SS Rajamouli: ​ಅಮೆರಿಕಾದಲ್ಲಿ ‘ಆರ್​ಆರ್​ಆರ್’ಗೆ ವಿಶೇಷ ಮನ್ನಣೆ: ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್​ 'ಆರ್​ಆರ್​ಆರ್'​ ಚಿತ್ರಕ್ಕೆ ಎಸ್​ಎಸ್​​ ರಾಜಮೌಳಿ ಅವರಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ನೀಡಿದೆ.

SS Rajamouli: ​ಅಮೆರಿಕಾದಲ್ಲಿ 'ಆರ್​ಆರ್​ಆರ್'ಗೆ ವಿಶೇಷ ಮನ್ನಣೆ: ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ
ಎಸ್​ಎಸ್​​ ರಾಜಮೌಳಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Dec 03, 2022 | 11:27 AM

ಟಾಲಿವುಡ್​​ನ ಜನಪ್ರಿಯ ನಿರ್ದೇಶಕ ಎಸ್​ಎಸ್​ ರಾಜಮೌಳಿ (ss rajamouli). ‘ಆರ್​ಆರ್​ಆರ್’ (RRR) ​​ನಂತಹ ದೊಡ್ಡ ಬಜೆಟ್​​ನ ಸಿನಿಮಾ ಮಾಡಿ ಇಡೀ ವಿಶ್ವವೇ ಒಂದು ಬಾರಿ ತಿರುಗಿ ನೋಡುವಂತೆ ಮಾಡಿದ ವ್ಯಕ್ತಿ. ‘ಆರ್​ಆರ್​ಆರ್’​ ಸಿನಿಮಾ ತೆರೆಗೆ ಬಂದು ತಿಂಗಳುಗಳೇ ಕಳೆದಿವೆ. ಆದರೂ ಅದರ ಹವಾ ಮಾತ್ರ ನಿಂತಿಲ್ಲ. ಒಂದಿಲ್ಲೊಂದು ದಾಖಲೆಗಳನ್ನು ಮಾಡುತ್ತಲೇ ಇದೆ. ಸದ್ಯ ‘ಆರ್​ಆರ್​ಆರ್’​ ಸಿನಿಮಾದ ನಿರ್ದೇಶಕರಿಗೆ ಪ್ರಶಸ್ತಿ ಹುಡುಕಿಕೊಂಡು ಬಂದಿದೆ. ‘ಆರ್‌ಆರ್‌ಆರ್’ ಸಿನಿಮಾ ಅಂತರರಾಷ್ಟ್ರೀಯ ಪ್ರಶಸ್ತಿ ಸರ್ಕ್ಯೂಟ್‌ನಲ್ಲಿ ತನ್ನ ಖಾತೆಯನ್ನು ತೆರೆದಿದೆ. ಆ ಮೂಲಕ ಎಸ್​ಎಸ್​​ ರಾಜಮೌಳಿ ಅವರು ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್‌ (New York Film Critics Circle) ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಶುಕ್ರವಾರ (ಡಿ.2) ನಡೆದ ಕಾರ್ಯಮದಲ್ಲಿ ಎಸ್​ಎಸ್​​ ರಾಜಮೌಳಿ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಈ ನ್ಯೂ ಯಾರ್ಕ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್‌ 1935ರಲ್ಲಿ ಸ್ಥಾಪನೆಯಾದ ಅಮೆರಿಕಾದ ಅತ್ಯಂತ ಹಳೆಯ ವಿಮರ್ಶಕರ ಗುಂಪುಗಳಲ್ಲಿ ಒಂದು. ಈ ತಂಡದಲ್ಲಿ ಪತ್ರಿಕೆ, ನಿಯತಕಾಲಿಕೆ ಮತ್ತು ಆನ್​ಲೈನ್​ ಪ್ರಕಟಣಾ ಸದಸ್ಯರನ್ನು ಹೊಂದಿದೆ.

