Samantha: ಸಮಂತಾ ಜತೆ ತೆರೆಹಂಚಿಕೊಳ್ಳಲಿದ್ದಾರೆ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್​

‘ಕಾದು ವಾಕುಲ ರೆಂಡು ಕಾಧಲ್’ ಚಿತ್ರದಲ್ಲಿ ಸಮಂತಾ ನಟಿಸಿದ್ದಾರೆ. ಕಳೆದ ತಿಂಗಳು ಈ ಚಿತ್ರದಲ್ಲಿನ ಸಮಂತಾ ಪಾತ್ರದ ಫಸ್ಟ್​​ಲುಕ್ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ನಯನತಾರ ಮತ್ತು ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Samantha: ಸಮಂತಾ ಜತೆ ತೆರೆಹಂಚಿಕೊಳ್ಳಲಿದ್ದಾರೆ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Dec 17, 2021 | 1:33 PM

ನಿಷೇಧಕ್ಕೆ ಒಳಗಾಗಿದ್ದ ಟೀಂ ಇಂಡಿಯಾ ಆಟಗಾರ ಶ್ರೀಶಾಂತ್ ಅವರು (Sreesanth) ಕಂಬ್ಯಾಕ್​ ಮಾಡಿದ್ದಾರೆ. ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯೋಕೆ ಅವರು ಪರದಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಇವುಗಳ ಮಧ್ಯೆ ಶ್ರೀಶಾಂತ್​ ಬಣ್ಣದ ಲೋಕದಲ್ಲಿ ಮಿಂಚುತ್ತಿದ್ದಾರೆ. ಕನ್ನಡ, ಹಿಂದಿಯಲ್ಲಿ ನಟಿಸಿರುವ ಶ್ರೀಶಾಂತ್​ ಈಗ ತಮಿಳಿಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಖ್ಯಾತ ನಟಿಯರಾದ ಸಮಂತಾ ಹಾಗೂ ನಯನತಾರಾ ಜತೆಗೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಶ್ರೀಶಾಂತ್ ಅವರು ಇನ್ನುಮುಂದೆ ಸಂಪೂರ್ಣವಾಗಿ ಚಿತ್ರರಂಗದಲ್ಲೇ ತೊಡಗಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ.

‘ಕಾದು ವಾಕುಲ ರೆಂಡು ಕಾಧಲ್’ ಚಿತ್ರದಲ್ಲಿ ಸಮಂತಾ ನಟಿಸಿದ್ದಾರೆ. ಕಳೆದ ತಿಂಗಳು ಈ ಚಿತ್ರದಲ್ಲಿನ ಸಮಂತಾ ಪಾತ್ರದ ಫಸ್ಟ್​​ಲುಕ್ ಬಿಡುಗಡೆ ಆಗಿತ್ತು. ಈ ಸಿನಿಮಾದಲ್ಲಿ ನಯನತಾರ ಮತ್ತು ವಿಜಯ್ ಸೇತುಪತಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಯನತಾರಾ ಅವರ ಪ್ರಿಯಕರ ವಿಘ್ನೇಶ್ ಶಿವನ್ ಅವರು ‘ಕಾದು ವಾಕುಲ ರೆಂಡು ಕಾಧಲ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಸೆಟ್​ಗೆ ಶ್ರೀಶಾಂತ್​ ಕೂಡ ಸೇರ್ಪಡೆ ಆಗಿದ್ದಾರೆ.

ಶ್ರೀಶಾಂತ್​ ಪಾತ್ರ ಏನು ಎಂಬ ಕುತೂಹಲ ಮೂಡದೇ ಇರದು. ಇದಕ್ಕೆ ಅವರೇ ಉತ್ತರ ನೀಡಿದ್ದಾರೆ. ‘ಇಂಥ ಉತ್ತಮ ತಂಡದೊಂದಿಗೆ ನಾನು ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿರುವುದು ಖುಷಿ ನೀಡಿದೆ. ಇದು ಸಿನಿಮಾದಲ್ಲಿ ಬರುವ ಅತ್ಯಂತ ಪ್ರಮುಖ ಪಾತ್ರ. ನಾನು ಈ ಬಗ್ಗೆ ಹೆಚ್ಚು ಹೇಳಲು ಇಷ್ಟಪಡುವುದಿಲ್ಲ. ಸಿನಿಮಾ ತೆರೆಕಂಡ ನಂತರದಲ್ಲಿ ಆ ಬಗ್ಗೆ ನಿಮಗೆ ತಿಳಿಯಲಿದೆ’ ಎಂದು ಶ್ರೀಶಾಂತ್ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರು ಸಾಕಷ್ಟು ಖುಷಿಪಟ್ಟಿದ್ದಾರೆ.

2017ರಲ್ಲಿ ತೆರೆಗೆ ಬಂದ ‘ಅಕ್ಸರ್​​ 2’ ಚಿತ್ರದ ಮೂಲಕ ಬಣ್ಣದ ಜಗತ್ತಿಗೆ ಶ್ರೀಶಾಂತ್​ ಕಾಲಿಟ್ಟರು. ಇದಾದ ನಂತರ ಅವರು ಮಲಯಾಳಂ ಚಿತ್ರರಂಗದಲ್ಲೂ ನಟಿಸಿದರು. ಕನ್ನಡದಲ್ಲಿ ತೆರೆಗೆ ಬಂದ ‘ಕೆಂಪೆಗೌಡ 2’ ಚಿತ್ರದಲ್ಲಿ ದೇಶ್​ಮುಖ್​ ಹೆಸರಿನ ವಿಲನ್​ ರೋಲ್​ನಲ್ಲಿ ಕಾಣಿಸಿಕೊಂಡರು. ಈ ಚಿತ್ರಕ್ಕೆ 17ನೇ ಸಾಲಿನ ಸಂತೋಷಮ್​ ಫಿಲ್ಮ್​ ಅವಾರ್ಡ್ಸ್​​ನಲ್ಲಿ ‘ಬೆಸ್ಟ್ ವಿಲನ್​’ ಪ್ರಶಸ್ತಿ ದೊರಕಿದೆ. ​

ಇದನ್ನೂ ಓದಿ: ‘ಕುಟುಂಬಕ್ಕೆ ಮುಜುಗರ ತರುವ ಪಾತ್ರ ಮಾಡಲ್ಲ’; ಸಮಂತಾ ವಿಚ್ಛೇದನಕ್ಕೆ ಪರೋಕ್ಷವಾಗಿ ಕಾರಣ ನೀಡಿದ ನಾಗ ಚೈತನ್ಯ

IPL 2021: ಸ್ಪಾಟ್ ಫಿಕ್ಸಿಂಗ್, ಪಾಕ್ ಆಟಗಾರರಿಗೆ ನಿಷೇಧ, ಶ್ರೀಶಾಂತ್​ಗೆ ಭಜ್ಜಿ ಕಪಾಳಮೋಕ್ಷ! ಐಪಿಎಲ್​ನಲ್ಲಿ ಸೃಷ್ಟಿಯಾದ ವಿವಾದಗಳಿವು

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು