‘ವಿಕ್ರಾಂತ್​ ರೋಣ’ ರಿಲೀಸ್​ಗೂ ಮುನ್ನ ಸುದೀಪ್​ಗೆ ಪ್ರೀತಿಯಿಂದ ವಿಶ್ ಮಾಡಿದ ನಿರ್ದೇಶಕ ರಾಜಮೌಳಿ

ಇವರ ಬಾಂಧವ್ಯ ಈಗಲೂ ಮುಂದುವರಿದಿದೆ. ಸುದೀಪ್ ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು (ಜುಲೈ 27) ರಾಜಮೌಳಿ ಅವರು ಸುದೀಪ್​ಗೆ ವಿಶ್ ಮಾಡಿದ್ದಾರೆ.

‘ವಿಕ್ರಾಂತ್​ ರೋಣ’ ರಿಲೀಸ್​ಗೂ ಮುನ್ನ ಸುದೀಪ್​ಗೆ ಪ್ರೀತಿಯಿಂದ ವಿಶ್ ಮಾಡಿದ ನಿರ್ದೇಶಕ ರಾಜಮೌಳಿ
ರಾಜಮೌಳಿ-ಸುದೀಪ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 27, 2022 | 10:02 PM

‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ತೆರೆಗೆ ಬರುವುದಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈ ಚಿತ್ರ ಸೃಷ್ಟಿಸಿರುವ ಹೈಪ್ ತುಂಬಾನೇ ದೊಡ್ಡ ಮಟ್ಟದಲ್ಲಿದೆ. ಈಗಾಗಲೇ ಹಲವು ಶೋಗಳು ಸೋಲ್ಡ್​ಔಟ್ ಆಗಿದೆ. 3ಡಿ ಅವತರಣಿಕೆಗೆ ಹೆಚ್ಚು ಬೇಡಿಕೆ ಸೃಷ್ಟಿ ಆಗಿದೆ. ಅನೇಕ ಸೆಲೆಬ್ರಿಟಿಗಳು ಕಿಚ್ಚ ಸುದೀಪ್​ಗೆ ವಿಶ್ ಮಾಡಿದ್ದಾರೆ. ‘ಬಾಹುಬಲಿ’, ‘ಆರ್​ಆರ್​ಆರ್​’ ನಂತಹ ಹಿಟ್ ಚಿತ್ರಗಳನ್ನು ನೀಡಿದ ತೆಲುಗು ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಕೂಡ ಕಿಚ್ಚ ಸುದೀಪ್​ಗೆ ವಿಶ್ ಮಾಡಿದ್ದಾರೆ.

ಸುದೀಪ್ ಹಾಗೂ ರಾಜಮೌಳಿ ನಡುವೆ ಒಳ್ಳೆಯ ಬಾಂಧವ್ಯ ಇದೆ. ರಾಜಮೌಳಿ ನಿರ್ದೇಶನದ ‘ಈಗ’ ಚಿತ್ರದಲ್ಲಿ ಸುದೀಪ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರು ಮಾಡಿದ್ದ ನೆಗೆಟಿವ್ ಶೇಡ್​​ನ​ ಪಾತ್ರ ಸಾಕಷ್ಟು ಹೈಲೈಟ್ ಆಗಿತ್ತು. ಆ ಬಳಿಕ ‘ಬಾಹುಬಲಿ’ ಚಿತ್ರದಲ್ಲಿ ಸುದೀಪ್ ಒಂದು ಅತಿಥಿ ಪಾತ್ರ ಮಾಡಿದ್ದರು. ಇವರ ಬಾಂಧವ್ಯ ಈಗಲೂ ಮುಂದುವರಿದಿದೆ. ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್​ಗೂ ಒಂದು ದಿನ ಮೊದಲು (ಜುಲೈ 27) ರಾಜಮೌಳಿ ಅವರು ಸುದೀಪ್​ಗೆ ವಿಶ್ ಮಾಡಿದ್ದಾರೆ.

ಇದನ್ನೂ ಓದಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
Image
Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Kichcha Sudeep: ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡ ‘ವಿಕ್ರಾಂತ್​ ರೋಣ’ ಟ್ರೇಲರ್​

‘ಪ್ರಯೋಗಗಳನ್ನು ಮಾಡುವಲ್ಲಿ ಮತ್ತು ಸವಾಲುಗಳನ್ನು ಸ್ವೀಕರಿಸುವಲ್ಲಿ ಸುದೀಪ್ ಯಾವಾಗಲೂ ಮೊದಲಿಗರು. ‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಅವರು ಏನು ಮಾಡಿದ್ದಾರೆ ಎಂಬುದನ್ನು ನೋಡಲು ಕಾತುರನಾಗಿದ್ದೇನೆ. ವಿಶ್ಯುವಲ್ಸ್​ ಅದ್ಭುತವಾಗಿದೆ. ಸುದೀಪ್​ ಹಾಗೂ ಅವರ ತಂಡಕ್ಕೆ ನನ್ನ ಶುಭಾಶಯ’ ಎಂದು ರಾಜಮೌಳಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ವಿಕ್ರಾಂತ್ ರೋಣ’ ಪ್ರೀ-ರಿಲೀಸ್​ನಲ್ಲಿ ಮಗಳಿಗಾಗಿ ಸುಮಧುರವಾಗಿ ಹಾಡು ಹಾಡಿದ ಸುದೀಪ್​; ಇಲ್ಲಿದೆ ವಿಡಿಯೋ

‘ವಿಕ್ರಾಂತ್ ರೋಣ’ ಸಿನಿಮಾ ವಿಶ್ವಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೆ, ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ರಾಜಮೌಳಿ ಅವರು ವಿಶ್ವಾದ್ಯಂತ ಖ್ಯಾತಿ ಹೊಂದಿದ್ದಾರೆ. ಅವರು ಒಂದು ಟ್ವೀಟ್​ನಿಂದ ‘ವಿಕ್ರಾಂತ್​ ರೋಣ’ ತಂಡಕ್ಕೆ ಹೊಸ ಬಲ ಸಿಕ್ಕಂತೆ ಆಗಿದೆ.

‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅನೂಪ್ ಭಂಡಾರಿ ಅವರು ನಿರ್ದೇಶನ ಮಾಡಿದ್ದಾರೆ. ನಿರೂಪ್​ ಭಂಡಾರಿ, ನೀತಾ ಅಶೋಕ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಜಾಕ್ ಮಂಜು ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮುಂಜಾನೆ 6 ಗಂಟೆಯಿಂದಲೇ ಶೋಗಳು ಪ್ರದರ್ಶನ ಕಾಣುತ್ತಿದೆ.

Published On - 10:00 pm, Wed, 27 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