AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾದ ಬಗ್ಗೆ ಸುಳಿವು ಬಿಟ್ಟುಕೊಟ್ಟ ರಾಜಮೌಳಿ, ‘ಆರ್​ಆರ್​ಆರ್​’ ಗಿಂತಲೂ ಹೆಚ್ಚು…

‘ಆರ್​ಆರ್​ಆರ್’ ಸಿನಿಮಾದ ಬಳಿಕ ಎಸ್​ಎಸ್ ರಾಜಮೌಳಿ ಪ್ಯಾನ್ ವರ್ಲ್ಡ್ ನಿರ್ದೇಶಕ ಆಗಿದ್ದಾರೆ. ಮಹೇಶ್ ಬಾಬು ನಟನೆಯ ಸಿನಿಮಾವನ್ನು ಅವರು ನಿರ್ದೇಶನ ಮಾಡಲಿದ್ದಾರೆ. ಆದರೆ ಎರಡು ವರ್ಷ ಕಳೆದರೂ ಸಿನಿಮಾದ ಮುಹೂರ್ತ ಸಹ ಆಗಿಲ್ಲ. ಇದೀಗ ರಾಜಮೌಳಿ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ಹೊಸ ಸಿನಿಮಾದ ಬಗ್ಗೆ ಸುಳಿವು ಬಿಟ್ಟುಕೊಟ್ಟ ರಾಜಮೌಳಿ, ‘ಆರ್​ಆರ್​ಆರ್​’ ಗಿಂತಲೂ ಹೆಚ್ಚು...
ಮಂಜುನಾಥ ಸಿ.
|

Updated on: Oct 22, 2024 | 11:01 AM

Share

‘ಆರ್​ಆರ್​ಆರ್’ ಸಿನಿಮಾ ಬಳಿಕ ರಾಜಮೌಳಿ ಪ್ಯಾನ್ ವರ್ಲ್ಡ್ ನಿರ್ದೇಶಕರಾಗಿದ್ದಾರೆ. ವಿಶ್ವ ಚಿತ್ರರಂಗದ ಖ್ಯಾತ ನಿರ್ದೇಶಕರು ಎನ್ನಲಾಗುವ ಜೇಮ್ಸ್ ಕ್ಯಾಮರನ್, ಸ್ಟಿಫನ್ ಸ್ಪೀಲ್​ಬರ್ಗ್​ ಅಂಥಹವರೇ ರಾಜಮೌಳಿಯ ಪ್ರತಿಭೆಯನ್ನು ಕೊಂಡಾಡಿರುವುದು ಮಾತ್ರವೇ ಅಲ್ಲದೆ, ಹಾಲಿವುಡ್​ಗೆ ಬಂದು ಸಿನಿಮಾ ಮಾಡಿ, ನಾವು ಬೆಂಬಲ ನೀಡುತ್ತೇವೆ ಎಂದು ನೇರವಾಗಿ ಹೇಳಿದ್ದಾರೆ. ಆದರೆ ರಾಜಮೌಳಿ, ತಾವು ತಮ್ಮ ಭಾಷೆಯಲ್ಲಿಯೇ ಸಿನಿಮಾ ಮಾಡುವುದಾಗಿ ಹೇಳಿ ಅವರ ಆಹ್ವಾನವನ್ನು ನಯವಾಗಿ ನಿರಾಕರಿಸಿದ್ದಾರೆ. ‘ಆರ್​ಆರ್​ಆರ್’ ಸಿನಿಮಾ ಬಿಡುಗಡೆ ಆಗುವ ಮುಂಚೆಯೇ ರಾಜಮೌಳಿ, ಮಹೇಶ್ ಬಾಬು ಜೊತೆ ಸಿನಿಮಾ ಘೋಷಿಸಿದ್ದರು. ‘ಆರ್​ಆರ್​ಆರ್​’ ಸಿನಿಮಾಕ್ಕೆ ಸಿಕ್ಕ ಅಭೂತಪೂರ್ವ ಗೆಲುವಿನ ಕಾರಣದಿಂದಾಗಿ ಮಹೇಶ್ ಬಾಬು-ರಾಜಮೌಳಿ ಸಿನಿಮಾದ ಸ್ಕೇಲ್ ದೊಡ್ಡದಾಗಿದೆ. ಸಿನಿಮಾದ ಬಗ್ಗೆ ಇದೀಗ ರಾಜಮೌಳಿ ಮಾತನಾಡಿದ್ದಾರೆ.

