AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guntur Kaaram: ಮಹೇಶ್​ ಬಾಬು ಮನೆಯಲ್ಲಿ ಪಾರ್ಟಿ ಮಾಡಿದ ನಟಿ ಶ್ರೀಲೀಲಾ

ಮಹೇಶ್​ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಸಿನಿಮಾದ ಸಕ್ಸಸ್​ ಪಾರ್ಟಿ ನಡೆದಿದೆ. ಮಹೇಶ್​ ಬಾಬು, ಶ್ರೀಲೀಲಾ, ಮೀನಾಕ್ಷಿ ಚೌಧರಿ, ದಿಲ್​ ರಾಜು, ಮಹೇಶ್​ ಬಾಬು ಪತ್ನಿ ನಮ್ರತಾ ಶಿರೋಡ್ಕರ್​, ಪುತ್ರಿ ಸಿತಾರಾ ಘಟ್ಟಮನೇನಿ ಮುಂತಾದವರು ಪಾರ್ಟಿಯಲ್ಲಿ ಎಂಜಾಯ್​ ಮಾಡಿದ್ದಾರೆ. ಬಳಿಕ ಎಲ್ಲರೂ ಜೊತೆಯಾಗಿ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

Guntur Kaaram: ಮಹೇಶ್​ ಬಾಬು ಮನೆಯಲ್ಲಿ ಪಾರ್ಟಿ ಮಾಡಿದ ನಟಿ ಶ್ರೀಲೀಲಾ
ಶ್ರೀಲೀಲಾ, ಮಹೇಶ್​ ಬಾಬು, ಮೀನಾಕ್ಷಿ ಚೌಧರಿ
ಮದನ್​ ಕುಮಾರ್​
|

Updated on:Jan 16, 2024 | 1:21 PM

Share

ಕನ್ನಡದ ನಟಿಯರಿಗೆ ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಾಗಿದೆ. ರಶ್ಮಿಕಾ ಮಂದಣ್ಣ ರೀತಿಯೇ ನಟಿ ಶ್ರೀಲೀಲಾ ಕೂಡ ಈಗ ತೆಲುಗು ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರು ನಟಿಸಿರುವ ‘ಗುಂಟೂರು ಖಾರಂ’ ಸಿನಿಮಾ (Guntur Kaaram) ನೂರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಅವರಿಗೆ ಜೋಡಿಯಾಗಿ ಶ್ರೀಲೀಲಾ ನಟಿಸಿದ್ದಾರೆ. ಸಿನಿಮಾ ಗೆದ್ದ ಖುಷಿಯಲ್ಲಿ ಮಹೇಶ್ ಬಾಬು (Mahesh Babu) ಅವರು ತಮ್ಮ ಮನೆಯಲ್ಲಿ ಪಾರ್ಟಿ ಆಯೋಜನೆ ಮಾಡಿದ್ದಾರೆ. ಇದರಲ್ಲಿ ಶ್ರೀಲೀಲಾ ಕೂಡ ಭಾಗಿ ಆಗಿದ್ದಾರೆ. ಮಹೇಶ್​ ಬಾಬು ಕುಟುಂಬದವರ ಜೊತೆ ಸೇರಿ ಶ್ರೀಲೀಲಾ (Sreeleela) ಪಾರ್ಟಿ ಮಾಡಿರುವ ಫೋಟೋಗಳು ವೈರಲ್​ ಆಗಿವೆ.

‘ಗುಂಟೂರು ಖಾರಂ’ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್​ ಅವರು ನಿರ್ದೇಶನ ಮಾಡಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 12ರಂದು ಈ ಸಿನಿಮಾ ಬಿಡುಗಡೆ ಆಯಿತು. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾದ ಕಲೆಕ್ಷನ್​ 200 ಕೋಟಿ ರೂಪಾಯಿ ಸಮೀಪಿಸುತ್ತಿದೆ. ಇದರಿಂದ ಚಿತ್ರತಂಡಕ್ಕೆ ಸಖತ್​ ಖುಷಿ ಆಗಿದೆ. ಹಾಗಾಗಿ ಸೋಮವಾರ (ಜನವರಿ 15) ಮಹೇಶ್ ಬಾಬು ಅವರ ನಿವಾಸದಲ್ಲಿ ಎಲ್ಲರೂ ಸೇರಿ ಪಾರ್ಟಿ ಮಾಡಿದ್ದಾರೆ.

‘ಗುಂಟೂರು ಖಾರಂ’ ಸಿನಿಮಾ ನೋಡಲಿರುವ ಶಾರುಖ್​ ಖಾನ್​; ಮಹೇಶ್​ ಬಾಬು ಫ್ಯಾನ್ಸ್​ಗೆ ಖುಷಿ

‘ಗುಂಟೂರು ಖಾರಂ’ ಸಿನಿಮಾದ ಸಕ್ಸಸ್​ ಪಾರ್ಟಿಯಲ್ಲಿ ಮಹೇಶ್​ ಬಾಬು, ಶ್ರೀಲೀಲಾ, ಮೀನಾಕ್ಷಿ ಚೌಧರಿ, ದಿಲ್​ ರಾಜು, ಮಹೇಶ್​ ಬಾಬು ಪತ್ನಿ ನಮ್ರತಾ ಶಿರೋಡ್ಕರ್​, ಪುತ್ರಿ ಸಿತಾರಾ ಘಟ್ಟಮನೇನಿ ಮುಂತಾದವರು ಎಂಜಾಯ್​ ಮಾಡಿದ್ದಾರೆ. ಬಳಿಕ ಎಲ್ಲರೂ ಜೊತೆಯಾಗಿ ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಗುಂಟೂರು ಖಾರಂ’ ಚಿತ್ರದ ಗೆಲುವಿಗಾಗಿ ಮಹೇಶ್​ ಬಾಬು ಮತ್ತು ಅವರ ತಂಡಕ್ಕೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

View this post on Instagram

A post shared by Sreeleela (@sreeleela14)

ಈ ಪಾರ್ಟಿಯಲ್ಲಿ ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್​ ಹಾಗೂ ಸಂಗೀತ ನಿರ್ದೇಶಕ ಥಮನ್​ ಎಸ್​. ಅವರು ಕಾಣಿಸಿಲ್ಲ. ಅವರಿಬ್ಬರು ಯಾಕೆ ಮಿಸ್​ ಆಗಿದ್ದಾರೆ ಎಂಬುದಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ಕನ್ನಡದಲ್ಲಿ ಕೆಲವು ಸಿನಿಮಾಗಳನ್ನು ಮಾಡಿರುವ ಶ್ರೀಲೀಲಾ ಅವರು ತೆಲುಗಿನಲ್ಲಿ ಸ್ಟಾರ್​ ನಟರ ಸಿನಿಮಾಗಳಿಗೆ ಹೀರೋಯಿನ್​ ಆಗುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕನ್ನಡಕ್ಕಿಂತಲೂ ತೆಲುಗಿನಲ್ಲೇ ಅವರು ಹೆಚ್ಚು ಬ್ಯುಸಿ ಆಗಿದ್ದಾರೆ. ‘ಗುಂಟೂರು ಖಾರಂ’ ಬಿಡುಗಡೆ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರಿಗೆ ಹೊಸ ಹೊಸ ಆಫರ್​ಗಳು ಸಿಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Tue, 16 January 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್