Srinidhi Shetty Salary: ‘ಕೆಜಿಎಫ್​’ ಸುಂದರಿ ಶ್ರೀನಿಧಿ ಶೆಟ್ಟಿ ‘ಕೋಬ್ರಾ’ ಚಿತ್ರಕ್ಕೆ ಪಡೆದ ಸಂಭಾವನೆ ಎಷ್ಟು?

Srinidhi Shetty | Cobra Movie: ಶ್ರೀನಿಧಿ ಶೆಟ್ಟಿ ಅವರಿಗೆ ತಮಿಳಿನಲ್ಲಿ ‘ಕೋಬ್ರಾ’ ಮೊದಲ ಪ್ರಾಜೆಕ್ಟ್​. ಅದಕ್ಕಾಗಿ ಅವರು ಪಡೆದಿರುವ ಸಂಭಾವನೆ ಎಷ್ಟು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.

Srinidhi Shetty Salary: ‘ಕೆಜಿಎಫ್​’ ಸುಂದರಿ ಶ್ರೀನಿಧಿ ಶೆಟ್ಟಿ ‘ಕೋಬ್ರಾ’ ಚಿತ್ರಕ್ಕೆ ಪಡೆದ ಸಂಭಾವನೆ ಎಷ್ಟು?
ಶ್ರೀನಿಧಿ ಶೆಟ್ಟಿ
Follow us
TV9 Web
| Updated By: Digi Tech Desk

Updated on:Jul 14, 2022 | 9:16 AM

Srinidhi Shetty Salary | ನಟಿಯರಿಗೆ ಸಿಗುವ ಸಂಭಾವನೆ (Remuneration) ಕಡಿಮೆ ಅಂತ ಕೆಲವರು ದೂರುತ್ತಾರೆ. ಹೀರೋಗಳಿಗೆ ಹೋಲಿಸಿದರೆ ಹೀರೋಯಿನ್​ಗಳು ಅಲ್ಪ ಪ್ರಮಾಣದ ಸಂಬಳಕ್ಕೆ ಸಮಾಧಾನ ಪಟ್ಟುಕೊಳ್ಳಬೇಕಾದ ಪರಿಸ್ಥಿತಿ ಇದೆ. ಆದರೆ ಇತ್ತೀಚೆಗೆ ಕಾಲ ಬದಲಾಗುತ್ತಿದೆ. ಸಮಂತಾ ರುತ್​ ಪ್ರಭು, ರಶ್ಮಿಕಾ ಮಂದಣ್ಣ ಮುಂತಾದ ನಟಿಯರು ಬಹುಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅವರ ಸಾಲಿಗೆ ಶ್ರೀನಿಧಿ ಶೆಟ್ಟಿ (Srinidhi Shetty) ಕೂಡ ಸೇರ್ಪಡೆ ಆಗಿದ್ದಾರೆ. ಅವರು ಪಡೆದುಕೊಂಡ ಸಂಬಳದ ಬಗ್ಗೆ ಗುಸುಗುಸು ಕೇಳಿಬರುತ್ತಿದೆ. ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲೂ ಗುರುತಿಸಿಕೊಂಡಿರುವ ಅವರಿಗೆ ‘ಕೋಬ್ರಾ’ (Cobra Movie) ಚಿತ್ರತಂಡದವರು ಕೈ ತುಂಬ ಸಂಭಾವನೆ ನೀಡಿದ್ದಾರೆ ಎಂದು ವರದಿ ಆಗಿದೆ. ಅದನ್ನು ಕೇಳಿದರೆ ಇತರೆ ನಟಿಯರು ಅಚ್ಚರಿ ಪಟ್ಟಕೊಳ್ಳುವುದು ಗ್ಯಾರಂಟಿ.

‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ ಬಿಡುಗಡೆ ಆದಾಗಲೇ ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಬಂತು. ಹತ್ತು ಹಲವು ಆಫರ್​ಗಳು ಕೂಡ ಹರಿದುಬರಲು ಆರಂಭವಾದವು. ಹಾಗಿದ್ದರೂ ಕೂಡ ಅವರು ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ಅವಸರ ಮಾಡಲಿಲ್ಲ. ‘ಕೆಜಿಎಫ್​’ ನಂತರ ಅವರು ಸಹಿ ಮಾಡಿದ ಏಕೈಕ ಸಿನಿಮಾ ತಮಿಳಿನ ‘ಕೋಬ್ರಾ’. ಈ ಚಿತ್ರಕ್ಕೆ ಚಿಯಾನ್​ ವಿಕ್ರಮ್​ ಹೀರೋ.

ವಿಕ್ರಮ್​ ಅವರಿಗೆ ತಮಿಳುನಾಡಿನಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಅವರು ನಟಿಸಿರುವ ‘ಕೋಬ್ರಾ’ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರಿಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದಾರೆ. ‘ಕೋಬ್ರಾ’ ಸಿನಿಮಾಗೆ ಶ್ರೀನಿಧಿ ಅವರು ಬರೋಬ್ಬರಿ 6ರಿಂದ 7 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ. ಈ ಮೊತ್ತ ಕೇಳಿ ಅನೇಕರು ಹುಬ್ಬೇರಿಸಿದ್ದಾರೆ.

ಇದನ್ನೂ ಓದಿ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ಕಿರುತೆರೆ ಜಗತ್ತಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಇವರೇ ನೋಡಿ; ಒಂದು ದಿನಕ್ಕೆ ಎಷ್ಟು ಲಕ್ಷ?
Image
‘ಕೆಜಿಎಫ್: ಚಾಪ್ಟರ್​​ 2’ ಸಿನಿಮಾ ಹಿಟ್​ ಆದ್ಮೇಲೆ ಶ್ರೀನಿಧಿ ಶೆಟ್ಟಿ ಕೇಳ್ತಿರುವ ಸಂಭಾವನೆ ಎಷ್ಟು ಕೋಟಿ?
Image
1992ರಲ್ಲಿ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು? ನೀವು ಅಚ್ಚರಿ ಪಡೋದು ಗ್ಯಾರಂಟಿ

ಶ್ರೀನಿಧಿ ಶೆಟ್ಟಿ ಅವರಿಗೆ ತಮಿಳಿನಲ್ಲಿ ಇದು ಮೊದಲ ಪ್ರಾಜೆಕ್ಟ್​. ಆದರೆ ಅದಕ್ಕೂ ಮುನ್ನ ‘ಕೆಜಿಎಫ್​: ಚಾಪ್ಟರ್​ 1’ ಹಾಗೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳು ತಮಿಳಿಗೂ ಡಬ್​ ಆಗಿ ತೆರೆ ಕಂಡಿದ್ದರಿಂದ ಅವರು ಕಾಲಿವುಡ್​ ಪ್ರೇಕ್ಷಕರಿಗೆ ಪರಿಚಿತರಾಗಿದ್ದಾರೆ. ಈಗ ‘ಕೋಬ್ರಾ’ ಮೂಲಕ ಮತ್ತೆ ರಂಜಿಸಲು ಸಜ್ಜಾಗಿದ್ದಾರೆ. ಹಲವು ಕಾರಣಗಳಿಂದ ಈ ಸಿನಿಮಾ ನಿರೀಕ್ಷೆ ಮೂಡಿಸಿದೆ. ಡಿಫರೆಂಟ್​ ಗೆಟಪ್​ನಲ್ಲಿ ವಿಕ್ರಮ್​ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಆಡಿಯೋ ರಿಲೀಸ್​ ಮಾಡಲಾಗಿದೆ. ಆಗಸ್ಟ್​ 11ರಂದು ವಿಶ್ವಾದ್ಯಂತ ‘ಕೋಬ್ರಾ’ ಬಿಡುಗಡೆ ಆಗಲಿದೆ.

Published On - 7:15 am, Thu, 14 July 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್