AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ತಮಿಳು ಸೂಪರ್ ಸ್ಟಾರ್​​ ಸಿನಿಮಾಗಳಲ್ಲಿ ಶ್ರೀಲೀಲಾ ನಟನೆ

ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅಲ್ಲಿ ಅಲೆಯನ್ನೇ ಎಬ್ಬಿಸಿದ ಶ್ರೀಲೀಲಾ, ಟಾಲಿವಡ್​​ ಸ್ಟಾರ್​ ನಟರುಗಳಾದ ಮಹೇಶ್ ಬಾಬು, ನಂದಮೂರಿ ಬಾಲಕೃಷ್ಣ, ಪವನ್ ಕಲ್ಯಾಣ್, ಅಲ್ಲು ಅರ್ಜುನ್, ರವಿತೇಜ, ರಾಮ್ ಇನ್ನೂ ಕೆಲವು ಸ್ಟಾರ್ ನಟರುಗಳೊಡನೆ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಶ್ರೀಲೀಲಾ, ಅಲ್ಲಿಯೂ ಸಹ ಸಖತ್ ಹವಾ ಎಬ್ಬಿಸಿದ್ದಾರೆ. ಯಾವ ಮಟ್ಟಿಗೆಂದರೆ ಒಂದೇ ತಿಂಗಳಲ್ಲಿ ಮೂವರು ಸ್ಟಾರ್ ನಟರುಗಳ ಸಿನಿಮಾಕ್ಕೆ ಸಹಿ ಮಾಡಿದ್ದಾರೆ.

ಮೂವರು ತಮಿಳು ಸೂಪರ್ ಸ್ಟಾರ್​​ ಸಿನಿಮಾಗಳಲ್ಲಿ ಶ್ರೀಲೀಲಾ ನಟನೆ
Sreeleela
ಮಂಜುನಾಥ ಸಿ.
|

Updated on: Nov 05, 2026 | 1:14 PM

Share

ಮುಖ್ಯಾಂಶಗಳು

  • ಶ್ರೀಲೀಲಾ ಒಟ್ಟಿಗೆ ಮೂರು ತಮಿಳು ಸಿನಿಮಾನಲ್ಲಿ ನಟಿಸುತ್ತಿದ್ದಾರೆ
  • ತಮಿಳಿನ ಮೂವರು ಸ್ಟಾರ್ ನಟರೊಟ್ಟಿಗೆ ನಟನೆ
  • ಶ್ರೀಲೀಲಾ ಈಗ ತಮಿಳಿನ ಸ್ಟಾರ್ ನಟಿ ಆಗುತ್ತಿದ್ದಾರೆ

ಕನ್ನಡ ಸಿನಿಮಾ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟ ಶ್ರೀಲೀಲಾ, ಈಗ ಪರಭಾಷೆಗಳಲ್ಲಿ ಸ್ಟಾರ್ ನಟಿಯಾಗಿ ಮೆರೆಯುತ್ತಿದ್ದಾರೆ. ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅಲ್ಲಿ ಅಲೆಯನ್ನೇ ಎಬ್ಬಿಸಿದ ಶ್ರೀಲೀಲಾ, ಟಾಲಿವಡ್​​ ಸ್ಟಾರ್​ ನಟರುಗಳಾದ ಮಹೇಶ್ ಬಾಬು, ನಂದಮೂರಿ ಬಾಲಕೃಷ್ಣ, ಪವನ್ ಕಲ್ಯಾಣ್, ಅಲ್ಲು ಅರ್ಜುನ್, ರವಿತೇಜ, ರಾಮ್ ಇನ್ನೂ ಕೆಲವು ಸ್ಟಾರ್ ನಟರುಗಳೊಡನೆ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಶ್ರೀಲೀಲಾ, ಅಲ್ಲಿಯೂ ಸಹ ಸಖತ್ ಹವಾ ಎಬ್ಬಿಸಿದ್ದಾರೆ. ಯಾವ ಮಟ್ಟಿಗೆಂದರೆ ಒಂದೇ ತಿಂಗಳಲ್ಲಿ ಮೂವರು ಸ್ಟಾರ್ ನಟರುಗಳ ಸಿನಿಮಾಕ್ಕೆ ಸಹಿ ಮಾಡಿದ್ದಾರೆ.

ಇದೇ ವರ್ಷ ಬಿಡುಗಡೆ ಆದ ‘ಪರಾಶಕ್ತಿ’ ಸಿನಿಮಾ ಮೂಲಕ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶ್ರೀಲೀಲಾ, ಇದೀಗ ಒಟ್ಟಿಗೆ ಮೂರು ದೊಡ್ಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ರಜನೀಕಾಂತ್ ನಟಿಸುತ್ತಿರುವ ‘ಧರ್ಮನ್’ ಸಿನಿಮಾನಲ್ಲಿ ಶ್ರೀಲೀಲಾ ನಟನೆ ಮಾಡುತ್ತಿದ್ದಾರೆ. ಸಿನಿಮಾದ ಚಿತ್ರೀಕರಣದಲ್ಲೂ ಸಹ ಶ್ರೀಲೀಲಾ ಭಾಗಿ ಆಗಿದ್ದಾರೆ. ಸಿನಿಮಾ ತಂಡವೂ ಸಹ ಇತ್ತೀಚೆಗಷ್ಟೆ ಅಧಿಕೃತವಾಗಿ ಶ್ರೀಲೀಲಾ ತಮ್ಮ ಸಿನಿಮಾದ ಭಾಗ ಆಗಿರುವ ಬಗ್ಗೆ ಘೋಷಣೆ ಮಾಡಿದೆ.

