AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ಪ್ರಭಾಸ್​ಗಾಗಿ ‘ಸಲಾರ್’ ಪ್ರಮೋಷನ್​ಗೆ ಬರಲಿದ್ದಾರೆ ನಿರ್ದೇಶಕ ರಾಜಮೌಳಿ

‘ಸಲಾರ್’ ಮೂಲಕ ಗೆಲುವು ಪಡೆಯಲೇಬೇಕು ಎನ್ನುವ ಹಠಕ್ಕೆ ಪ್ರಭಾಸ್ ಬಿದ್ದಿದ್ದಾರೆ. ಇದಕ್ಕೆ ರಾಜಮೌಳಿ ಕೂಡ ಸಾಥ್ ನೀಡುತ್ತಿದ್ದಾರೆ. ಗೆಳೆಯನ ಸಿನಿಮಾ ಪ್ರಚಾರ ಮಾಡಲು ರಾಜಮೌಳಿ ಸಹಾಯ ಮಾಡುತ್ತಿದ್ದಾರೆ.

Prabhas: ಪ್ರಭಾಸ್​ಗಾಗಿ ‘ಸಲಾರ್’ ಪ್ರಮೋಷನ್​ಗೆ ಬರಲಿದ್ದಾರೆ ನಿರ್ದೇಶಕ ರಾಜಮೌಳಿ
ರಾಜಮೌಳಿ-ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on:Dec 14, 2023 | 8:22 AM

Share

ನಿರ್ದೇಶಕ ರಾಜಮೌಳಿ ಹಾಗೂ ಪ್ರಭಾಸ್ (Prabhas) ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇಬ್ಬರೂ ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಪ್ರಭಾಸ್​ಗೆ ‘ಬಾಹುಬಲಿ’ ಸರಣಿ ಮೂಲಕ ದೊಡ್ಡ ಗೆಲುವು ತಂದುಕೊಟ್ಟಿದ್ದು ಇದೇ ರಾಜಮೌಳಿ. ಹೀಗಾಗಿ ಅವರ ಮೇಲೆ ಪ್ರಭಾಸ್​ಗೆ ವಿಶೇಷ ಗೌರವ. ರಾಜಮೌಳಿ ಅವರು ಪ್ರಭಾಸ್​ನ ಆಪ್ತ ಎಂದೇ ಪರಿಗಣಿಸಿದ್ದಾರೆ. ಈಗ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಪ್ರಚಾರದಲ್ಲಿ ರಾಜಮೌಳಿ ಕೂಡ ಭಾಗಿ ಆಗಲಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಪ್ರಭಾಸ್ ನಟನೆಯ ‘ಬಾಹುಬಲಿ 2’ ರಿಲೀಸ್ ಆಗಿ ಹಲವು ವರ್ಷಗಳು ಕಳೆದಿವೆ. ಇದಾದ ಬಳಿಕ ಅವರ ನಟನೆಯ ಮೂರು ಚಿತ್ರಗಳು ರಿಲೀಸ್ ಆದವು. ಆದರೆ, ಯಾವ ಚಿತ್ರದಲ್ಲೂ ಅವರಿಗೆ ಗೆಲುವು ಸಿಗಲಿಲ್ಲ. ಇದು ಪ್ರಭಾಸ್​ಗೆ ಬೇಸರ ತರಿಸಿದೆ. ‘ಸಲಾರ್’ ಮೂಲಕ ಗೆಲುವು ಪಡೆಯಲೇಬೇಕು ಎನ್ನುವ ಹಠಕ್ಕೆ ಪ್ರಭಾಸ್ ಬಿದ್ದಿದ್ದಾರೆ. ಇದಕ್ಕೆ ರಾಜಮೌಳಿ ಕೂಡ ಸಾಥ್ ನೀಡುತ್ತಿದ್ದಾರೆ. ಗೆಳೆಯನ ಸಿನಿಮಾ ಪ್ರಚಾರ ಮಾಡಲು ರಾಜಮೌಳಿ ಸಹಾಯ ಮಾಡುತ್ತಿದ್ದಾರೆ.

ಹಾಗಂತ ರಾಜಮೌಳಿ ಅವರು ತಂಡದ ಜೊತೆ ತೆರಳಿ ವೇದಿಕೆ ಹತ್ತುತ್ತಿಲ್ಲ. ಬದಲಿಗೆ, ಪ್ರಭಾಸ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಟ ಪೃಥ್ವಿರಾಜ್ ಸುಕುಮಾರನ್ ಅವರನ್ನು ರಾಜಮೌಳಿ ಸಂದರ್ಶನ ಮಾಡಲಿದ್ದಾರೆ. ಇದನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲು ಹೊಂಬಾಳೆ ಫಿಲ್ಮ್ಸ್​ ಮುಂದಾಗಿದೆ. ಈ ವೇಳೆ ಸಿನಿಮಾ ಕುರಿತ ಆಸಕ್ತಿಕರ ವಿಚಾರಗಳು ರಿವೀಲ್ ಆಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಈ ಮೊದಲು ‘ರಾಧೆ ಶ್ಯಾಮ್’ ರಿಲೀಸ್ ಸಂದರ್ಭದಲ್ಲೂ ಪ್ರಭಾಸ್ ಅವರನ್ನು ರಾಜಮೌಳಿ ಸಂದರ್ಶನ ಮಾಡಿದ್ದರು.

ಇದನ್ನೂ ಓದಿ: ‘ಆಕಾಶ ಗಡಿಯ ದಾಟಿ’ ಗೆಳೆತನವನ್ನು ಸಂಭ್ರಮಿಸುವ ‘ಸಲಾರ್’ ಹಾಡು ಬಿಡುಗಡೆ

‘ಸಲಾರ್’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಆದರೆ, ಚಿತ್ರತಂಡ ಅಂದುಕೊಂಡ ರೀತಿಯಲ್ಲಿ ಪ್ರಚಾರ ಮಾಡುತ್ತಿಲ್ಲ ಅನ್ನೋದು ಅಭಿಮಾನಿಗಳ ಆರೋಪ. ದೊಡ್ಡ ಬಜೆಟ್​ನಲ್ಲಿ ರೆಡಿ ಆಗಿರುವ ಈ ಚಿತ್ರಕ್ಕೆ ‘ಹೊಂಬಾಳೆ ಫಿಲ್ಮ್ಸ್’ ಮೂಲಕ ವಿಜಯ್ ಕಿರಗಂದೂರು ಅವರು ಬಂಡವಾಳ ಹೂಡುತ್ತಿದ್ದಾರೆ. ಪ್ರಭಾಸ್, ಪೃಥ್ವಿರಾಜ್​ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಡಿಸೆಂಬರ್ 22ರಂದು ಈ ಚಿತ್ರ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:01 am, Thu, 14 December 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು