ಭಾರತೀಯ ಸಿನಿಮಾ ಆರಂಭ ಮತ್ತು ಬೆಳವಣಿಗೆ ಬಗ್ಗೆ ಸಿನಿಮಾ ಮಾಡಲು ಮುಂದಾದ ರಾಜಮೌಳಿ
ಮಹೇಶ್ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಆ ಬಳಿಕ ಅವರು ರಾಜಮೌಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಈ ಗ್ಯಾಪ್ನಲ್ಲಿ ರಾಜಮೌಳಿ ಸಿನಿಮಾ ನಿರ್ಮಾಣ ಮಾಡುವ ಆಲೋಚನೆ ಮಾಡಿದ್ದಾರೆ. ಈ ಬಗ್ಗೆ ಶೀಘ್ರವೇ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ.

ಭಾರತೀಯ ಸಿನಿಮಾ ಜಗತ್ತು ಕಂಡ ಶ್ರೇಷ್ಠ ನಿರ್ದೇಶಕರಲ್ಲಿ ನಿರ್ದೇಶಕ ಎಸ್ಎಸ್ ರಾಜಮೌಳಿ (SS Rajamouli) ಕೂಡ ಒಬ್ಬರು. ಅವರು ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಅವರ ಸಿನಿಮಾಗಳ ಸಕ್ಸಸ್ ರೇಟ್ ಶೇ.100 ಇದೆ. ಚಿತ್ರದಿಂದ ಚಿತ್ರಕ್ಕೆ ಕಲೆಕ್ಷನ್ ಹೆಚ್ಚುತ್ತಿದೆ. ‘ಆರ್ಆರ್ಆರ್’ ಸಿನಿಮಾದ (RRR Movie) ‘ನಾಟು ನಾಟು..’ ಹಾಡಿಗೆ ಆಸ್ಕರ್ ಬಂದಿದೆ. ‘ಆರ್ಆರ್ಆರ್’ ಸಿನಿಮಾ ಬಳಿಕ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಈಗ ರಾಜಮೌಳಿ ಅವರು ಹೊಸ ಸಿನಿಮಾ ಅನೌನ್ಸ್ ಮಾಡಲು ರೆಡಿ ಆಗಿದ್ದಾರೆ. ಭಾರತೀಯ ಸಿನಿಮಾ ಇತಿಹಾಸ ಮತ್ತು ಬೆಳವಣಿಗೆ ಕುರಿತು ಈ ಚಿತ್ರ ಇರಲಿದೆ.
ಈಗಾಗಲೇ ಮಹೇಶ್ ಬಾಬು ಜೊತೆ ರಾಜಮೌಳಿ ಸಿನಿಮಾ ಮಾಡುವ ಘೋಷಣೆ ಮಾಡಿ ಆಗಿದೆ. ಹಾಗಾದರೆ ಆ ಸಿನಿಮಾ ಕೆಲಸ ಮುಂದಕ್ಕೆ ಹೋಗಲಿದೆಯೇ? ಇಲ್ಲ. ರಾಜಮೌಳಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿಲ್ಲ. ಬದಲಿಗೆ ಅದನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿ ಆಗಿದ್ದಾರೆ. ಅವರ ತಂಡ ಯಾವ ರೀತಿಯಲ್ಲಿ ಸಿನಿಮಾ ನಿರ್ಮಾಣ ಮಾಡಬಹುದು ಎನ್ನುವ ಕುತೂಹಲ ಮೂಡಿದೆ.
ಮಹೇಶ್ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಆ ಬಳಿಕ ಅವರು ರಾಜಮೌಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಈ ಗ್ಯಾಪ್ನಲ್ಲಿ ರಾಜಮೌಳಿ ಸಿನಿಮಾ ನಿರ್ಮಾಣ ಮಾಡುವ ಆಲೋಚನೆ ಮಾಡಿದ್ದಾರೆ. ಈ ಬಗ್ಗೆ ಶೀಘ್ರವೇ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ.
ಮಗ ಕಾರ್ತಿಕೇಯ ಸೇರಿ ಅನೇಕರನ್ನು ತಂಡದಲ್ಲಿ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ. ‘ಬರ್ತ್ ಆ್ಯಂಡ್ ರೈಸ್ ಆಫ್ ಇಂಡಿಯನ್ ಸಿನಿಮಾ’ ಎನ್ನುವ ಶೀರ್ಷಿಕೆ ಇಡಲು ರಾಜಮೌಳಿ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರವನ್ನು ಯಾರು ನಿರ್ದೇಶನ ಮಾಡಲಿದ್ದಾರೆ, ಪಾತ್ರವರ್ಗದಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ತಿಳಿದು ಬರಬೇಕಿದೆ.
ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ರಾಜಮೌಳಿ ನಟನೆ? ಹಿರಿದಾಗುತ್ತಿದೆ ಪ್ರಭಾಸ್ ಸಿನಿಮಾದ ಪಾತ್ರವರ್ಗ
ಭಾರತಕ್ಕೆ ಸಿನಿಮಾ ಬಂದಾಗ ಯಾವುದೂ ಸುಲಭದಲ್ಲಿ ಸಿಗುತ್ತಿರಲಿಲ್ಲ. ತಂತ್ರಜ್ಞಾನ ಕೂಡ ಮುಂದುವರಿದಿರಲಿಲ್ಲ. ಇಂಥ ಸಂದರ್ಭದಲ್ಲಿ ಸಿನಿಮಾ ಮಾಡುವುದು ಎಂದರೆ ಅದು ನಿಜಕ್ಕೂ ಚಾಲೆಂಜಿಂಗ್ ವಿಚಾರ. ಈ ಚಾಲೆಂಜ್ನ ತೆಗೆದುಕೊಂಡು ಸಿನಿಮಾ ಮಾಡಲಾಯಿತು ಅನ್ನೋದು ವಿಶೇಷ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:01 am, Tue, 19 September 23




