AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೇನೋ ಹೇಳ್ಬೇಡ್ರಯ್ಯ; ತಿಲಕ್ ವರ್ಮಾ-ಶ್ರೀಲೀಲಾ ಡೇಟಿಂಗ್ ವದಂತಿಗೆ ಬ್ರೇಕ್

ನಟಿ ಶ್ರೀಲೀಲಾ ಮತ್ತು ಕ್ರಿಕೆಟಿಗ ತಿಲಕ್ ವರ್ಮಾ ಡೇಟಿಂಗ್ ವದಂತಿಗಳನ್ನು ಅವರ ತಾಯಿ ಡಾ. ಸ್ವರ್ಣಲತಾ ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಇಬ್ಬರೂ ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶ್ರೀಲೀಲಾ ಸದ್ಯ ಸಿನಿಮಾ ವೃತ್ತಿ ಹಾಗೂ ನೀಟ್ ಪಿಜಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ. ನೆಟ್ಟಿಗರು ಸಣ್ಣ ವಿಷಯಗಳನ್ನಿಟ್ಟುಕೊಂಡು ಸುಳ್ಳು ಕಥೆಗಳನ್ನು ಹೆಣೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದು, ಶ್ರೀಲೀಲಾ ಪ್ರಸ್ತುತ ತಮ್ಮ ಶಿಕ್ಷಣ ಮತ್ತು ಸಿನಿಮಾದತ್ತ ಮಾತ್ರ ಗಮನ ಹರಿಸಿದ್ದಾರೆ.

ಏನೇನೋ ಹೇಳ್ಬೇಡ್ರಯ್ಯ; ತಿಲಕ್ ವರ್ಮಾ-ಶ್ರೀಲೀಲಾ ಡೇಟಿಂಗ್ ವದಂತಿಗೆ ಬ್ರೇಕ್
ಶ್ರೀಲೀಲಾ
ರಾಜೇಶ್ ದುಗ್ಗುಮನೆ
|

Updated on: May 18, 2026 | 1:21 PM

Share

ಸೆಲೆಬ್ರಿಟಿಗಳು ಸಣ್ಣ ಸಣ್ಣ ವಿಷಯಕ್ಕೂ ಸುದ್ದಿ ಆಗುತ್ತಾರೆ. ಅವರು ಏನೇ ಮಾಡಿದರೂ ಚರ್ಚೆ ಆಗುತ್ತದೆ. ಸಣ್ಣ ಸಣ್ಣ ಕಾಕತಾಳೀಯಗಳೂ ಸಹ ದೊಡ್ಡ ಮಟ್ಟದ ಗಾಸಿಪ್‌ಗಳಾಗಿ ಮಾರ್ಪಡುತ್ತವೆ. ಒಂದೇ ಜಾಗದಲ್ಲಿ ಕಾಣಿಸಿಕೊಂಡರೆ ಸಾಕು, ಅವರಿಬ್ಬರ ನಡುವೆ ಏನೋ ನಡೆಯುತ್ತಿದೆ ಎಂದು ಕಥೆ ಕಟ್ಟುವುದು ನೆಟ್ಟಿಗರಿಗೆ ಅಭ್ಯಾಸವಾಗಿಬಿಟ್ಟಿದೆ. ಈಗ ಇಂತಹದ್ದೇ ಒಂದು ಸುಳ್ಳು ವದಂತಿಗೆ ಸ್ಟಾರ್ ನಟಿ ಶ್ರೀಲೀಲಾ (Sreeleela) ಸಂತ್ರಸ್ತೆ ಆಗಿದ್ದಾರೆ. ಈಗ ಈ ವಿಷಯವಾಗಿ ಶ್ರೀಲೀಲಾ ತಾಯಿ ಸ್ವರ್ಣಲತಾ ಸ್ಪಷ್ಟನೆ ನೀಡಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ತಿಲಕ್ ವರ್ಮ ಹಾಗೂ ಶ್ರೀಲೀಲಾ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿತ್ತು. ಆದರೆ, ಈಗ ಈ ಎಲ್ಲಾ ಸುದ್ದಿಗಳಿಗೆ ಶ್ರೀಲೀಲಾ ಅವರ ತಾಯಿ ಡಾ. ಸ್ವರ್ಣಲತಾ ಅವರು ಅಧಿಕೃತವಾಗಿ ತೆರೆ ಎಳೆದಿದ್ದಾರೆ.

