AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿಯ ಆಸ್ತಿಗಾಗಿ ಕೋರ್ಟ್ ಮೆಟ್ಟಿಲೇರಿದ ಪತಿ ಮತ್ತು ಮಕ್ಕಳು

Sridevi and Boney Kapoor: ದಿವಂಗತ ನಟಿ ಶ್ರೀದೇವಿ ಅವರಿಗೆ ಸೇರಿದ ಚೆನ್ನೈನ ಇಸ್ಟ್ ಕೋಸ್ಟ್ ರೋಡ್‌ನಲ್ಲಿರುವ ಸುಮಾರು 4.7 ಎಕರೆ ಜಮೀನು ಈಗ ವಿವಾದದ ವಿಷಯವಾಗಿದೆ. ಜಮೀನಿನ ಮಾಲೀಕತ್ವಕ್ಕಾಗಿ ಕಾನೂನು ಹೋರಾಟ ನಡೆಯುತ್ತಿದ್ದು, ಇದೀಗ ಶ್ರೀದೇವಿಯ ಪತಿ ನಿರ್ಮಾಪಕ ಬೋನಿ ಕಪೂರ್ ಮತ್ತು ಮಕ್ಕಳಾದ ಜಾನ್ಹವಿ ಕಪೂರ್, ಖುಷಿ ಕಪೂರ್ ಅವರುಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಆಸ್ತಿಯ ಮಾಲೀಕತ್ವಕ್ಕಾಗಿ ಮತ್ತೊಬ್ಬರಿಂದ ಸಲ್ಲಿಸಲಾಗಿರುವ ಅರ್ಜಿಗಳನ್ನು ರದ್ದು ಮಾಡಬೇಕು ಎಂದು ಅಪ್ಪ-ಮಕ್ಕಳು ಮನವಿ ಮಾಡಿದ್ದು, ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಶ್ರೀದೇವಿಯ ಆಸ್ತಿಗಾಗಿ ಕೋರ್ಟ್ ಮೆಟ್ಟಿಲೇರಿದ ಪತಿ ಮತ್ತು ಮಕ್ಕಳು
Sridevi
ಮಂಜುನಾಥ ಸಿ.
|

Updated on: Mar 20, 2026 | 11:50 AM

Share

ದಿವಂಗತ ನಟಿ ಶ್ರೀದೇವಿ (Sridevi) ಅವರಿಗೆ ಸೇರಿದ ಚೆನ್ನೈನ ಇಸ್ಟ್ ಕೋಸ್ಟ್ ರೋಡ್‌ನಲ್ಲಿರುವ ಸುಮಾರು 4.7 ಎಕರೆ ಜಮೀನು ಈಗ ವಿವಾದದ ವಿಷಯವಾಗಿದೆ. ಜಮೀನಿನ ಮಾಲೀಕತ್ವಕ್ಕಾಗಿ ಕಾನೂನು ಹೋರಾಟ ನಡೆಯುತ್ತಿದ್ದು, ಇದೀಗ ಶ್ರೀದೇವಿಯ ಪತಿ ನಿರ್ಮಾಪಕ ಬೋನಿ ಕಪೂರ್ ಮತ್ತು ಮಕ್ಕಳಾದ ಜಾನ್ಹವಿ ಕಪೂರ್, ಖುಷಿ ಕಪೂರ್ ಅವರುಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಆಸ್ತಿಯ ಮಾಲೀಕತ್ವಕ್ಕಾಗಿ ಮತ್ತೊಬ್ಬರಿಂದ ಸಲ್ಲಿಸಲಾಗಿರುವ ಅರ್ಜಿಗಳನ್ನು ರದ್ದು ಮಾಡಬೇಕು ಎಂದು ಅಪ್ಪ-ಮಕ್ಕಳು ಮನವಿ ಮಾಡಿದ್ದು, ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಎಂಸಿ ಶಿವಕಾಮಿ ಮತ್ತು ಅವರ ಸಹೋದರ ಎಂಸಿ ನಟರಾಜನ್ ಮತ್ತು ಅವರ ತಾಯಿ ಚಂದ್ರಭಾನು ಎಂಬುವವರು ಚೆಂಗಲ್ಪಟ್ಟು ಜಿಲ್ಲಾ ನ್ಯಾಯಾಲಯದಲ್ಲಿ ಇಸ್ಟ್ ಕೋಸ್ಟ್ ರೋಡ್‌ನಲ್ಲಿರುವ ಸುಮಾರು 4.7 ಎಕರೆ ಜಮೀನು ಕುರಿತಾಗಿ ಮೊಕದ್ದಮೆ ಹೂಡಿದ್ದರು. ಈ ಆಸ್ತಿ ತಮ್ಮ ತಾತನಿಗೆ ಸೇರಿದ್ದಾಗಿದ್ದು, ತಮಗೂ ಇದರಲ್ಲಿ ಪಾಲಿದೆ ಎಂಬುದು ಅವರ ವಾದವಾಗಿದೆ. ನಟಿ ಶ್ರೀದೇವಿ ಅವರು ಈ ಆಸ್ತಿಯನ್ನು 1988 ರಲ್ಲಿಯೇ ಖರೀದಿ ಮಾಡಿದ್ದರು. ಕಳೆದ 38 ವರ್ಷಗಳಿಂದ ಈ ಆಸ್ತಿ ಅವರ ಕುಟುಂಬದ ವಶದಲ್ಲಿಯೇ ಇದೆ.

