ವಿಜಯ್ ದೇವರಕೊಂಡ ಹೊಸ ಚಿತ್ರದಿಂದ ಹೊರ ನಡೆದ ಶ್ರೀಲೀಲಾ; ‘ಪ್ರೇಮಲು’ ನಾಯಕಿಯ ಎಂಟ್ರಿ?

ವಿಜಯ್ ದೇವರಕೊಂಡಗೆ ‘ಗೀತ ಗೋವಿಂದಂ’ ಬಳಿಕ ಹೇಳಿಕೊಳ್ಳುವಂತ ದೊಡ್ಡ ಗೆಲುವು ಸಿಕ್ಕಿಲ್ಲ. ಹೀಗಾಗಿ, ಅವರು ಮುಂದಿನ ಸಿನಿಮಾಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಶ್ರೀಲೀಲಾ ‘VD 12’ ಸಿನಿಮಾಗೆ ನಾಯಕಿ ಎಂದು ಮೊದಲೇ ಘೋಷಣೆ ಮಾಡಲಾಗಿತ್ತು. ಈಗ ಶ್ರೀಲೀಲಾ ಸಿನಿಮಾದಿಂದ ಹೊರ ನಡೆದರು.

ವಿಜಯ್ ದೇವರಕೊಂಡ ಹೊಸ ಚಿತ್ರದಿಂದ ಹೊರ ನಡೆದ ಶ್ರೀಲೀಲಾ; ‘ಪ್ರೇಮಲು’ ನಾಯಕಿಯ ಎಂಟ್ರಿ?
ಶ್ರೀಲೀಲಾ-ಮಮಿತಾ
Follow us
ರಾಜೇಶ್ ದುಗ್ಗುಮನೆ
|

Updated on:Apr 10, 2024 | 11:18 AM

ವಿಜಯ್ ದೇವರಕೊಂಡ (Vijay Devarakonda) ಅವರಿಗೆ ಇತ್ತೀಚೆಗೆ ಅದೃಷ್ಟ ಕೈ ಹಿಡಿಯುತ್ತಿಲ್ಲ. ‘ಲೈಗರ್’ ಸಿನಿಮಾ ಹೀನಾಯವಾಗಿ ಸೋತಿತ್ತು. ‘ಖುಷಿ’ ಸಾಧಾರಣ ಮೆಚ್ಚುಗೆ ಪಡೆದಿದೆ. ಇತ್ತೀಚೆಗೆ ರಿಲೀಸ್ ಆದ ‘ಫ್ಯಾಮಿಲಿ ಸ್ಟಾರ್’ ಮಕಾಡೆ ಮಲಗಿದೆ. ಈಗ ಅವರು ಮುಂದಿನ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ. ಈ ಚಿತ್ರಕ್ಕೆ ಸದ್ಯಕ್ಕೆ ‘VD 12’ ಎಂದು ಕರೆಯಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಶೀರ್ಷಿಕೆ ಫೈನಲ್ ಆಗಲಿದೆ. ಈಗ ಚಿತ್ರದಿಂದ ಶ್ರೀಲೀಲಾ ಹೊರ ನಡೆದಿದ್ದಾರೆ ಎಂದು ವರದಿ ಆಗಿದೆ.

ವಿಜಯ್ ದೇವರಕೊಂಡಗೆ ‘ಗೀತ ಗೋವಿಂದಂ’ ಬಳಿಕ ಹೇಳಿಕೊಳ್ಳುವಂತ ದೊಡ್ಡ ಗೆಲುವು ಸಿಕ್ಕಿಲ್ಲ. ಹೀಗಾಗಿ, ಅವರು ಮುಂದಿನ ಸಿನಿಮಾಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಶ್ರೀಲೀಲಾ ‘VD 12’ ಸಿನಿಮಾಗೆ ನಾಯಕಿ ಎಂದು ಮೊದಲೇ ಘೋಷಣೆ ಮಾಡಲಾಗಿತ್ತು. ಆದರೆ, ಸಿನಿಮಾ ಕಾರಣಾಂತರಗಳಿಂದ ವಿಳಂಬ ಆಗುತ್ತಲೇ ಬಂತು. ಹೀಗಾಗಿ, ಶ್ರೀಲೀಲಾ ಸಿನಿಮಾದಿಂದ ಹೊರ ನಡೆದರು. ಬದಲು ಬೇರೆ ನಾಯಕಿಯ ಹುಡುಕಾಟದಲ್ಲಿ ತಂಡ ತೊಡಗಿದೆ.

ಇತ್ತೀಚೆಗೆ ಮಲಯಾಳಂನಲ್ಲಿ ‘ಪ್ರೇಮಲು’ ಸಿನಿಮಾ ರಿಲೀಸ್ ಆಗಿ ಹಿಟ್ ಎನಿಸಿಕೊಂಡಿದೆ. ಈ ಚಿತ್ರದ ನಾಯಕಿ ಮಮಿತಾ ಬೈಜು ಅವರು ಚಿತ್ರದ ನಾಯಕಿ ಆಗಿ ಮಿಂಚಿದ್ದಾರೆ. ಅವರನ್ನು ‘VD 12’ಗೆ ಆಯ್ಕೆ ಮಾಡಿಕೊಳ್ಳಲು ಪ್ಲ್ಯಾನ್ ನಡೆದಿದೆ ಎನ್ನಲಾಗುತ್ತಿದೆ. ಮತ್ತೊಂದುವ ವರದಿ ಪ್ರಕಾರ ‘ಮಿಸ್ಟರ್ ಬಚ್ಚನ್’ ಸಿನಿಮಾದ ಭಾಗ್ಯಶ್ರೀ ಅವರನ್ನು ಕೂಡ ಪರಿಗಣಿಸಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ:  ವಿಜಯ್​ ದೇವರಕೊಂಡ ಸಿನಿಮಾ ಟ್ರೋಲ್​ ಮಾಡಿದವರ ವಿರುದ್ಧ ಸೈಬರ್​ ದೂರು

‘ಜರ್ಸಿ’ ಚಿತ್ರವನ್ನು ನಿರ್ದೇಶನ ಮಾಡಿದ್ದ ಗೌತಮ್ ತಿನ್ನನುರಿ ಅವರು ‘VD 12’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಶ್ರೀಲೀಲಾ ಅವರು ಈಗಾಗಲೇ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಈ ಕಾರಣಕ್ಕೆ ಒಂದು ಸಿನಿಮಾ ವಿಳಂಬ ಆದರೂ ಅವರ ಬಳಿ ಡೇಟ್ ಹೊಂದಿಸಿಕೊಳ್ಳೋಕೆ ಸಾಧ್ಯವಾಗುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:18 am, Wed, 10 April 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್