AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ರಾಜಮೌಳಿ ನಟನೆ? ಹಿರಿದಾಗುತ್ತಿದೆ ಪ್ರಭಾಸ್​ ಸಿನಿಮಾದ ಪಾತ್ರವರ್ಗ

ಅದ್ದೂರಿ ಬಜೆಟ್​ನಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಸಿದ್ಧವಾಗುತ್ತಿದೆ. ಪಾತ್ರವರ್ಗದ ಕಾರಣದಿಂದ ಈ ಸಿನಿಮಾ ಹೈಪ್​ ಪಡೆದುಕೊಂಡಿದೆ. ಪ್ರಭಾಸ್​ ಜೊತೆ ದೀಪಿಕಾ ಪಡುಕೋಣೆ, ಅಮಿತಾಭ್​ ಬಚ್ಚನ್​, ಕಮಲ್​ ಹಾಸನ್​, ದಿಶಾ ಪಟಾಣಿ ಮುಂತಾದ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ಈಗ ಎಸ್​ಎಸ್​ ರಾಜಮೌಳಿ ಅವರ ಹೆಸರು ಕೇಳಿಬಂದಿದೆ.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ರಾಜಮೌಳಿ ನಟನೆ? ಹಿರಿದಾಗುತ್ತಿದೆ ಪ್ರಭಾಸ್​ ಸಿನಿಮಾದ ಪಾತ್ರವರ್ಗ
ರಾಜಮೌಳಿ, ಪ್ರಭಾಸ್​
ಮದನ್​ ಕುಮಾರ್​
|

Updated on: Aug 30, 2023 | 5:58 PM

Share

ನಟ ಪ್ರಭಾಸ್​ (Prabhas) ಅವರು ಈಗ ‘ಸಲಾರ್​’ ಮತ್ತು ‘ಕಲ್ಕಿ 2898 ಎಡಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಸಲಾರ್’ ಸಿನಿಮಾಗೆ ಕೊನೇ ಹಂತದ ಕೆಲಸಗಳು ನಡೆಯುತ್ತಿದೆ. ಈ ಚಿತ್ರ ಸೆಪ್ಟೆಂಬರ್​ 28ರಂದು ಬಿಡುಗಡೆ ಆಗಲಿದೆ. ಅದೇ ರೀತಿ, ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಕೂಡ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಅದಕ್ಕೆ ಕಾರಣ ಹಲವು. ಈ ಸಿನಿಮಾದಲ್ಲಿ ಪ್ರಭಾಸ್​ ಮಾತ್ರವಲ್ಲದೇ ಅನೇಕ ಸ್ಟಾರ್​ ಕಲಾವಿದರು ನಟಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾ ತಂಡಕ್ಕೆ ಕಮಲ್​ ಹಾಸನ್​ ಅವರು ಎಂಟ್ರಿ ನೀಡಿದ್ದರು. ಈಗ ಮತ್ತೊಂದು ಅಚ್ಚರಿಯ ವಿಚಾರ ಹರಿದಾಡುತ್ತಿದೆ. ಖ್ಯಾತ ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಕೂಡ ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸುದ್ದಿಯ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಸೈನ್ಸ್​ ಫಿಕ್ಷನ್​ ಪ್ರಕಾರದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರದ ಪ್ರಚಾರಕ್ಕೆ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಪಾತ್ರವರ್ಗದ ಕಾರಣದಿಂದ ಈ ಸಿನಿಮಾ ಹೈಪ್​ ಪಡೆದುಕೊಂಡಿದೆ. ಪ್ರಭಾಸ್​ ಜೊತೆ ದೀಪಿಕಾ ಪಡುಕೋಣೆ, ಅಮಿತಾಭ್​ ಬಚ್ಚನ್​, ಕಮಲ್​ ಹಾಸನ್​ ಮುಂತಾದ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ಈಗ ರಾಜಮೌಳಿ ಹೆಸರು ಕೇಳಿಬಂದಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಅಂದಹಾಗೆ, ಈ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಚಿತ್ರತಂಡದಿಂದಲೇ ಲೀಕ್​ ಆಯ್ತು ‘ಕಲ್ಕಿ 2898 ಎಡಿ’ ಚಿತ್ರದ ವಿಡಿಯೋ; ಕಾರಣ ಏನು?

ನಿರ್ದೇಶನದಲ್ಲಿ ರಾಜಮೌಳಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ನಟನೆಯಲ್ಲೂ ಅವರಿಗೆ ಆಸಕ್ತಿ ಇದೆ. ‘ಬಾಹುಬಲಿ 1’, ‘ಸೈ’ ಮುಂತಾದ ಸಿನಿಮಾಗಳಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಅದೇ ರೀತಿ ‘ಕಲ್ಕಿ 2898 ಎಡಿ’ ಸಿನಿಮಾದಲ್ಲೂ ಅವರೊಂದು ಚಿಕ್ಕ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಎಂಬ ಗಾಸಿಪ್​ ಹರಿದಾಡುತ್ತಿದೆ. ಒಂದು ವೇಳೆ ಇದು ನಿಜವೇ ಹೌದಾದರೆ ಈ ಸಿನಿಮಾ ಮೇಲೆ ಅಭಿಮಾನಿಗಳು ಇಟ್ಟುಕೊಂಡಿರುವ ನಿರೀಕ್ಷೆ ಇನ್ನಷ್ಟು ಹೆಚ್ಚಾಗಲಿದೆ. ಈಗಾಗಲೇ ಈ ಚಿತ್ರದ ಗ್ಲಿಂಪ್ಸ್​ ವಿಡಿಯೋ ಬಿಡುಗಡೆಯಾಗಿ ಧೂಳೆಬ್ಬಿಸಿದೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ನಟಿಸಲು ರೆಡಿ ಆದ ಮತ್ತೋರ್ವ ಸ್ಟಾರ್ ಹೀರೋ?

ದಿನದಿಂದ ದಿನಕ್ಕೆ ‘ಕಲ್ಕಿ 2898 ಎಡಿ’ ಸಿನಿಮಾದ ಪಾತ್ರವರ್ಗ ಹಿರಿದಾಗುತ್ತಿದೆ. ಇತ್ತೀಚೆಗೆ ಮಲಯಾಳಂ ನಟ ದುಲ್ಕರ್​ ಸಲ್ಮಾನ್​ ಅವರು ಒಂದು ಸುಳಿವು ನೀಡಿದ್ದರು. ‘ಕಿಂಗ್​ ಆಫ್​ ಕೋತ್ತ’ ಸಿನಿಮಾದ ಪ್ರಚಾರದ ವೇಳೆ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ‘ಕಲ್ಕಿ 2898 ಎಡಿ’ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ಬಿಟ್ಟುಕೊಟ್ಟಿದ್ದರು. ಹಾಗಾಗಿ ಅವರು ಕೂಡ ಈ ಸಿನಿಮಾದಲ್ಲಿ ನಟಿಸುತ್ತಿರಬಹುದು ಎಂದು ಜನರು ಊಹಿಸಿದ್ದಾರೆ. ಒಟ್ಟಿನಲ್ಲಿ ಈ ಸಿನಿಮಾ ಬಹುತಾರಾಗಣದ ಕಾರಣದಿಂದ ಹೈಪ್​ ಪಡೆದುಕೊಳ್ಳುತ್ತಿದೆ. ನಾಗ್​ ಅಶ್ವಿನ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