ಈ ಹಿಂದೆಯೂ ಬೋನಿ ಕಪೂರ್ ಅವರು ಈ ಕುರಿತು ಅರ್ಜಿ ಹಾಕಿದ್ದರು. ದೂರುದಾರರಾದ ಚಂದ್ರಭಾನು ಅವರ ವಿವಾಹವು ಕಾನೂನುಬದ್ಧವಾಗಿಲ್ಲ (ಅವರ ಪತಿ ಎಂಸಿ ಚಂದ್ರಶೇಖರನ್ ಅವರ ಮೊದಲ ಪತ್ನಿ ಬದುಕಿರುವಾಗಲೇ ನಡೆದ ವಿವಾಹ) ಎಂದು ಬೋನಿ ಕಪೂರ್ ವಾದಿಸಿದ್ದಾರೆ. ಈ ಹಿಂದೆ ಚೆಂಗಲ್ಪಟ್ಟು ನ್ಯಾಯಾಲಯವು ಬೋನಿ ಕಪೂರ್ ಅವರ ಅರ್ಜಿಯನ್ನು ತಿರಸ್ಕರಿಸಿ, ಪೂರ್ಣ ಪ್ರಮಾಣದ ವಿಚಾರಣೆಯ ಅಗತ್ಯವಿದೆ ಎಂದು ಹೇಳಿತ್ತು. ಇದನ್ನು ಪ್ರಶ್ನಿಸಿ ಕಪೂರ್ ಕುಟುಂಬ ಈಗ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದೆ.

ಇದನ್ನೂ ಓದಿ:ಹುಟ್ಟುಹಬ್ಬದಂದು ತಿರುಪತಿ ಬೆಟ್ಟ ಹತ್ತಿ ದರ್ಶನ ಪಡೆದ ನಟಿ ಜಾನ್ಹವಿ ಕಪೂರ್

1988 ರಲ್ಲಿ ನಡೆದ ಆಸ್ತಿ ಮಾರಾಟದ ಬಗ್ಗೆ 2025 ರಲ್ಲಿ ದೂರು ನೀಡಿರುವುದನ್ನು ಬೋನಿ ಕಪೂರ್ ಪ್ರಶ್ನಿಸಿದ್ದಾರೆ. ಸುಮಾರು 37 ವರ್ಷಗಳ ನಂತರ ಇಂತಹ ದೂರು ನೀಡುವುದು ಕಾನೂನುಬಾಹಿರ ಎಂದು ಅವರು ವಾದಿಸಿದ್ದಾರೆ. ಕಪೂರ್ ಕುಟುಂಬದ ಪ್ರಕಾರ, ದೂರುದಾರರು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಮತ್ತು ಚಂದ್ರಭಾನು ಅವರ ವಿವಾಹದ ಸತ್ಯಾಂಶವನ್ನು ಮರೆಮಾಚಿದ್ದಾರೆ. ಇದು ನ್ಯಾಯಾಲಯಕ್ಕೆ ಮಾಡಿದ ವಂಚನೆ ಎಂದು ಅವರು ಆರೋಪಿಸಿದ್ದಾರೆ. ಇನ್ನೊಂದೆಡೆ, ದೂರುದಾರರು ತಾವು 2023 ರಲ್ಲಿ ಮಾತ್ರ ಈ ಆಸ್ತಿಯ ‘ಅಕ್ರಮ ವ್ಯವಹಾರ’ಗಳ ಬಗ್ಗೆ ತಿಳಿದುಕೊಂಡೆವು ಎಂದು ಹೇಳುತ್ತಿದ್ದಾರೆ. ಕಪೂರ್ ಕುಟುಂಬವು 2023 ರಲ್ಲಿ ನಕಲಿ ದಾಖಲೆಗಳ ಮೂಲಕ ‘ಪಟ್ಟಾ’ ಪಡೆದಿದೆ ಎಂದು ಅವರು ಆರೋಪಿಸಿದ್ದಾರೆ. ರಸ್ತೆ ಅಗಲೀಕರಣಕ್ಕಾಗಿ ಸರ್ಕಾರ ಈ ಭೂಮಿಯನ್ನು ಸ್ವಾಧೀನಪಡಿಸಿಕೊಂಡಾಗ ಕಪೂರ್ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಲಾಗಿತ್ತು. ಈ ಪರಿಹಾರದ ಹಣದ ಮೇಲೆಯೂ ದೂರುದಾರರು ಹಕ್ಕು ಸಾಧಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಇದೆ.

ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಟಿ.ವಿ. ತಮಿಳ್ಸೆಲ್ವಿ ಅವರು ಪ್ರಕರಣದ ವಿಚಾರಣೆ ನಡೆಸಿ, ಕೆಳಹಂತದ ನ್ಯಾಯಾಲಯದ ನಡಾವಳಿಗಳಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ಮಾರ್ಚ್ 26, 2026 ಕ್ಕೆ ನಿಗದಿಪಡಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