ಶ್ರೀಲೀಲಾ ಅವರು ತಮಿಳಿನ ಸ್ಟಾರ್ ನಟ ಅಜಿತ್ ಅವರ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅಜಿತ್ ನಟಿಸುತ್ತಿರುವ ಹೊಸ ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನಡೆದಿದ್ದು, ಸಿನಿಮಾ ಅನ್ನು ಅಜಿತ್ ಅವರ ಪತ್ನಿ ಶಾಲಿನಿ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾನಲ್ಲಿ ವಿಲನ್ ಆಗಿ ಮಲಯಾಳಂ ಸ್ಟಾರ್ ನಟ ಉನ್ನಿ ಮುಕುಂದನ್ ಅವರು ವಿಲನ್ ಆಗಿ ನಟನೆ ಮಾಡಲಿದ್ದಾರೆ. ಸಿನಿಮಾ ಪಕ್ಕಾ ಆಕ್ಷನ್ ಸಿನಿಮಾ ಆಗಿದ್ದು, ಶೀಘ್ರವೇ ಸಿನಿಮಾದ ಚಿತ್ರೀಕರಣ ಪ್ರಾರಂಭ ಆಗಲಿದೆ. ಸಿನಿಮಾದ ಮುಹೂರ್ತ ಕಾರ್ಯಕ್ರಮದಲ್ಲಿ ಶ್ರೀಲೀಲಾ ಸಹ ಭಾಗಿ ಆಗಿದ್ದರು.

ಇದನ್ನೂ ಓದಿ:‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ; ರಜನಿಕಾಂತ್ ಜೊತೆ ನಟಿಸುವ ಅವಕಾಶ

ಶ್ರೀಲೀಲಾ ಅವರು, ತಮಿಳಿನ ಬಹು ನಿರೀಕ್ಷಿತ ಸಿನಿಮಾ ‘ಓಂ’ನಲ್ಲೂ ನಟನೆ ಮಾಡಿದ್ದಾರೆ. ಧನುಶ್, ಮಮ್ಮುಟಿ ಮತ್ತು ಸಾಯಿ ಪಲ್ಲವಿ ಅವರು ನಟಿಸುತ್ತಿರುವ ‘ಓಂ’ನಲ್ಲಿ ಶ್ರೀಲೀಲಾ ಧನುಶ್ ಅವರ ಪತ್ನಿಯ ಪಾತ್ರದಲ್ಲಿ ನಟನೆ ಮಾಡಿದ್ದಾರೆ. ‘ಓಂ’ ಸಿನಿಮಾ ತಂಡವು ಶ್ರೀಲೀಲಾ ಅವರ ಪಾತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದು, ಸರಳ ಗೃಹಿಣಿ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಒಟ್ಟಿಗೆ ತಮಿಳಿನ ಮೂವರು ಸ್ಟಾರ್ ನಟರ ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಇದರ ಜೊತೆಗೆ ಪ್ರದೀಪ್ ರಂಗನಾಥ್ ನಟಿಸಿ ನಿರ್ದೇಶನ ಮಾಡಲಿರುವ ಹೊಸ ಸಿನಿಮಾನಲ್ಲೂ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಇನ್ನುಳಿದಂತೆ ಶ್ರೀಲೀಲಾ ಬೇರೆ ಭಾಷೆಯ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ಅವರ ನಟನೆಯ ಮೊದಲ ಹಿಂದಿ ಸಿನಿಮಾ ‘ಆಶಿಖಿ 3’ ಮತ್ತೆ ಚಿತ್ರೀಕರಣ ಆರಂಭಿಸಿದ್ದು, ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆ ಆಗಲಿದೆ. ಅದರ ಜೊತೆಗೆ ಉಮೇಶ್ ಬಿಶ್ಟ್ ಅವರ ಸಿನಿಮಾನಲ್ಲೂ ನಟನೆ ಮಾಡಿದ್ದಾರೆ. ಇದರ ಇನ್ನು ತೆಲುಗಿನಲ್ಲೂ ಸಹ ಶ್ರೀಲೀಲಾ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​
ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​
ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ
ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ
ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಏಳನೇ ದಿನವೂ ಸಾವಿರಾರು ಭಕ್ತರು
ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಏಳನೇ ದಿನವೂ ಸಾವಿರಾರು ಭಕ್ತರು
ನಂಜನಗೂಡಿನ ಆಕಳ ಸುತ್ತಮುತ್ತ ನಾಲ್ಕು ಹುಲಿಗಳ ಓಡಾಟ
ನಂಜನಗೂಡಿನ ಆಕಳ ಸುತ್ತಮುತ್ತ ನಾಲ್ಕು ಹುಲಿಗಳ ಓಡಾಟ
ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು
ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
ಸೌಂದರ್ಯಾ-ಧನುಷ್​​ಗೆ ಓಪನ್ ಆಯ್ತು ಬಿಗ್ ಬಾಸ್ ಮುಖ್ಯದ್ವಾರ
ಸೌಂದರ್ಯಾ-ಧನುಷ್​​ಗೆ ಓಪನ್ ಆಯ್ತು ಬಿಗ್ ಬಾಸ್ ಮುಖ್ಯದ್ವಾರ