Sreeleela: ಸಿನಿಮಾ ಸೋತರೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ; ಟಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣಗೆ ಚಿಂತೆ ಶುರು?

Rashmika Mandanna: ಕನ್ನಡತಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ದೊಡ್ಡ ಹೀರೋಯಿನ್​ ಆಗಿ ಬೆಳೆಯುವ ಸೂಚನೆ ಸಿಕ್ಕಿದೆ. ಅದು ರಶ್ಮಿಕಾ ವೃತ್ತಿಜೀವನದ ಮೇಲೆ ಪರಿಣಾಮ ಬೀರುವುದು ಸಹಜ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

Sreeleela: ಸಿನಿಮಾ ಸೋತರೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ; ಟಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣಗೆ ಚಿಂತೆ ಶುರು?
ಶ್ರೀಲೀಲಾ, ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Oct 25, 2021 | 9:02 AM

ಚಿತ್ರರಂಗದಲ್ಲಿ ಕಲಾವಿದರ ಅದೃಷ್ಟ ಯಾವಾಗಬೇಕಾದರೂ ಖುಲಾಯಿಸಬಹುದು. ನಟಿ ಶ್ರೀಲೀಲಾ ಅವರಿಗೆ ಈಗ ಲಾಟರಿ ಹೊಡೆದಿದೆ ಎಂಬ ಮಾತು ಟಾಲಿವುಡ್​ ಅಂಗಳದಿಂದ ಕೇಳಿಬರುತ್ತಿದೆ. ಕನ್ನಡದ ‘ಕಿಸ್​’ ಚಿತ್ರದಿಂದ ಪ್ರೇಕ್ಷಕರಿಗೆ ಪರಿಚಯವಾದ ಈ ಅಪ್ಪಟ ಕನ್ನಡತಿಗೆ ತೆಲುಗು ನೆಲದಲ್ಲಿ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಅವರು ನಟಿಸಿರುವ ತೆಲುಗು ಸಿನಿಮಾ ‘ಪೆಳ್ಳಿ ಸಂದಡಿ’ ಬಾಕ್ಸ್​ ಆಫೀಸ್​ನಲ್ಲಿ ಸೋತಿದೆ. ಅದು ಇಡೀ ಚಿತ್ರತಂಡಕ್ಕೆ ಬೇಸರ ಮೂಡಿಸಿದೆ. ಅದರ ನಡುವೆಯೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಇದು ರಶ್ಮಿಕಾ ಮಂದಣ್ಣ ಚಿಂತೆಗೆ ಕಾರಣವಾದರೂ ಅಚ್ಚರಿ ಏನಿಲ್ಲ.

ಸದ್ಯ ಟಾಲಿವುಡ್​ನಲ್ಲಿ ರಶ್ಮಿಕಾ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದಾರೆ. ಅವರಿಗೆ ಪೈಪೋಟಿ ನೀಡುವ ರೀತಿಯಲ್ಲಿ ಶ್ರೀಲೀಲಾ ಎಂಟ್ರಿ ಕೊಟ್ಟಿದ್ದಾರೆ. ‘ಪೆಳ್ಳಿ ಸಂದಡಿ’ ಸಿನಿಮಾದಲ್ಲಿ ಶ್ರೀಲೀಲಾ ಅವರ ನಟನೆ, ಗ್ಲಾಮರ್​ ಕಂಡವರು ಫಿದಾ ಆಗಿದ್ದಾರೆ. ಸದ್ಯ ಟಾಲಿವುಡ್​ ಅಂಗಳದಲ್ಲಿ ಅವರ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಹಲವು ಸಿನಿಮಾ ತಂಡಗಳು ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲು ಮಾತುಕತೆ ನಡೆಸುತ್ತಿವೆ. ಸ್ಟಾರ್​ ನಟ ರವಿ ತೇಜಾ ಅವರ ಸಿನಿಮಾದಲ್ಲಿ ಶ್ರೀಲೀಲಾಗೆ ಚಾನ್ಸ್​ ಸಿಕ್ಕಿದೆ ಎಂಬ ಮಾಹಿತಿ ಕೇಳಿಬರುತ್ತಿದೆ.

