ಭಾರತೀಯ ಸಿನಿಮಾ ಆರಂಭ ಮತ್ತು ಬೆಳವಣಿಗೆ ಬಗ್ಗೆ ಸಿನಿಮಾ ಮಾಡಲು ಮುಂದಾದ ರಾಜಮೌಳಿ

ಮಹೇಶ್ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಆ ಬಳಿಕ ಅವರು ರಾಜಮೌಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಈ ಗ್ಯಾಪ್​ನಲ್ಲಿ ರಾಜಮೌಳಿ ಸಿನಿಮಾ ನಿರ್ಮಾಣ ಮಾಡುವ ಆಲೋಚನೆ ಮಾಡಿದ್ದಾರೆ. ಈ ಬಗ್ಗೆ ಶೀಘ್ರವೇ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ.  

ಭಾರತೀಯ ಸಿನಿಮಾ ಆರಂಭ ಮತ್ತು ಬೆಳವಣಿಗೆ ಬಗ್ಗೆ ಸಿನಿಮಾ ಮಾಡಲು ಮುಂದಾದ ರಾಜಮೌಳಿ
ರಾಜಮೌಳಿ

Updated on: Sep 19, 2023 | 7:02 AM

ಭಾರತೀಯ ಸಿನಿಮಾ ಜಗತ್ತು ಕಂಡ ಶ್ರೇಷ್ಠ ನಿರ್ದೇಶಕರಲ್ಲಿ ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಕೂಡ ಒಬ್ಬರು. ಅವರು ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಅವರ ಸಿನಿಮಾಗಳ ಸಕ್ಸಸ್ ರೇಟ್ ಶೇ.100 ಇದೆ. ಚಿತ್ರದಿಂದ ಚಿತ್ರಕ್ಕೆ ಕಲೆಕ್ಷನ್ ಹೆಚ್ಚುತ್ತಿದೆ. ‘ಆರ್​ಆರ್​ಆರ್​’ ಸಿನಿಮಾದ (RRR Movie) ‘ನಾಟು ನಾಟು..’ ಹಾಡಿಗೆ ಆಸ್ಕರ್ ಬಂದಿದೆ. ‘ಆರ್​ಆರ್​ಆರ್​’ ಸಿನಿಮಾ ಬಳಿಕ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಈಗ ರಾಜಮೌಳಿ ಅವರು ಹೊಸ ಸಿನಿಮಾ ಅನೌನ್ಸ್​ ಮಾಡಲು ರೆಡಿ ಆಗಿದ್ದಾರೆ. ಭಾರತೀಯ ಸಿನಿಮಾ ಇತಿಹಾಸ ಮತ್ತು ಬೆಳವಣಿಗೆ ಕುರಿತು ಈ ಚಿತ್ರ ಇರಲಿದೆ.

ಈಗಾಗಲೇ ಮಹೇಶ್ ಬಾಬು ಜೊತೆ ರಾಜಮೌಳಿ ಸಿನಿಮಾ ಮಾಡುವ ಘೋಷಣೆ ಮಾಡಿ ಆಗಿದೆ. ಹಾಗಾದರೆ ಆ ಸಿನಿಮಾ ಕೆಲಸ ಮುಂದಕ್ಕೆ ಹೋಗಲಿದೆಯೇ? ಇಲ್ಲ. ರಾಜಮೌಳಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿಲ್ಲ. ಬದಲಿಗೆ ಅದನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿ ಆಗಿದ್ದಾರೆ. ಅವರ ತಂಡ ಯಾವ ರೀತಿಯಲ್ಲಿ ಸಿನಿಮಾ ನಿರ್ಮಾಣ ಮಾಡಬಹುದು ಎನ್ನುವ ಕುತೂಹಲ ಮೂಡಿದೆ.

ಮಹೇಶ್ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಆ ಬಳಿಕ ಅವರು ರಾಜಮೌಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಈ ಗ್ಯಾಪ್​ನಲ್ಲಿ ರಾಜಮೌಳಿ ಸಿನಿಮಾ ನಿರ್ಮಾಣ ಮಾಡುವ ಆಲೋಚನೆ ಮಾಡಿದ್ದಾರೆ. ಈ ಬಗ್ಗೆ ಶೀಘ್ರವೇ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ.

ಮಗ ಕಾರ್ತಿಕೇಯ ಸೇರಿ ಅನೇಕರನ್ನು ತಂಡದಲ್ಲಿ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ. ‘ಬರ್ತ್​ ಆ್ಯಂಡ್ ರೈಸ್ ಆಫ್ ಇಂಡಿಯನ್ ಸಿನಿಮಾ’ ಎನ್ನುವ ಶೀರ್ಷಿಕೆ ಇಡಲು ರಾಜಮೌಳಿ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.  ಈ ಚಿತ್ರವನ್ನು ಯಾರು ನಿರ್ದೇಶನ ಮಾಡಲಿದ್ದಾರೆ, ಪಾತ್ರವರ್ಗದಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ತಿಳಿದು ಬರಬೇಕಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ರಾಜಮೌಳಿ ನಟನೆ? ಹಿರಿದಾಗುತ್ತಿದೆ ಪ್ರಭಾಸ್​ ಸಿನಿಮಾದ ಪಾತ್ರವರ್ಗ

ಭಾರತಕ್ಕೆ ಸಿನಿಮಾ ಬಂದಾಗ ಯಾವುದೂ ಸುಲಭದಲ್ಲಿ ಸಿಗುತ್ತಿರಲಿಲ್ಲ. ತಂತ್ರಜ್ಞಾನ ಕೂಡ ಮುಂದುವರಿದಿರಲಿಲ್ಲ. ಇಂಥ ಸಂದರ್ಭದಲ್ಲಿ ಸಿನಿಮಾ ಮಾಡುವುದು ಎಂದರೆ ಅದು ನಿಜಕ್ಕೂ ಚಾಲೆಂಜಿಂಗ್ ವಿಚಾರ. ಈ ಚಾಲೆಂಜ್​ನ ತೆಗೆದುಕೊಂಡು ಸಿನಿಮಾ ಮಾಡಲಾಯಿತು ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published On - 7:01 am, Tue, 19 September 23