‘ರಾಜಮೌಳಿ ಕೈಗೆ ಸಿಗುತ್ತಿಲ್ಲ, ಫೋನ್ ಕೂಡ ಸ್ವಿಚ್​ ಆಫ್​’; ಎಂಎಂ ಕೀರವಾಣಿ

ಮಹೇಶ್ ಬಾಬು ಹಾಗೂ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ರಾಜಮೌಳಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಕಾರಣಕ್ಕೆ ‘ನಾ ಸಾಮಿ ರಂಗ’ ಸುದ್ದಿಗೋಷ್ಠಿಯಲ್ಲಿ ಕೀರವಾಣಿಗೆ ಈ ಚಿತ್ರದ ಬಗ್ಗೆ ಪ್ರಶ್ನೆ ಮಾಡಲಾಗಿದೆ.

‘ರಾಜಮೌಳಿ ಕೈಗೆ ಸಿಗುತ್ತಿಲ್ಲ, ಫೋನ್ ಕೂಡ ಸ್ವಿಚ್​ ಆಫ್​’; ಎಂಎಂ ಕೀರವಾಣಿ
ರಾಜಮೌಳಿ-ಕೀರವಾಣಿ
Edited By:

Updated on: Jan 09, 2024 | 8:29 AM

ಸಂಗೀತ ನಿರ್ದೇಶಕ ಎಂಎಂ ಕೀರವಾಣಿ (MM Keeravani) ಅವರ ಖ್ಯಾತಿ ಹೆಚ್ಚಿದೆ. 2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡಿಗೆ ಆಸ್ಕರ್ ಗೆದ್ದು ಅವರು ದಾಖಲೆ ಬರೆದಿದ್ದಾರೆ. ಈ ಹಾಡು ಯೂಟ್ಯೂಬ್​ನಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಇದರಿಂದ ಕೀರವಾಣಿಗೆ ಬರುತ್ತಿರುವ ಆಫರ್​ ಸಂಖ್ಯೆ ಕೂಡ ಹೆಚ್ಚಿದೆ. ಅವರಿಗೆ ಎಷ್ಟೇ ಆಫರ್ ಬಂದರೂ ರಾಜಮೌಳಿ ನಿರ್ದೇಶನದ ಸಿನಿಮಾ ಕೆಲಸಕ್ಕಾಗಿ ಬಿಡುವು ಮಾಡಿಕೊಳ್ಳುತ್ತಾರೆ. ಈ ಮಧ್ಯೆ ಅವರ ಕೈಗೆ ರಾಜಮೌಳಿ ಸಿಗುತ್ತಿಲ್ಲವಂತೆ. ಫೋನ್ ಮಾಡಿದರೆ ಸ್ವಿಚ್ ಆಫ್ ಬರುತ್ತಿದೆಯಂತೆ! ಈ ಬಗ್ಗೆ ಕೀರವಾಣಿ ಅವರು ಇತ್ತೀಚೆಗೆ ಮಾತನಾಡಿದ್ದಾರೆ.

‘ನಾ ಸಾಮಿ ರಂಗ’ ಸಿನಿಮಾಗೆ ಎಂಎಂ ಕೀರವಾಣಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರ ಸಂಕ್ರಾಂತಿ ಪ್ರಯುಕ್ತ ಜನವರಿ 14ರಂದು ರಿಲೀಸ್ ಆಗಲಿದೆ. ಅಕ್ಕಿನೇನಿ ನಾಗಾರ್ಜುನ, ಕನ್ನಡದ ಆಶಿಕಾ ರಂಗನಾಥ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಕೀರವಾಣಿ ಕೂಡ ಪಾಲ್ಗೊಂಡಿದ್ದಾರೆ. ಈ ವೇಳೆ ಅವರಿಗೆ SSMB29 ಬಗ್ಗೆ ಪ್ರಶ್ನೆ ಮಾಡಲಾಗಿದೆ. ಈ ವೇಳೆ ಫನ್ನಿ ಆಗಿ ಉತ್ತರಿಸಿದ್ದಾರೆ ಕೀರವಾಣಿ.

ಮಹೇಶ್ ಬಾಬು ಹಾಗೂ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ, ‘SSMB29’ ಎಂದು ಹೆಸರು ಇಡಲಾಗಿದೆ. ಈ ಚಿತ್ರದ ಬಗ್ಗೆ ರಾಜಮೌಳಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಈ ಕಾರಣಕ್ಕೆ ‘ನಾ ಸಾಮಿ ರಂಗ’ ಸುದ್ದಿಗೋಷ್ಠಿಯಲ್ಲಿ ಕೀರವಾಣಿಗೆ ಈ ಚಿತ್ರದ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನಾನು ಉತ್ತರಿಸಲ್ಲ’ ಎಂದು ನೇರವಾಗಿ ಹೇಳಿ ಬೇಸರ ಮಾಡುವ ಬದಲು ಕೀರವಾಣಿ ನಗೆಚಟಾಕಿ ಹಾರಿಸಿದ್ದಾರೆ.

‘ನಾನು ಆ ಚಿತ್ರದ ಕೆಲಸ ಆರಂಭಿಸಿಲ್ಲ. ನಾನು ಈ ಸಿನಿಮಾ ಬಗ್ಗೆ ಕೇಳಲು ರಾಜಮೌಳಿಗೆ ಕರೆ ಮಾಡಿದೆ. ಆದರೆ, ಅವರ ಫೋನ್ ಸ್ವಿಚ್​ ಆಫ್ ಆಗಿತ್ತು’ ಎಂದು ಕೀರವಾಣಿ ಹೇಳಿದ್ದಾರೆ. ಇದನ್ನು ಕೇಳಿ ಅಲ್ಲಿದ್ದವರು ನಕ್ಕಿದ್ದಾರೆ.

ಇದನ್ನೂ ಓದಿ: ರಾಜಮೌಳಿ-ಮಹೇಶ್ ಬಾಬು ಸಿನಿಮಾದ ನಾಯಕಿ ಈ ವಿದೇಶಿ ನಟಿಯ ಹಿನ್ನೆಲೆ ಏನು?

ರಾಜಮೌಳಿ ನಿರ್ದೇಶನದ ಸಿನಿಮಾಗಳಿಗೆ ಕೀರವಾಣಿ ಅವರೇ ಸಂಗೀತ ಸಂಯೋಜನೆ ಮಾಡುತ್ತಾ ಬಂದಿದ್ದಾರೆ. ಇವರ ಕೆಮಿಸ್ಟ್ರಿ ಕೆಲಸ ಮಾಡಿದೆ. ಮಹೇಶ್ ಬಾಬು ಸದ್ಯ ‘ಗುಂಟೂರು ಖಾರಂ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಜನವರಿ 12ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದ ಟ್ರೇಲರ್ ಜನರಿಗೆ ಇಷ್ಟ ಆಗಿದೆ. ಈ ಚಿತ್ರ ರಿಲೀಸ್ ಆದ ಬಳಿಕ ‘SSMB29’ ಕೆಲಸ ಆರಂಭ ಆಗಲಿದೆ. ಈ ಸಿನಿಮಾ 2025ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಚಿತ್ರಕ್ಕಾಗಿ ಮಹೇಶ್ ಬಾಬು ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Loading...
Unable to load recommendations.
Follow Us