ಮುಂಚಿನ ಯೋಜನೆಯಂತೆ ಎಲ್ಲ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ರಾಜಮೌಳಿ-ಮಹೇಶ್ ಬಾಬು ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ‘ಆರ್​ಆರ್​ಆರ್’ ಸಿನಿಮಾಕ್ಕೆ ಸಿಕ್ಕ ಅಭೂತಪೂರ್ವ ಯಶಸ್ಸಿನಿಂದಾಗಿ ಈಗ ತಮ್ಮ ಮುಂದಿನ ಸಿನಿಮಾವನ್ನು ಹಾಲಿವುಡ್​ ಸ್ಟಾಂಡರ್ಸ್​ಗೆ ತಕ್ಕಂತೆ ನಿರ್ಮಿಸಲು ರಾಜಮೌಳಿ ನಿರ್ಧರಿಸಿದ್ದಾರೆ. ಹಾಗಾಗಿ ಸಿನಿಮಾದ ಪೋಸ್ಟ್ ಪ್ರೊಡಕ್ಷನ್​ಗೆ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಸಿನಿಮಾದ ಮುಹೂರ್ತ ಸಹ ಇನ್ನೂ ಆಗಿಲ್ಲ. ಸಿನಿಮಾದ ಅಪ್​ಡೇಟ್​ ಸಹ ಬಿಟ್ಟುಕೊಟ್ಟಿಲ್ಲ. ಆದರೆ ಇದೀಗ ರಾಜಮೌಳಿ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ಅಂತರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಜಮೌಳಿ, ‘ನನಗೆ ಪ್ರಾಣಿಗಳೆಂದರೆ ಬಹಳ ಇಷ್ಟ. ನನ್ನ ಈ ಹಿಂದಿನ ಸಿನಿಮಾಗಳಲ್ಲಿಯೂ ಪ್ರಾಣಿಗಳನ್ನು ಬಳಸಿಕೊಂಡಿದ್ದೇನೆ. ‘ಆರ್​ಆರ್​ಆರ್’ ಸಿನಿಮಾದಲ್ಲಿ ಹೆಚ್ಚು ಪ್ರಾಣಿಗಳನ್ನು ಬಳಸಿದ್ದೆ. ಆದರೆ ನನ್ನ ಈ ಹಿಂದಿನ ‘ಆರ್​ಆರ್​ಆರ್’ ಸಿನಿಮಾಕ್ಕಿಂತಲೂ ಹೆಚ್ಚಿನ ಪ್ರಾಣಿಗಳನ್ನು ನನ್ನ ಮುಂದಿನ ಸಿನಿಮಾದಲ್ಲಿ ಬಳಸಲಿದ್ದೇನೆ’ ಎಂದಿದ್ದಾರೆ. ಆ ಮೂಲಕ ರಾಜಮೌಳಿಯ ಮುಂದಿನ ಸಿನಿಮಾ ಅರಣ್ಯ, ಪ್ರಾಣಿಗಳ ಕತೆಯನ್ನು ಒಳಗೊಂಡಿರಲಿದೆ ಎಂಬುದನ್ನು ಖಾತ್ರಿ ಪಡಿಸಿದ್ದಾರೆ.

ಇದನ್ನೂ ಓದಿ:ಎಸ್​ಎಸ್​ ರಾಜಮೌಳಿ ಜನ್ಮದಿನ; ಅವರ ನೆಟ್​ವರ್ತ್​ ಎಷ್ಟು ಕೋಟಿ ರೂಪಾಯಿ?

ರಾಜಮೌಳಿ, ತಮ್ಮ ಮುಂದಿನ ಸಿನಿಮಾ ಯಾವ ರೀತಿಯಾಗಿ ಇರಲಿದೆ ಎಂಬ ಬಗ್ಗೆ ವರ್ಷದ ಹಿಂದೆಯೇ ಸುಳಿವು ನೀಡಿದ್ದರು. ಹಾಲಿವುಡ್​ನ ಇಂಡಿಯಾನಾ ಜೋನ್ಸ್ ರೀತಿಯಲ್ಲಿ ಟ್ರಾವೆಲ್ ಅಡ್ವೇಂಚರ್ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆಯಂತೆ. ನಾಯಕ, ಒಂದು ನಿಗದಿತ ಮಿಷನ್​ಗಾಗಿ ಬೇರೆ ಬೇರೆ ದೇಶಗಳನ್ನು ಸುತ್ತುವ, ಅರಣ್ಯದಲ್ಲಿ ಸಾಹಸಗಳನ್ನು ಮಾಡುವ ಹಲವು ದೃಶ್ಯಗಳು ಈ ಸಿನಿಮಾದಲ್ಲಿ ಇರಲಿದೆಯಂತೆ. ಈ ಸಿನಿಮಾವನ್ನು ಅಮೆಜಾನ್ ಕಾಡುಗಳು ಸೇರಿದಂತೆ ಹಲವು ಬೇರೆ ಬೇರೆ ದೇಶಗಳಲ್ಲಿ ಚಿತ್ರೀಕರಣ ಮಾಡಲಿದ್ದಾರೆ ಎಸ್​ಎಸ್ ರಾಜಮೌಳಿ.

ಸಿನಿಮಾದಲ್ಲಿ ಮಹೇಶ್ ಬಾಬು ನಾಯಕ ಪಾತ್ರದಲ್ಲಿ ನಟಿಸುತ್ತಿದ್ದು, ವಿದೇಶಿ ನಟಿಯೊಬ್ಬರು ನಾಯಕಿಯಾಗಿ ನಟಿಸಲಿದ್ದಾರೆ. ಹಾಲಿವುಡ್​ನ ಖ್ಯಾತ ನಟ ಕ್ರಿಸ್ ಹ್ಯಾಮ್ಸ್​ವರ್ತ್​ ಸಹ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಕ್ರಿಸ್ ಹ್ಯಾಮ್ಸ್​ವರ್ತ್​, ಹಾಲಿವುಡ್​ನ ಅವೇಂಜರ್ಸ್, ‘ಥಾರ್’, ‘ಎಕ್ಸ್ಟ್ರಾಕ್ಷನ್’ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಲಿವುಡ್​ನ ಹ್ಯಾಂಡ್ಸನ್ ನಟರಲ್ಲಿ ಒಬ್ಬರು. ಸಿನಿಮಾಕ್ಕೆ ಕೀರವಾಣಿ ಬದಲಿಗೆ ವಿದೇಶಿ ಸಂಗೀತ ನಿರ್ದೇಶಕರೊಬ್ಬರು ಸಂಗೀತ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