AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಹುಟ್ಟುಹಬ್ಬ: ‘ವಾರಣಾಸಿ’ಯ ‘ರುದ್ರ’ನ ಲುಕ್ ರಿಲೀಸ್

Mahesh Babu Birthday: ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಸಿನಿಮಾದ ಅಪ್​​ಡೇಟ್​​ಗಳಿಗಾಗಿ ಸಿನಿಮಾ ಪ್ರೇಮಿಗಳು ಕಾಯುತ್ತಿದ್ದಾರೆ. ಇಂದು (ಆಗಸ್ಟ್ 09) ನಟ ಮಹೇಶ್ ಬಾಬು ಹುಟ್ಟುಹಬ್ಬ. ಈ ದಿನ ರಾಜಮೌಳಿ ಅವರು ಮಹೇಶ್ ಬಾಬು ಅವರ ಪಾತ್ರ ‘ರುದ್ರ’ನ ಲುಕ್ ಅನ್ನು ಅನಾವರಣ ಮಾಡಿದ್ದಾರೆ. ಆದರೆ ಮಹೇಶ್ ಬಾಬು ಅಭಿಮಾನಿಗಳಿಗೆ ತೃಪ್ತಿ ಇಲ್ಲ.

ಮಹೇಶ್ ಬಾಬು ಹುಟ್ಟುಹಬ್ಬ: ‘ವಾರಣಾಸಿ’ಯ ‘ರುದ್ರ’ನ ಲುಕ್ ರಿಲೀಸ್
Varanasi Movie
ಮಂಜುನಾಥ ಸಿ.
|

Updated on:Aug 09, 2026 | 2:43 PM

Share

ರಾಜಮೌಳಿ (Rajamouli) ನಿರ್ದೇಶನದ ‘ವಾರಣಾಸಿ’, ವಿಶ್ವದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್ ಸುಕುಮಾರನ್ ನಿರ್ದೇಶನ ಮಾಡಿರುವ ಈ ಸಿನಿಮಾ ಭಾರಿ ನಿರೀಕ್ಷೆಗಳನ್ನು ಮೂಡಿಸಿರುವ ಸಿನಿಮಾ. ಈ ಸಿನಿಮಾದ ಅಪ್​​ಡೇಟ್​​ಗಳಿಗಾಗಿ ಸಿನಿಮಾ ಪ್ರೇಮಿಗಳು ಕಾಯುತ್ತಿದ್ದಾರೆ. ಇಂದು (ಆಗಸ್ಟ್ 09) ನಟ ಮಹೇಶ್ ಬಾಬು ಹುಟ್ಟುಹಬ್ಬ. ಈ ದಿನ ರಾಜಮೌಳಿ ಅವರು ಮಹೇಶ್ ಬಾಬು ಅವರ ಪಾತ್ರ ‘ರುದ್ರ’ನ ಲುಕ್ ಅನ್ನು ಅನಾವರಣ ಮಾಡಿದ್ದಾರೆ.

ಮಹೇಶ್ ಬಾಬು ಅವರ ಹುಟ್ಟುಹಬ್ಬದ ವಿಶೇಷವಾಗಿ, ಎಸ್​​ಎಸ್ ರಾಜಮೌಳಿ ಅವರು ‘ವಾರಣಾಸಿ’ಯ ‘ರುದ್ರ’ ಪಾತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಅಧಿಕೃತ ಇನ್‌ಸ್ಟಾಗ್ರಾಮ್ ಪುಟದಲ್ಲಿ, “ಸೂರ್ಯನ ಸುತ್ತ ಮತ್ತೊಂದು ಸುತ್ತು… ಸಮಯದಾದ್ಯಂತ ನಾವು ಪ್ರಯಾಣಿಸುವ ಮುನ್ನ. ಹುಟ್ಟುಹಬ್ಬದ ಶುಭಾಶಯಗಳು ರುದ್ರ” ಎಂಬ ಶೀರ್ಷಿಕೆಯೊಂದಿಗೆ ಮಹೇಶ್ ಬಾಬು ಅವರ ಎರಡು ಫೋಟೊಗಳನ್ನು ಹಂಚಿಕೊಳ್ಳಲಾಗಿದೆ. ಎರಡೂ ಫೋಟೊಗಳಲ್ಲಿ ಮಹೇಶ್ ಬಾಬು ಅದ್ಭುತವಾಗಿ ಕಾಣುತ್ತಿದ್ದಾರೆ.

