ಟಾಲಿವುಡ್ ನಿರ್ದೇಶಕ ಎಸ್ಎಸ್ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಾರೆ ಎಂದರೆ ನಿರೀಕ್ಷೆ ಸಾಕಷ್ಟು ಹೆಚ್ಚಿರುತ್ತದೆ. ಅವರು ಸ್ಟಾರ್ ನಟ ಮಹೇಶ್ ಬಾಬು ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರದ ಪಾತ್ರವರ್ಗದ ಬಗ್ಗೆ ಈಗ ಅನೇಕ ವದಂತಿಗಳು ಹುಟ್ಟಿಕೊಂಡಿವೆ. ರಾಜಮೌಳಿ ಸಿನಿಮಾದಲ್ಲಿ ಹಲವು ಸ್ಟಾರ್ ಕಲಾವಿದರು ನಟಿಸೋದು ಹೊಸದೇನು ಅಲ್ಲ. ಈಗ ಅವರ ಚಿತ್ರದಲ್ಲಿ ಬೇರೆ ಬೇರೆ ಭಾಷೆಯ ಕಲಾವಿದರು ನಟಿಸಲಿದ್ದಾರೆ ಎಂದು ವರದಿ ಆಗಿದೆ.
ರಾಜಮೌಳಿ ಸಿನಿಮಾಗಳು ಬಿಗ್ ಬಜೆಟ್ನಲ್ಲಿ ಸಿದ್ಧವಾಗುತ್ತವೆ. ಮೋಹನ್ ಲಾಲ್, ಅಕ್ಕಿನೇನಿ ನಾಗಾರ್ಜುನ ಅವರು ಈ ಚಿತ್ರದ ಭಾಗವಾಗಲಿದ್ದಾರೆ ಎನ್ನಲಾಗುತ್ತಿದೆ. ಇಷ್ಟಕ್ಕೆ ನಿಂತಿಲ್ಲ, ಇಂಡೋನೇಷ್ಯಾದ ನಟಿ ಚೆಲ್ಸಿಯಾ ಎಲಿಜಬೆತ್ ಇಸ್ಲಾನ್ ಕೂಡ ಸಿನಿಮಾದ ಭಾಗವಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರು ರಾಜಮೌಳಿಯನ್ನು ಫಾಲೋ ಮಾಡೋಕೆ ಆರಂಭಿಸಿರುವುದೇ ಇದಕ್ಕೆ ಕಾರಣ.
ದೀಪಿಕಾ ಪಡುಕೋಣೆ ಅವರು ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದರಲ್ಲಿ ಹುರುಳಿಲ್ಲ ಎನ್ನಲಾಗಿದೆ. ದೀಪಿಕಾ ಪಡುಕೋಣೆ ಇತ್ತೀಚೆಗೆ ದಕ್ಷಿಣದತ್ತ ಮುಖ ಮಾಡಿದ್ದಾರೆ. ತೆಲುಗಿನ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಈಗ ಅವರು ಪ್ರೆಗ್ನೆನ್ಸಿ ಘೋಷಿಸಿದ್ದಾರೆ. ಈ ಚಿತ್ರಕ್ಕೆ ಅವರು ನಾಯಕಿ ಆಗಿ ನಟಿಸಬೇಕು ಎಂದರೆ ಇನ್ನೂ ಎರಡು ವರ್ಷ ಕಾಯಬೇಕಾಗುತ್ತದೆ. ಹೀಗಾಗಿ, ಈ ವದಂತಿ ನಿಜ ಎಂದು ನಂಬೋದು ಕಷ್ಟ.
ಇತ್ತೀಚೆಗೆ ಜಪಾನ್ನಲ್ಲಿ ಮಾತನಾಡಿರೋ ರಾಜಮೌಳಿ ಅವರು ಸಿನಿಮಾ ಪಾತ್ರವರ್ಗದ ಬಗ್ಗೆ ಮಾತನಾಡಿದ್ದರು. ‘ಸದ್ಯಕ್ಕೆ ಮಹೇಶ್ ಬಾಬು ಮಾತ್ರ ಫೈನಲ್ ಆಗಿದ್ದಾರೆ. ಉಳಿದ ಪಾತ್ರವರ್ಗದ ಆಯ್ಕೆ ಪ್ರಗತಿಯಲ್ಲಿದೆ’ ಎಂದು ಅವರು ಹೇಳಿಕೊಂಡಿದ್ದರು.
ಇದನ್ನೂ ಓದಿ: ಜಪಾನ್ನಲ್ಲಿ ಭೂಕಂಪಕ್ಕೆ ಬೆಚ್ಚಿದ ರಾಜಮೌಳಿ, ಕಾರ್ತಿಕೇಯ: ನಂತರ ಏನಾಯ್ತು?
ಈಗಾಗಲೇ ಮಹೇಶ್ ಬಾಬು ಅವರು ಸಂಗೀತ ಸಂಯೋಜಕ ಎಂಎಂ ಕೀರವಾಣಿ ಹೊರತುಪಡಿಸಿ ಉಳಿದ ತಾಂತ್ರಿಕರನ್ನು ಬದಲಾಯಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಕಾರಣ ತಿಳಿದಿಲ್ಲ. ಸಿನಿಮಾ ಅಧಿಕೃತವಾಗಿ ಘೋಷಣೆ ಆದ ಬಳಿಕವೇ ಎಲ್ಲದಕ್ಕೂ ಸ್ಪಷ್ಟ ಉತ್ತರ ಸಿಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