AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಣಾಸಿ’ ಚಿತ್ರವನ್ನು ಐಮ್ಯಾಕ್ಸ್ ತಂತ್ರಜ್ಞಾನದಲ್ಲಿ ಚಿತ್ರೀಕರಿಸುತ್ತಿರುವುದೇಕೆ? ಕಾರಣ ತಿಳಿಸಿದ ರಾಜಮೌಳಿ

ನಿರ್ದೇಶಕ ರಾಜಮೌಳಿ ತಮ್ಮ 'ವಾರಣಾಸಿ' ಚಿತ್ರವನ್ನು ಐಮ್ಯಾಕ್ಸ್ ತಂತ್ರಜ್ಞಾನದಲ್ಲಿ ಚಿತ್ರೀಕರಿಸುವ ಕಾರಣ ಬಿಚ್ಚಿಟ್ಟಿದ್ದಾರೆ. ಚಿತ್ರದಲ್ಲಿರುವ 300 ಅಡಿ ಎತ್ತರದ ಹಿಮಬಂಡೆಗಳು ಹಾಗೂ ಬೃಹತ್ ವಾನರ ಸೇನೆಯ ದೃಶ್ಯ ವೈಭವವನ್ನು ಪ್ರೇಕ್ಷಕರಿಗೆ ಸಂಪೂರ್ಣವಾಗಿ ತಲುಪಿಸಲು ಐಮ್ಯಾಕ್ಸ್ ಪರದೆಯನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಜಕ್ಕಣ್ಣ ಸ್ಪಷ್ಟಪಡಿಸಿದ್ದಾರೆ.

'ವಾರಣಾಸಿ' ಚಿತ್ರವನ್ನು ಐಮ್ಯಾಕ್ಸ್ ತಂತ್ರಜ್ಞಾನದಲ್ಲಿ ಚಿತ್ರೀಕರಿಸುತ್ತಿರುವುದೇಕೆ? ಕಾರಣ ತಿಳಿಸಿದ ರಾಜಮೌಳಿ
ರಾಜಮೌಳಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 03, 2026 | 11:18 AM

Share

ಮುಖ್ಯಾಂಶಗಳು

  • 'ವಾರಣಾಸಿ' ಚಿತ್ರಕ್ಕೆ ಐಮ್ಯಾಕ್ಸ್ ತಂತ್ರಜ್ಞಾನ ಬಳಸಿದ್ದರ ರಹಸ್ಯ ಬಿಚ್ಚಿಟ್ಟ ರಾಜಮೌಳಿ
  • ಚಿತ್ರದಲ್ಲಿರಲಿದೆ 300 ಅಡಿ ಎತ್ತರದ ಹಿಮಬಂಡೆ ಹಾಗೂ ರಾಮಾಯಣದ ವಾನರ ಸೇನೆ
  • 2027 ರ ಏಪ್ರಿಲ್‌ನಲ್ಲಿ ಮಹೇಶ್ ಬಾಬು ಸಿನಿಮಾ ರಿಲೀಸ್

ಖ್ಯಾತ ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಅವರ (SS Rajamouli) ‘ವಾರಣಾಸಿ’ ಸಿನಿಮಾ ಸದ್ಯ ಚಿತ್ರರಂಗದಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿದೆ. ಈ ಜಾಗತಿಕ ಸಾಹಸ ಪ್ರಧಾನ ಚಿತ್ರವನ್ನು ಐಮ್ಯಾಕ್ಸ್ ತಂತ್ರಜ್ಞಾನದಲ್ಲಿ ಚಿತ್ರೀಕರಿಸಲಾಗುತ್ತಿದೆ. ಈ ಪ್ರೀಮಿಯಂ ಲಾರ್ಜ್-ಫಾರ್ಮ್ಯಾಟ್ ಆಯ್ಕೆ ಮಾಡಿಕೊಂಡಿದ್ದರ ಹಿಂದಿನ ಅಸಲಿ ಕಾರಣವನ್ನು ರಾಜಮೌಳಿ ಅವರು ಮೊದಲ ಬಾರಿಗೆ ಬಹಿರಂಗಪಡಿಸಿದ್ದಾರೆ. ಚಿತ್ರದ ದೃಶ್ಯ ವೈಭವ ಪ್ರೇಕ್ಷಕರಿಗೆ ಹೊಸ ಅನುಭೂತಿ ನೀಡಲಿದೆ.

