SS Rajamouli: ಸಾವಿರ ಕೋಟಿ ರೂಪಾಯಿ ಬಾಕ್ಸ್​ ಆಫೀಸ್​ ಸರದಾರ ರಾಜಮೌಳಿ ಜನ್ಮದಿನ; ಇಲ್ಲಿದೆ ಸಿನಿಜರ್ನಿ ಮೆಲುಕು

SS Rajamouli Birthday: ರಾಜಮೌಳಿ ಅವರು ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿದ್ದು ‘ಸ್ಟೂಡೆಂಟ್ ನಂ.1’ ಸಿನಿಮಾಗೆ. 2001ರಲ್ಲಿ ತೆರೆಕಂಡ ಆ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ 12 ಕೋಟಿ ರೂಪಾಯಿ ಗಳಿಸಿತ್ತು.

SS Rajamouli: ಸಾವಿರ ಕೋಟಿ ರೂಪಾಯಿ ಬಾಕ್ಸ್​ ಆಫೀಸ್​ ಸರದಾರ ರಾಜಮೌಳಿ ಜನ್ಮದಿನ; ಇಲ್ಲಿದೆ ಸಿನಿಜರ್ನಿ ಮೆಲುಕು
ರಾಜಮೌಳಿ
Follow us
TV9 Web
| Updated By: ಮದನ್​ ಕುಮಾರ್​

Updated on:Oct 10, 2022 | 11:04 AM

ಭಾರತೀಯ ಚಿತ್ರರಂಗದಲ್ಲಿ ನಿರ್ದೇಶಕ ರಾಜಮೌಳಿ (SS Rajamouli) ಅವರದ್ದು ದೊಡ್ಡ ಹೆಸರು. ಅವರು ಮಾಡುವ ಪ್ರತಿ ಸಿನಿಮಾ ಕೂಡ ಡಿಫರೆಂಟ್​ ಆಗಿರುತ್ತದೆ. ಆ ಕಾರಣಕ್ಕಾಗಿ ಅವರ ಮೇಲೆ ಸಿನಿಪ್ರಿಯರಿಗೆ ಎಲ್ಲಿಲ್ಲದಷ್ಟು ಅಭಿಮಾನ. ಹೈ ಬಜೆಟ್​ ಚಿತ್ರಗಳ ಮೂಲಕ ಬೇರೊಂದು ಲೋಕವನ್ನು ಅವರು ಪ್ರೇಕ್ಷಕರ ಮುಂದಿಡುತ್ತಾರೆ. ‘ಮಗಧೀರ’, ‘ಈಗ’, ‘ಬಾಹುಬಲಿ’, ‘ಆರ್​ಆರ್​ಆರ್​’ (RRR) ಮುಂತಾದ ಸಿನಿಮಾಗಳ ಮೂಲಕ ರಾಜಮೌಳಿ ಅವರ ಸಾಮರ್ಥ್ಯ ಏನು ಎಂಬುದು ಸಾಬೀತಾಗಿದೆ. ಬಾಕ್ಸ್​ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಿದಂತಹ ಸಿನಿಮಾಗಳನ್ನು ಅವರು ನೀಡಿದ್ದಾರೆ. ಇಂದು (ಅ.10) ರಾಜಮೌಳಿ ಅವರಿಗೆ ಜನ್ಮದಿನದ (SS Rajamouli Birthday) ಸಂಭ್ರಮ. ಆ ಪ್ರಯುಕ್ತ ಅವರ ಸಿನಿಮಾ ಪಯಣವನ್ನು ಮೆಕುಲು ಹಾಕುತ್ತ, ಹುಟ್ಟುಹಬ್ಬದ ಶುಭಾಶಯ ತಿಳಿಸಲಾಗುತ್ತಿದೆ.

ರಾಜಮೌಳಿ ಅವರ ಇಡೀ ಕುಟುಂಬವೇ ಸಿನಿಮಾ ರಂಗದಲ್ಲಿ ತೊಡಗಿಕೊಂಡಿದೆ. ಅವರ ತಂದೆ ವಿಜಯೇಂದ್ರ ಪ್ರಸಾದ್​ ಕೂಡ ಕೆಲವು ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ಹಲವಾರು ಸಿನಿಮಾಗಳಿಗೆ ಕಥೆ ಬರೆದ ಖ್ಯಾತಿ ಅವರಿಗೆ ಸಲ್ಲುತ್ತದೆ. ತಂದೆಯ ಜೊತೆಗಿದ್ದು ಸಿನಿಮಾದ ತಂ​ತ್ರಗಳನ್ನು ರಾಜಮೌಳಿ ಕಲಿತುಕೊಂಡರು.