ತೆಲುಗು ಚಿತ್ರರಂಗದ ಪ್ರತಿಷ್ಠಿತ ‘ಗೀತಾ ಆರ್ಟ್ಸ್​’ ನಿರ್ಮಾಣ ಸಂಸ್ಥೆ ಈಗ ಶ್ರೀಲೀಲಾ ಮೇಲೆ ಕಣ್ಣಿಟಿದೆ. ನಿರ್ಮಾಪಕ ಅಲ್ಲು ಅರವಿಂದ್​ ಅವರು ಶ್ರೀಲೀಲಾ ಜೊತೆ ಮೂರು ಬ್ಯಾಕ್​ ಟು ಬ್ಯಾಕ್​ ಸಿನಿಮಾದ ಕಾಲ್​ಶೀಲ್​ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ತಮ್ಮ ಬ್ಯಾನರ್​ನಲ್ಲಿ ನಿರ್ಮಾಣ ಆಗಲಿರುವ ಸ್ಟಾರ್​ ಸಿನಿಮಾಗಳಿಗೆ ಶ್ರೀಲೀಲಾ ನಾಯಕಿಯಾದರೆ ಒಳಿತು ಎಂಬ ಲೆಕ್ಕಾಚಾರದಲ್ಲಿ ಅಲ್ಲು ಅರವಿಂದ್​ ಅವರಿದ್ದಾರೆ ಎಂಬ ಗುಸುಗುಸು ಟಾಲಿವುಡ್​ನಲ್ಲಿ ಕೇಳಿಬರುತ್ತಿದೆ.

ಒಂದು ವೇಳೆ ಈ ಮಾಹಿತಿ ನಿಜವೇ ಹೌದಾದರೆ ಶ್ರೀಲೀಲಾ ಶೀಘ್ರವೇ ತೆಲುಗು ಚಿತ್ರರಂಗದಲ್ಲಿ ದೊಡ್ಡ ಹೀರೋಯಿನ್​ ಆಗಿ ಬೆಳೆಯಲಿದ್ದಾರೆ. ಅದು ರಶ್ಮಿಕಾ ವೃತ್ತಿಜೀವನದ ಮೇಲೆ ಪರಿಣಾಮ ಬೀರುವುದು ಸಹಜ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದು ಕೊಡಗಿನ ಕುವರಿಯ ಚಿಂತೆಗೆ ಕಾರಣ ಆಗಬಹುದು. ಹಾಗಂತ ರಶ್ಮಿಕಾ ಕೇವಲ ಟಾಲಿವುಡ್​ ನಂಬಿಕೊಂಡು ಕೂತಿಲ್ಲ. ಸದ್ಯ ಅವರು ಬಾಲಿವುಡ್​ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ಬೈ’, ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ ಸಿನಿಮಾ ಮಾಡುತ್ತಿದ್ದಾರೆ.

ಇದನ್ನೂ ಓದಿ:

ತುಂಬಾ ಕಿರಿಕಿರಿ ಮಾಡಿದ್ರೆ ರಶ್ಮಿಕಾ ಹೀಗೆ ಒದಿತಾರೆ; ವಿಡಿಯೋ ಸಮೇತ ವಿವರಿಸಿದ ನಟಿ

ಯಶ್​, ಪ್ರಭಾಸ್​, ಸಮಂತಾರನ್ನೂ ಹಿಂದಿಕ್ಕಿ ರಶ್ಮಿಕಾ ನಂ.1, ದೇವರಕೊಂಡ ನಂ.2: ಇಲ್ಲಿದೆ ಫೋರ್ಬ್ಸ್​ ಪಟ್ಟಿ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್