AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSMB 28: ಮಹೇಶ್​ ಬಾಬು ಸಿನಿಮಾದಲ್ಲಿ ನಟಿಸಲ್ಲ ಎಂದ ಸ್ಟಾರ್​ ನಟಿಯರು; ಕಾರಣ ಏನು?

Mahesh Babu | SSMB28 ಮಹೇಶ್​ ಬಾಬು ಸಿನಿಮಾದಲ್ಲಿ ಹೀರೋಯಿನ್​ ಆಗುವ ಚಾನ್ಸ್​ ಸಿಕ್ಕರೆ ಯಾವ ನಟಿಯೂ ‘ನೋ’ ಎನ್ನುವುದಿಲ್ಲ. ಆದರೆ ಈ ನಟಿಯರು ಆಫರ್​ ರಿಜೆಕ್ಟ್​ ಮಾಡಿದ್ದಕ್ಕೊಂದು ಕಾರಣ ಇದೆ.

SSMB 28: ಮಹೇಶ್​ ಬಾಬು ಸಿನಿಮಾದಲ್ಲಿ ನಟಿಸಲ್ಲ ಎಂದ ಸ್ಟಾರ್​ ನಟಿಯರು; ಕಾರಣ ಏನು?
ಮಹೇಶ್ ಬಾಬು
TV9 Web
| Edited By: |

Updated on: Jul 12, 2022 | 11:48 AM

Share

ನಟ ಮಹೇಶ್​ ಬಾಬು (Mahesh Babu) ಅವರು ಸದ್ಯ ‘ಸರ್ಕಾರು ವಾರಿ ಪಾಟ’ ಸಿನಿಮಾದ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಈ ವರ್ಷ ತೆರೆಕಂಡ ಈ ಚಿತ್ರ ಸೂಪರ್​ ಹಿಟ್​ ಆಯಿತು. ಬಳಿಕ ಅವರು ಫ್ಯಾಮಿಲಿ ಜೊತೆ ಫಾರಿನ್​ ಟ್ರಿಪ್​ ಹೊಗಿದ್ದರು. ಈಗ ಅವರ ಮುಂದಿನ ಸಿನಿಮಾ ಬಗ್ಗೆ ಚರ್ಚೆ ಶುರುವಾಗಿದೆ. ಖ್ಯಾತ ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ (Trivikram Srinivas) ಜೊತೆ ಮಹೇಶ್​ ಬಾಬು ಕೈ ಜೋಡಿಸಲಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಕೂಡ ಆಗಿದೆ. ಈ ಸಿನಿಮಾದ ಪಾತ್ರವರ್ಗದ ಕುರಿತು ಹಲವು ಬಗೆಯ ಮಾಹಿತಿ ಹರಿದಾಡುತ್ತಿದೆ. ಇದು ಮಹೇಶ್​ ಬಾಬು ಅವರ 28ನೇ (SSMB28) ಸಿನಿಮಾವಾಗಿದ್ದು, ಇದರಲ್ಲಿ ನಟಿಸಲು ಕೆಲವು ಹೀರೋಯಿನ್ಸ್​ ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಮಹೇಶ್​ ಬಾಬು-ತ್ರಿವಿಕ್ರಮ್​ ಕಾಂಬಿನೇಷನ್​ನ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ. ಈ ಸಿನಿಮಾದಲ್ಲಿ ಸೆಕೆಂಡ್​ ಹೀರೋಯಿನ್​ ಪಾತ್ರ ಕೂಡ ಇರಲಿದೆಯಂತೆ. ಆದರೆ ಆ ಪಾತ್ರದಲ್ಲಿ ನಟಿಸಲು ಕೆಲವು ಸ್ಟಾರ್​ ನಾಯಕಿಯರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಶ್ರೀಲೀಲಾ, ನಭಾ ನಟೇಶ್​ ಹಾಗೂ ನಿಧಿ ಅಗರ್​ವಾಲ್​ ಅವರಿಗೆ ಆಫರ್​ ನೀಡಲಾಗಿತ್ತು. ಆದರೆ ಅವರು ಆ ಪಾತ್ರವನ್ನು ಒಪ್ಪಿಕೊಂಡಿಲ್ಲ ಎಂದು ತೆಲುಗಿನ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಚಿತ್ರತಂಡದಿಂದಾಗಲೇ ಅಥವಾ ಈ ನಟಿಯರಿಂದಾಗಲೀ ಸ್ಪಷ್ಟನೆ ಸಿಕ್ಕಿಲ್ಲ.

ಮಹೇಶ್​ ಬಾಬು ಸಿನಿಮಾದಲ್ಲಿ ಹೀರೋಯಿನ್​ ಆಗುವ ಚಾನ್ಸ್​ ಸಿಕ್ಕರೆ ಯಾವ ನಟಿಯೂ ‘ನೋ’ ಎನ್ನುವುದಿಲ್ಲ. ಆದರೆ ಎರಡನೇ ನಾಯಕಿ ಪಾತ್ರಕ್ಕೆ ಹೆಚ್ಚು ಮಹತ್ವ ಇಲ್ಲದ ಕಾರಣ ನಭಾ ನಟೇಶ್​, ಶ್ರೀಲೀಲಾ ಹಾಗೂ ನಿಧಿ ಅಗರ್​ವಾಲ್​ ಅವರು ಈ ಆಫರ್​ ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಅಂತಿಮವಾಗಿ ಯಾರು ಆ ಪಾತ್ರಕ್ಕೆ ಆಯ್ಕೆ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Sarkaru Vaari Paata Twitter review: ‘ಸರ್ಕಾರು ವಾರಿ ಪಾಟ’ ಚಿತ್ರ ನೋಡಿ ಮಹೇಶ್​ ಬಾಬು ಫ್ಯಾನ್ಸ್​ ಏನಂದ್ರು?
Image
ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ತ್ರಿವಿಕ್ರಮ್​ ಜೊತೆಗಿನ ಸಿನಿಮಾದ ಕೆಲಸಗಳು ಮುಗಿದ ಬಳಿಕ ಮಹೇಶ್​ ಬಾಬು ಅವರು ರಾಜಮೌಳಿ ಜೊತೆ ಕೈ ಜೋಡಿಸಲಿದ್ದಾರೆ. ಆ ಸಿನಿಮಾ ಬಗ್ಗೆಯೂ ಸಖತ್​ ನಿರೀಕ್ಷೆ ಇದೆ. ಆ ಕುರಿತು ಹೆಚ್ಚಿನ ಅಪ್​​ಡೇಟ್​ ಪಡೆಯಲು ಫ್ಯಾನ್ಸ್​ ಕಾದಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