ಫ್ರೆಂಚ್ ನಿಯತಕಾಲಿಕೆಯೊಂದರ ಸಂದರ್ಶನದಲ್ಲಿ ರಾಜಮೌಳಿ ಈ ರಹಸ್ಯ ಬಿಚ್ಚಿಟ್ಟಿದ್ದಾರೆ. ‘ಈ ಚಿತ್ರದ ಕಥಾಹಂದರ ಮತ್ತು ಶೈಲಿ ಅತ್ಯಂತ ವಿಶಾಲವಾಗಿದೆ. ಇಂತಹ ಬೃಹತ್ ದೃಶ್ಯಗಳನ್ನು ಸಾಮಾನ್ಯ ಪರದೆಯ ಮೇಲೆ ತೋರಿಸಲು ಸಾಧ್ಯವಿಲ್ಲ. ಚಿತ್ರದಲ್ಲಿ 300 ಅಡಿ ಎತ್ತರದ ಅಂಟಾರ್ಟಿಕಾದ ಹಿಮದ ಬಂಡೆಗಳು ಇರಲಿವೆ. ಇದರೊಂದಿಗೆ ರಾಮಾಯಣದ ಬೃಹತ್ ವಾನರ ಸೇನೆಯ ದೃಶ್ಯಗಳು ಕೂಡ ಇರಲಿವೆ. ಐಮ್ಯಾಕ್ಸ್ ಪರದೆಯು ಈ ದೃಶ್ಯಗಳ ಭವ್ಯತೆಯನ್ನು ಸಂಪೂರ್ಣವಾಗಿ ಹಿಡಿದಿಡಬಲ್ಲದು. ಹಾಗಾಗಿ ಈ ತಂತ್ರಜ್ಞಾನವನ್ನು ಬಳಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಮೌಳಿ ಸಿನಿಮಾದಲ್ಲಿದ್ದರೂ ಬಿಡುವಿಲ್ಲದ ಪೃಥ್ವಿರಾಜ್; ಬ್ಯಾಕ್ ಟು ಬ್ಯಾಕ್ ಚಿತ್ರಗಳ ಮೂಲಕ ದಾಖಲೆ

ಚಿತ್ರದ ಕಥೆಯನ್ನು ರಾಜಮೌಳಿ ಸದ್ಯಕ್ಕೆ ರಹಸ್ಯವಾಗಿಟ್ಟಿದ್ದಾರೆ. ಆದರೆ ಅವರ ಮಾತುಗಳು ಚಿತ್ರದ ದೃಶ್ಯ ವೈಭವದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿವೆ. ಈಗಾಗಲೇ ಚಿತ್ರದ ಪ್ರಮುಖ ಸಾಹಸ ದೃಶ್ಯಗಳ ಚಿತ್ರೀಕರಣ ಮುಕ್ತಾಯಗೊಂಡಿದೆ. ಸಿನಿಮಾದ ಶೇಕಡಾ 80 ರಷ್ಟು ಶೂಟಿಂಗ್ ಪೂರ್ಣಗೊಂಡಿದೆ.

ಈ ಚಿತ್ರದಲ್ಲಿ ಮಹೇಶ್ ಬಾಬು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್ ಸುಕುಮಾರನ್ ಕೂಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಂಎಂ ಕೀರವಾಣಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರವು 2027ರ ಏಪ್ರಿಲ್ ಅಲ್ಲಿ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್