‘ಆರ್​ಆರ್​ಆರ್’ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ಜೂನಿಯರ್ ಎನ್​ಟಿಆರ್​, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್, ಶ್ರಿಯಾ ಶರಣ್​ ಮತ್ತು ಇತರೆ ಸಹಕಲಾವಿದರು ನಟಿಸಿದ್ದಾರೆ. ಮಾರ್ಚ್ 2022 ರಲ್ಲಿ ಬಿಡುಗಡೆಯಾದ ‘RRR’ ಚಿತ್ರ ಇಬ್ಬರು ತೆಲುಗು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮರಂ ಭೀಮ್ ಅವರ ಪಾತ್ರಗಳನಿಟ್ಟುಕೊಂಡು ಮಾಡಿದ ಆಧರಿಸಿದ ಕಾಲ್ಪನಿಕ ಕಥೆಯಾಗಿದೆ. ಈ ಚಿತ್ರ ವಿಶ್ವಾದ್ಯಂತ 1200 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿತ್ತು.

ಇದನ್ನೂ ಓದಿ: RRR: ಆಸ್ಕರ್​ ಪ್ರಶಸ್ತಿ ಪಡೆಯುತ್ತಾ ‘ಆರ್​ಆರ್​​ಆರ್​’ ಸಿನಿಮಾ? ಜಾಗತಿಕ ಮಟ್ಟದಲ್ಲಿ ರಾಜಮೌಳಿ ಚಿತ್ರದ ಬಗ್ಗೆ ಚರ್ಚೆ

‘ಆರ್​ಆರ್​ಆರ್’ ಚಿತ್ರ ಭಾರಿ ಯಶಸ್ಸಿನ ಹೊರತಾಗಿಯೂ ಆಸ್ಕರ್​ 2023ಕ್ಕೆ ಆಯ್ಕೆ ಮಾಡಲಾಗಿಲ್ಲ. ಹೀಗಿರುವಾಗ ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ಈ ಕುರಿತಾಗಿ ಟ್ವೀಟ್​ ಮಾಡಿದ್ದರು.  ‘ಫಾರ್ ಯುವರ್ ಕನ್ಸಿಡರೇಷನ್’ ಅಭಿಯಾನದ ಅಡಿಯಲ್ಲಿ 14 ವಿಭಾಗಗಳಲ್ಲಿ ‘RRR’ ಚಿತ್ರಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು. ಅತ್ಯುತ್ತಮ ಚಿತ್ರ (ಡಿವಿವಿ ದಾನಯ್ಯ), ಅತ್ಯುತ್ತಮ ನಿರ್ದೇಶಕ (ಎಸ್‌ಎಸ್ ರಾಜಮೌಳಿ), ಅತ್ಯುತ್ತಮ ನಟ (ಜೂನಿಯರ್ ಎನ್‌ಟಿಆರ್ ಮತ್ತು ರಾಮ್ ಚರಣ್), ಅತ್ಯುತ್ತಮ ಪೋಷಕ ನಟ (ಅಜಯ್ ದೇವಗನ್), ಅತ್ಯುತ್ತಮ ಪೋಷಕ ನಟಿ (ಆಲಿಯಾ ಭಟ್) ಸೇರಿದಂತೆ ಹಲವು ವಿಭಾಗಗಳನ್ನು ಪರಿಗಣಿಸಲು ಆರ್‌ಆರ್‌ಆರ್ ತಂಡ ತಿಳಿಸಿತ್ತು.

ಆಸ್ಕರ್​ ಪ್ರಶಸ್ತಿ ಗೆಲ್ಲಬೇಕು ಎಂದರೆ ಒಂದಷ್ಟು ನಿಯಮಗಳನ್ನು ಪಾಲಿಸಲೇಬೇಕಾಗುತ್ತದೆ. ಆ ನಿಯಮಗಳ ಅನುಸಾರ ತಯಾರಾದ ಚಿತ್ರವನ್ನು ಆಯ್ಕೆ ಮಾಡಿ ಭಾರತದಿಂದ ಒಂದು ಸಿನಿಮಾವನ್ನು ಕಳಿಸಲಾಗುತ್ತದೆ. ಅದಕ್ಕಾಗಿ ಪ್ರತ್ಯೇಕ ಸಮಿತಿ ಕೂಡ ರಚನೆ ಮಾಡಲಾಗಿರುತ್ತದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:26 am, Sat, 3 December 22

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?