‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮುಖ್ಯ ಮಾಹಿತಿ ರಿವೀಲ್ ಮಾಡಿದ ರಾಜಮೌಳಿ ತಂದೆ

ಎಲ್ಲರೂ ‘ಆರ್​ಆರ್​ಆರ್ 2’ ನಿರೀಕ್ಷಿಸುತ್ತಿದ್ದಾರೆ. ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಅವರು ‘ಬಾಲಿವುಡ್ ಹಂಗಾಮ’ಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮುಖ್ಯ ಮಾಹಿತಿ ರಿವೀಲ್ ಮಾಡಿದ ರಾಜಮೌಳಿ ತಂದೆ
ರಾಜಮೌಳಿ, ವಿಜಯೇಂದ್ರ ಪ್ರಸಾದ್​
Follow us
ರಾಜೇಶ್ ದುಗ್ಗುಮನೆ
|

Updated on: Jul 27, 2023 | 6:30 AM

ಒಂದು ಸಿನಿಮಾ ಹಿಟ್ ಆದ ಬಳಿಕ ಅದಕ್ಕೆ ಸೀಕ್ವೆಲ್ ಸಿದ್ಧವಾಗೋದು ಸಾಮಾನ್ಯ. ಅದೇ ರೀತಿ ‘ಆರ್​ಆರ್​ಆರ್​’ ಸಿನಿಮಾಗೆ ಸೀಕ್ವೆಲ್ ರೆಡಿ ಆಗಲಿದೆ ಎಂದು ಹೇಳಲಾಗಿತ್ತು. ಈ ವಿಚಾರವಾಗಿ ರಾಜಮೌಳಿ (SS Rajamouli) ಅವರ ತಂದೆ ಹಾಗೂ ಕಥೆಗಾರ ವಿಜಯೇಂದ್ರ ಪ್ರಸಾದ್ ಅವರು ಈ ಮೊದಲು ಮಾತನಾಡಿದ್ದರು. ಈಗ ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇದರ ಜೊತೆಗೆ ಅವರು ಒಂದು ಬೇಸರದ ವಿಚಾರವನ್ನೂ ನೀಡಿದ್ದಾರೆ.

‘ಆರ್​ಆರ್​ಆರ್’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಆಸ್ಕರ್ ಅವಾರ್ಡ್ ಒಲಿಯಿತು. ಇಷ್ಟು ದೊಡ್ಡ ಮಟ್ಟದ ಸಾಧನೆ ಮಾಡುವುದು ಎಂದರೆ ಅದು ಸುಲಭದ ಮಾತಲ್ಲ. ಈ ಕಾರಣದಿಂದಲೇ ಎಲ್ಲರೂ ‘ಆರ್​ಆರ್​ಆರ್ 2’ ನಿರೀಕ್ಷಿಸುತ್ತಿದ್ದಾರೆ. ಈ ಬಗ್ಗೆ ವಿಜಯೇಂದ್ರ ಪ್ರಸಾದ್ ಅವರು ‘ಬಾಲಿವುಡ್ ಹಂಗಾಮ’ಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಆರ್​ಆರ್​ಆರ್​ ಸೀಕ್ವೆಲ್​ನ ರಾಜಮೌಳಿ ನಿರ್ದೇಶನ ಮಾಡುತ್ತಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಈ ಪ್ರಶ್ನೆಗೆ ಹೌದು, ಇಲ್ಲ ಎಂಬ ಎರಡೂ ಉತ್ತರ ನೀಡಬಹುದು. ಈ ಚಿತ್ರದ ಸೀಕ್ವೆಲ್ ಬಗ್ಗೆ ಅವರ ಬಳಿ ಮಾತನಾಡಿದ್ದೇನೆ. ಸಿನಿಮಾದ ಕಥೆ ಆಫ್ರಿಕಾದಲ್ಲಿ ಸಾಗುತ್ತದೆ’ ಎಂದಿದ್ದಾರೆ ವಿಜಯೇಂದ್ರ ಪ್ರಸಾದ್.

‘ಸದ್ಯ ಮಹೇಶ್ ಬಾಬು ಜೊತೆ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ. ಆ ಸಿನಿಮಾ ಮುಗಿಯುವವರೆಗೂ ಅವರು ಸೀಕ್ವೆಲ್ ಬಗ್ಗೆ ಆಲೋಚಿಸುವುದಿಲ್ಲ. ಒಂದೊಮ್ಮೆ ಅವರಿಗೆ ಕಥೆ ಇಷ್ಟವಾದರೆ ಜೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಕಾಲ್​ಶೀಟ್ ಸಿಗಬೇಕು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ

ವಿಜಯೇಂದ್ರ ಪ್ರಸಾದ್ ಅವರು ‘ಆರ್​ಆರ್​ಆರ್’ ಸೀಕ್ವೆಲ್ ಬಗ್ಗೆ ಮಾತನಾಡುತ್ತಿರುವ ಬಗ್ಗೆ ರಾಜಮೌಳಿಗೆ ಬೇಸರ ಇದೆ ಎಂದು ವರದಿ ಆಗಿತ್ತು. ಆದರೆ ಈ ಬಗ್ಗೆ ಅವರು ಅಧಿಕೃತವಾಗಿ ಮಾಹಿತಿ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್