ಬಿಡುಗಡೆಯಾದ ಚಿತ್ರಗಳಲ್ಲಿ ಮಹೇಶ್ ಬಾಬು ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಆಫ್ರಿಕಾದ ಕಾಡಿನ ಹಿನ್ನೆಲೆಯಲ್ಲಿ ಬಿದಿರಿನ ರಾಫ್ಟ್ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಒಂದು ಫೋಟೊ ಹಾಗೂ. ಮತ್ತೊಂದು ಫೋಟೊನಲ್ಲಿ ಫೈಟ್​​ಗೆ ರೆಡಿಯಾಗುತ್ತಿರುವ ಲುಕ್ ಕೊಡುತ್ತಾ ಸುಂದರವಾಗಿ ಕಾಣುತ್ತಿದ್ದಾರೆ. ಸಿನಿಮಾ ಅಭಿಮಾನಿಗಳಿಗೆ, ಮಹೇಶ್ ಬಾಬು ಅಭಿಮಾನಿಗಳಿಗೆ ರಾಜಮೌಳಿ ಅವರಿಂದ ಹೆಚ್ಚಿನ ನಿರೀಕ್ಷೆ ಇತ್ತು. ಆದರೆ ಎರಡು ಫೋಟೊ ಮಾತ್ರವನ್ನೇ ರಾಜಮೌಳಿ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ:ರಾಜಮೌಳಿ ಸಿನಿಮಾದಲ್ಲಿದ್ದರೂ ಬಿಡುವಿಲ್ಲದ ಪೃಥ್ವಿರಾಜ್; ಬ್ಯಾಕ್ ಟು ಬ್ಯಾಕ್ ಚಿತ್ರಗಳ ಮೂಲಕ ದಾಖಲೆ

ಈ ಹಿಂದೆ ‘ರುದ್ರ’ ಮಾತ್ರದ ಬಗ್ಗೆ ಮಾತನಾಡಿದ್ದ ರಾಜಮೌಳಿ, ‘ರುದ್ರ ತನ್ನನ್ನು ಮೀರಿದ ದೊಡ್ಡ ಉದ್ದೇಶವನ್ನು ಪೂರೈಸಲು ಹುಟ್ಟಿದವನು. ಭವಿಷ್ಯವನ್ನು ಬದಲಾಯಿಸುವುದು ಅವನ ಗುರಿ. ಅವನು ಚತುರ ಮತ್ತು ಬಲಶಾಲಿ ಜೊತೆಗೆ ದುರ್ಬಲ ಸಹ. ಮಹೇಶ್ ಈ ಪಾತ್ರಕ್ಕೆ ಬೇಕಾದ ಎಲ್ಲಾ ಗುಣಗಳನ್ನು ತಂದಿದ್ದಾರೆ. ಯಾರಾದರೂ ಉಗ್ರವಾಗಿ ನಟಿಸಬಹುದು, ಆದರೆ ಉಗ್ರತೆಯ ಜೊತೆಗೆ ದುರ್ಬಲ ಎರಡನ್ನೂ ಏಕಕಾಲದಲ್ಲಿ ತೋರಿಸಬಲ್ಲವರು ಬಹಳ ಕಡಿಮೆ, ಅದನ್ನು ಮಹೇಶ್ ಮಾಡಿದ್ದಾರೆ’ ಎಂದಿದ್ದರು.

‘ವಾರಣಾಸಿ’ ಸಿನಿಮಾವು ಆಕ್ಷನ್ ಅಡ್ವೇಂಚರ್ ಕತೆಯನ್ನು ಒಳಗೊಂಡಿದೆ. ಸಿನಿಮಾನಲ್ಲಿ ಮಹೇಶ್ ಬಾಬು ರುದ್ರನ ಪಾತ್ರದಲ್ಲಿ, ಪ್ರಿಯಾಂಕಾ ಚೋಪ್ರಾ ಮಂದಾಕಿನಿ ಪಾತ್ರದಲ್ಲಿ, ಪೃಥ್ವಿರಾಜ್ ಸುಕುಮಾರ್ ಕುಂಭನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾಕ್ಕೆ ಕೀರವಾಣಿ ಸಂಗೀತ ನೀಡಿದ್ದಾರೆ. ಸಿನಿಮಾ ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Sun, 9 August 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