‘RRR​’ ಪ್ರಮೋಷನ್​ಗೆ ಇಷ್ಟೊಂದು ಖರ್ಚು? ಈ ಹಣದಲ್ಲಿ ಬಿಗ್​ ಬಜೆಟ್​ ಚಿತ್ರ ಮಾಡಬಹುದು

‘ಆರ್​ಆರ್​ಆರ್​’ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ. ಈ ಸಿನಿಮಾ ಬರೋಬ್ಬರಿ 400 ಕೋಟಿ ರೂಪಾಯಿ ವೆಚ್ಛದಲ್ಲಿ ಸಿದ್ಧವಾಗಿದೆ. ಈ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್ ಹಾಗೂ ಟೀಸರ್​ ಸಾಕ್ಷ್ಯ ನೀಡಿದೆ. ಪ್ರತಿ ದೃಶ್ಯಕ್ಕೂ ಹೆಚ್ಚು ಹಣ ಸುರಿಯಲಾಗಿದೆ.

‘RRR​’ ಪ್ರಮೋಷನ್​ಗೆ ಇಷ್ಟೊಂದು ಖರ್ಚು? ಈ ಹಣದಲ್ಲಿ ಬಿಗ್​ ಬಜೆಟ್​ ಚಿತ್ರ ಮಾಡಬಹುದು
ಆರ್​ಆರ್​ಆರ್​ ತಂಡ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 30, 2021 | 2:48 PM

ಸಿನಿಮಾ ಸಿದ್ಧಪಡಿಸಿದರೆ ಕೆಲಸ ಅಲ್ಲಿಗೆ ಮುಗಿಯುವುದಿಲ್ಲ. ಅದನ್ನು ಪ್ರೇಕ್ಷಕರಿಗೆ ತಲುಪಿಸುವ ಕೆಲಸವೂ ಮುಖ್ಯವೇ. ಹೀಗೊಂದು ಸಿನಿಮಾ ತೆರೆಗೆ ಬರುತ್ತಿದೆ ಎನ್ನುವ ವಿಚಾರ ಎಲ್ಲರ ಕಿವಿ ತಲುಪಬೇಕು. ಹಾಗಿದ್ದರೆ ಮಾತ್ರ ಸಿನಿಮಾ ನೋಡೋಕೆ ಪ್ರೇಕ್ಷಕರು ಚಿತ್ರ ಮಂದಿರಕ್ಕೆ ಬರುತ್ತಾರೆ. ಈ ಕಾರಣಕ್ಕೆ ದೊಡ್ಡ ನಿರ್ಮಾಪಕರು ಸಿನಿಮಾಗೆ ಮಾತ್ರವಲ್ಲ, ಪ್ರಮೋಷನ್​ಗೂ ಸಾಕಷ್ಟು ಖರ್ಚು ಮಾಡುತ್ತಾರೆ. ಈಗ ಟಾಲಿವುಡ್​ನಲ್ಲಿ ಸಿದ್ಧವಾಗಿರುವ ‘ಆರ್​ಆರ್​ಆರ್​’ ಚಿತ್ರದ ಪ್ರಚಾರಕ್ಕೂ ನಿರ್ಮಾಪಕರು ದೊಡ್ಡ ಮೊತ್ತದ ಹಣವನ್ನು ಖರ್ಚು ಮಾಡಿದ್ದಾರೆ. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ.