ಇದನ್ನೂ ಓದಿ
Image
‘ಆರ್​ಆರ್​ಆರ್​’ ಸಿನಿಮಾ ಹೊಸ ದಾಖಲೆ; ಹಾಲಿವುಡ್ ಅವಾರ್ಡ್​ ಕಾರ್ಯಕ್ರಮದಲ್ಲಿ ರನ್ನರ್ ಅಪ್ ಆದ ರಾಜಮೌಳಿ ಚಿತ್ರ
Image
ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?
Image
ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
Image
‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

ಇಂದು ಸ್ಟಾರ್​ ನಿರ್ದೇಶಕನಾಗಿ ಬೆಳೆದುನಿಂತಿರುವ ರಾಜಮೌಳಿ ಅವರು ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿದ್ದು ಜ್ಯೂ. ಎನ್​ಟಿಆರ್​ ನಟನೆಯ ‘ಸ್ಟೂಡೆಂಟ್ ನಂ.1’ ಸಿನಿಮಾಗೆ. 2001ರಲ್ಲಿ ತೆರೆಕಂಡ ಆ ಚಿತ್ರ ಸೂಪರ್​ ಹಿಟ್​ ಆಯಿತು. ಆಗಿನ ಕಾಲಕ್ಕೆ ಬಾಕ್ಸ್​ ಆಫೀಸ್​ನಲ್ಲಿ 12 ಕೋಟಿ ರೂಪಾಯಿ ಗಳಿಸಿದ್ದು ಆ ಸಿನಿಮಾದ ಹೆಚ್ಚುಗಾರಿಕೆ. ನಂತರ ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುತ್ತಾ ರಾಜಮೌಳಿ ಇತಿಹಾಸ ಬರೆದರು.

ರಾಜಮೌಳಿ ಅವರ ಸಿನಿಮಾ ಬದುಕಿಗೆ ಟರ್ನಿಂಗ್​ ಪಾಯಿಂಟ್​ ಆಗಿದ್ದು ‘ಮಗಧೀರ’ ಚಿತ್ರ. ರಾಮ್​ ಚರಣ್​ ನಟನೆಯ ಈ ಸಿನಿಮಾದಲ್ಲಿ ಭರ್ಜರಿ ಸಾಹಸ ದೃಶ್ಯಗಳಿದ್ದವು. ಗ್ರಾಫಿಕ್ಸ್​ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳಲಾಗಿತ್ತು. ಅಂದಾಜು 44 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬರೋಬ್ಬರಿ 150 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ದಾಖಲೆ ಸೃಷ್ಟಿಸಿತು. ಆ ಬಳಿಕ ರಾಜಮೌಳಿ ಅವರ ಚಾರ್ಮ್​ ಹೆಚ್ಚಿತು.

ಪ್ರತಿ ಸಿನಿಮಾದಲ್ಲೂ ರಾಜಮೌಳಿ ಅವರು ಹೊಸ ಹೊಸ ಮೈಲಿಗಲ್ಲುಗಳನ್ನು ನಿರ್ಮಿಸುತ್ತಲೇ ಸಾಗುತ್ತಿದ್ದಾರೆ. ‘ಬಾಹುಬಲಿ’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಗಳಿಸಿತು. ಈ ವರ್ಷ ತೆರೆಕಂಡ ‘ಆರ್​ಆರ್​ಆರ್​’ ಚಿತ್ರ ಕೂಡ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಮಾಯಿ ಮಾಡಿ ಸೈ ಎನಿಸಿಕೊಂಡಿತು. ಹೀಗೆ ‘ಸ್ಟೂಡೆಂಟ್​ ನಂ.1’ ಚಿತ್ರದಿಂದ ಶುರುವಾದ ರಾಜಮೌಳಿ ಅವರ ಜರ್ನಿ ಇಂದಿಗೂ ಯಶಸ್ವಿಯಾಗಿ ಸಾಗುತ್ತಿದೆ.

ಮುಂದಿನ ಸಿನಿಮಾಗಾಗಿ ರಾಜಮೌಳಿ ಅವರು ತಯಾರಿ ನಡೆಸುತ್ತಿದ್ದಾರೆ. ಟಾಲಿವುಡ್​ನ ‘ಪ್ರಿನ್ಸ್​’ ಮಹೇಶ್​ ಬಾಬು ಜೊತೆ ಅವರು ಸಿನಿಮಾ ಮಾಡಲಿದ್ದು, ಆ ಚಿತ್ರದ ಮೇಲೆ ಸಖತ್​ ನಿರೀಕ್ಷೆ ಮನೆ ಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:04 am, Mon, 10 October 22

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