ವೈಕುಂಠ ಏಕಾದಶಿಯ ಸಂದರ್ಭದಲ್ಲಿ ಶ್ರೀಲೀಲಾ ಮತ್ತು ತಿಲಕ್ ವರ್ಮ ಇಬ್ಬರೂ ಪ್ರತ್ಯೇಕವಾಗಿ ತಿರುಮಲಕ್ಕೆ ಭೇಟಿ ನೀಡಿದ್ದರು. ಇದಾದ ಬಳಿಕ ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಶ್ರೀಲೀಲಾ ಅವರ ತಾಯಿ ವಿಐಪಿ ಸ್ಟ್ಯಾಂಡ್‌ನಲ್ಲಿ ಕಾಣಿಸಿಕೊಂಡಿದ್ದರು. ಇಷ್ಟೇ ಅಲ್ಲದೆ ಶ್ರೀಲೀಲಾ ತಂಡದ ಸದಸ್ಯರೊಬ್ಬರು ತಿಲಕ್ ಹೆಸರಿನ ಜರ್ಸಿ ಧರಿಸಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ಈ ಸಣ್ಣ ವಿಷಯಗಳನ್ನೇ ಇಟ್ಟುಕೊಂಡು ನೆಟ್ಟಿಗರು ಇವರಿಬ್ಬರ ನಡುವೆ ಪ್ರೀತಿ ಬೆಳೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಥೆ ಹೆಣೆಯಲು ಶುರು ಮಾಡಿದ್ದರು.

ಈ ಬೇಡದ ಗಾಸಿಪ್‌ಗಳ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಶ್ರೀಲೀಲಾ ತಾಯಿ ಡಾ. ಸ್ವರ್ಣಲತಾ, ‘ಈ ಎಲ್ಲಾ ಸುದ್ದಿಗಳು ಸಂಪೂರ್ಣವಾಗಿ ಸುಳ್ಳು ಮತ್ತು ಆಧಾರರಹಿತ. ಇದರಲ್ಲಿ ಒಂದು ಚೂರೂ ಸತ್ಯಾಂಶವಿಲ್ಲ. ಶ್ರೀಲೀಲಾ ಮತ್ತು ತಿಲಕ್ ವರ್ಮ ಇದುವರೆಗೆ ಭೇಟಿಯೂ ಆಗಿಲ್ಲ, ಮಾತನಾಡಿಯೂ ಇಲ್ಲ. ಜನರು ಸಣ್ಣ ಸಣ್ಣ ವಿಷಯಗಳನ್ನು ಇಟ್ಟುಕೊಂಡು ತಮಗೆ ಬೇಕಾದ ಹಾಗೆ ಊಹಾಪೋಹಗಳನ್ನು ಸೃಷ್ಟಿಸುತ್ತಿದ್ದಾರೆ’ ಎಂದು ಸ್ಪಷ್ಟಪಡಿಸಿದ್ದಾರೆ.

‘ಶ್ರೀಲೀಲಾ ಸದ್ಯಕ್ಕೆ ಸಿನಿಮಾ ಮತ್ತು ವಿದ್ಯಾಭ್ಯಾಸ ಎರಡನ್ನೂ ಬ್ಯಾಲೆನ್ಸ್ ಮಾಡುತ್ತಿದ್ದಾಳೆ. ಜೂನ್‌ನಲ್ಲಿ ನಡೆಯಲಿರುವ ನೀಟ್ ಪಿಜಿ ಪರೀಕ್ಷೆಗೆ ಅವಳು ತಯಾರಿ ನಡೆಸುತ್ತಿದ್ದಾಳೆ. ಅವಳಿಗೆ ವೈಯಕ್ತಿಕ ಜೀವನ, ಮದುವೆ ಅಂತೆಲ್ಲಾ ಯೋಚಿಸಲು ಇನ್ನೂ 5-6 ವರ್ಷಗಳ ಸಮಯವಿದೆ. ಸದ್ಯಕ್ಕಂತೂ ಅವಳ ಗಮನ ಪೂರ್ತಿ ಓದು ಮತ್ತು ಸಿನಿಮಾಗಳ ಮೇಲಷ್ಟೇ ಇದೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕ್ರಿಕೆಟಿಗನ ಜೊತೆಗೆ ಶ್ರೀಲೀಲಾ ಡೇಟಿಂಗ್: ಸತ್ಯಾಂಶವೇನು?

ಶ್ರೀಲೀಲಾ ಇಂತಹ ವದಂತಿಗಳನ್ನು ಎದುರಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಜೊತೆಯೂ ಇವರ ಹೆಸರು ಕೇಳಿಬಂದಿತ್ತು. ‘ತು ಮೇರಿ ಜಿಂದಗಿ ಹೈ’ ಚಿತ್ರದಲ್ಲಿ ಇವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!