‘ಆರ್​ಆರ್​ಆರ್​’ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ. ಈ ಸಿನಿಮಾ ಬರೋಬ್ಬರಿ 400 ಕೋಟಿ ರೂಪಾಯಿ ವೆಚ್ಛದಲ್ಲಿ ಸಿದ್ಧವಾಗಿದೆ. ಈ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್ ಹಾಗೂ ಟೀಸರ್​ ಸಾಕ್ಷ್ಯ ನೀಡಿದೆ. ಪ್ರತಿ ದೃಶ್ಯಕ್ಕೂ ಹೆಚ್ಚು ಹಣ ಸುರಿಯಲಾಗಿದೆ. ಕೇವಲ ಭಾರತದ ಸೆಟ್​ಗಳಲ್ಲಿ ಮಾತ್ರವಲ್ಲದೆ, ವಿದೇಶದಲ್ಲೂ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಇನ್ನು, ಸ್ಟಾರ್​ ನಟರ ದಂಡೇ ಚಿತ್ರದಲ್ಲಿದೆ. ಜ್ಯೂ.ಎನ್​ಟಿಆರ್​, ರಾಮ್​ ಚರಣ್​, ಆಲಿಯಾ ಭಟ್​, ಅಜಯ್​ ದೇವಗನ್​ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರು ಕೂಡ ದೊಡ್ಡ ಮೊತ್ತದ ಸಂಭಾವನೆಯನ್ನು ಪಡೆದುಕೊಂಡಿದ್ದಾರೆ. ಈ ಎಲ್ಲಾ ಕಾರಣದಿಂದ ಸಿನಿಮಾದ ಬಜೆಟ್​ 400 ಕೋಟಿ ರೂಪಾಯಿ ಮೀರಿದೆ. ಈಗ ಚಿತ್ರದ ಪ್ರಚಾರಕ್ಕೂ ನಿರ್ಮಾಪಕ ಡಿ.ವಿ.ವಿ. ದಾನಯ್ಯ ಅವರು ದೊಡ್ಡ ಮೊತ್ತವನ್ನು ತೆಗೆದಿಟ್ಟಿದ್ದಾರೆ.

ಈಗಾಗಲೇ ‘ಆರ್​ಆರ್​ಆರ್​’ ತಂಡ ನಾನಾ ನಗರಗಳಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿದೆ. ಮುಂಬೈ ಹಾಗೂ ಚೆನ್ನೈನಲ್ಲಿ ದೊಡ್ಡ ಮಟ್ಟದಲ್ಲಿ ಪ್ರೀ-ರಿಲೀಸ್​ ಇವೆಂಟ್​ ನಡೆಸಿದೆ. ಆನ್​ಲೈನ್​ನಲ್ಲೂ ಚಿತ್ರಕ್ಕೆ ಪ್ರಚಾರ ನೀಡುವ ಕೆಲಸ ನಡೆಯುತ್ತಿದೆ. ಹೀಗಾಗಿ, ಈ ಸಿನಿಮಾ ಪ್ರಮೋಷನ್​ಗೆ ನಿರ್ಮಾಪಕರು 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ತೆಗೆದಿಟ್ಟಿದ್ದಾರೆ.

ಸಿನಿಮಾ ರಿಲೀಸ್​ಗೆ ಇನ್ನು ಒಂದು ವಾರ ಮಾತ್ರ ಬಾಕಿ ಇದೆ. ಹೀಗಾಗಿ, ಚಿತ್ರತಂಡ ಪ್ರಚಾರಕ್ಕೆ ಚುರುಕು ಮುಟ್ಟಿಸಿದೆ. ಕೊವಿಡ್ ಪ್ರಕರಣ ಹೆಚ್ಚುತ್ತಿರುವ ಮಧ್ಯೆಯೂ ಸಿನಿಮಾ ರಿಲೀಸ್ ಮಾಡುವ ನಿರ್ಧಾರದಲ್ಲಿ ಚಿತ್ರತಂಡ ಇದೆ. ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್​ ದಿನಾಂಕ ಮುಂದೂಡುವುದಿಲ್ಲ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇದನದಿಂದ ಇಕ್ಕಟ್ಟಿಗೆ ಸಿಲುಕಿದ ನಿರ್ದೇಶಕಿ; ಪರಿಹಾರ ಕೊಡೋದು ಯಾರು?

‘ಆರ್​ಆರ್​ಆರ್​’ ರಿಲೀಸ್​ ದಿನಾಂಕ ಮುಂದಕ್ಕೆ? ಚಿತ್ರತಂಡದಿಂದ ಬಂತು ಸ್ಪಷ್ಟನೆ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್