆ. ಸಿನಿಮಾದಲ್ಲಿ ಅಲ್ಲಲ್ಲಿ ಎಸ್​ಪಿ ಬಾಲಸುಬ್ರಹ್ಮಣ್ಯಂ ಅವರ ಧ್ವನಿಯನ್ನು ಬಳಸಿಕೊಳ್ಳಲಾಗಿದೆ. ಆದರೆ ಹೀಗೆ ಎಸ್​ಪಿಬಿ ಅವರ ಧ್ವನಿ ಬಳಸಿಕೊಳ್ಳುವ ಬಗ್ಗೆ ಅವರ ಕುಟುಂಬದವರ ಅನುಮತಿಯನ್ನು ಪಡೆದಿರಲಿಲ್ಲ. ಅವರಿಗೆ ಈ ಬಗ್ಗೆ ಮಾಹಿತಿಯನ್ನೂ ನೀಡಿರಲಿಲ್ಲ ಎನ್ನಲಾಗಿದೆ.

ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಬಗ್ಗೆ ನನ್ನ ಸಹಮತವಿದೆ. ತಂತ್ರಜ್ಞಾನವು ಮಾನವನ ಜೀವನವನ್ನು ಸರಳಗೊಳಿಸಬೇಕು. ಮನುಷ್ಯನ ಜೀವನವನ್ನು ಕಸಿದುಕೊಳ್ಳಬಾರದು. ಈ ಪ್ರಕರಣದಲ್ಲಿ ಎಸ್​ಪಿಬಿ ಅವರ ಧ್ವನಿಯನ್ನು ಮರುಸೃಷ್ಟಿಸಿರುವುದು ಅತ್ಯುತ್ತಮ ಪ್ರಯತ್ನ ಆದರೆ ಅವರ ಕುಟುಂಬಕ್ಕೆ ಈ ಬಗ್ಗೆ ಮಾಹಿತಿ ನೀಡಿ ಅವರನ್ನೂ ಸಹ ಪಾಲ್ಗೊಳ್ಳುವಂತೆ ಮಾಡಿದ್ದರೆ ಒಳ್ಳೆಯದಿತ್ತು’ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಾಯಕಿ, ನಟಿ ಮಲ್ಲಿಕಾ ರಜಪೂತ್ ಅನುಮಾನಸ್ಪದ ಸಾವು

ಸೂಕ್ತ ಅನುಮತಿಯಿಲ್ಲದೆ ಎಸ್‌ಪಿಬಿ ಧ್ವನಿಯನ್ನು ಬಳಸಿರುವುದು ಕುಟುಂಬವನ್ನು ಆಘಾತಕ್ಕೀಡು ಮಾಡಿದೆ ಎಂದು ಪುತ್ರ ಚರಣ್ ಹೇಳಿದ್ದು, ಮನೊರಂಜನಾ ಉದ್ಯಮದಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸುವ ಈ ಪ್ರವೃತ್ತಿ ಸೂಕ್ತ ಒಪ್ಪಿಗೆ ಅಥವಾ ಅನುಮತಿಯಿಲ್ಲದೆ ಮುಂದುವರಿದರೆ ಗಾಯಕರ ಮೇಲೆ ಅದು ದೊಡ್ಡ ಮಟ್ಟಿಗಿನ ಪರಿಣಾಮ ಬೀರುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

‘ಕೀಡ ಕೋಲ’ ಸಿನಿಮಾ ಹಾಸ್ಯಪ್ರಧಾನ ಸಿನಿಮಾ ಆಗಿದ್ದು, ಸಿನಿಮಾವನ್ನು ತರುಣ್ ಭಾಸ್ಕರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಬ್ರಹ್ಮಾನಂದಂ, ಚೈತನ್ಯ ರಾವ್, ರಘು ರಾಮ್ ಇನ್ನೂ ಕೆಲವರು ನಟಿಸಿದ್ದಾರೆ. ನವೆಂಬರ್ 3 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದ ಈ ಸಿನಿಮಾ ಇದೀಗ ಒಟಿಟಿಯಲ್ಲಿ ಬಿಡುಗಡೆ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಲಂಚ ಕೇಳಿದ ಅಧಿಕಾರಿಯನ್ನು ಟ್ರಾನ್ಸ್​ಫರ್ ಮಾಡೋದೇ ದೊಡ್ಡ ಶಿಕ್ಷೆ!
ಲಂಚ ಕೇಳಿದ ಅಧಿಕಾರಿಯನ್ನು ಟ್ರಾನ್ಸ್​ಫರ್ ಮಾಡೋದೇ ದೊಡ್ಡ ಶಿಕ್ಷೆ!
IND vs AUS: ಆಸ್ಟ್ರೇಲಿಯಾ ಪ್ರಧಾನಿಯನ್ನ ಭೇಟಿಯಾದ ಟೀಮ್ ಇಂಡಿಯಾ
IND vs AUS: ಆಸ್ಟ್ರೇಲಿಯಾ ಪ್ರಧಾನಿಯನ್ನ ಭೇಟಿಯಾದ ಟೀಮ್ ಇಂಡಿಯಾ
ಗುಂಪುಗಾರಿಕೆ 2 ತಿಂಗಳು ಮುಂದುವರಿಯಲಿದೆ, ಪತ್ರ ಚಳುವಳಿ ಅಗತ್ಯವಿಲ್ಲ: ಶಾಸಕ
ಗುಂಪುಗಾರಿಕೆ 2 ತಿಂಗಳು ಮುಂದುವರಿಯಲಿದೆ, ಪತ್ರ ಚಳುವಳಿ ಅಗತ್ಯವಿಲ್ಲ: ಶಾಸಕ
ಯತ್ನಾಳ್ ತಂಡದ ವಿರುದ್ದ 2 ಪತ್ರ ಬರೆದರೂ ವರಿಷ್ಠರಿಂದ ಕ್ರಮವಿಲ್ಲ: ಡಿವಿಎಸ್
ಯತ್ನಾಳ್ ತಂಡದ ವಿರುದ್ದ 2 ಪತ್ರ ಬರೆದರೂ ವರಿಷ್ಠರಿಂದ ಕ್ರಮವಿಲ್ಲ: ಡಿವಿಎಸ್
ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ದೇವೇಗೌಡ
ನನ್ನ ಹಾಗೂ ನನ್ನ ಮಗನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ: ದೇವೇಗೌಡ